ಕನ್ನಡಪ್ರಭ ವಾರ್ತೆ ಆಲೂರುಕೇಂದ್ರ ಹಾಗೂ ರಾಜ್ಯ ಸರ್ಕಾರದ ಸೌಲಭ್ಯಗಳನ್ನು ಸಾಮಾನ್ಯ ಜನರ ಮನೆ ಬಾಗಿಲಿಗೆ ತಲುಪಿಸುವುದಕ್ಕೆ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ. ಎಸ್ ಲತಕುಮಾರಿ ಹೇಳಿದರು.ತಾಲೂಕಿನ ಕೆಂಚಮ್ಮನ ಹೊಸಕೋಟೆಯ ಹೋಬಳಿಯ ಹರಿಹಳ್ಳಿ ಗ್ರಾಮದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಕೆಂಚಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವಿಯ ದರ್ಶನ ಪಡೆದು ಬಳಿಕ ಮಾತನಾಡಿದರು. ಈ ದೇವಾಲಯ ಜಿಲ್ಲೆಯಲ್ಲಿ ಅತ್ಯಂತ ಪ್ರಮುಖ ದೇವಾಲಯಗಳಲ್ಲಿ ಒಂದಾಗಿದೆ ದೇವರಲ್ಲಿ ಪ್ರಾರ್ಥಿಸಿದ್ದೇನೆ. ಜಿಲ್ಲೆಯಲ್ಲಿ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದ ವರ್ಗದ ಜನರು ಹೆಚ್ಚಾಗಿದ್ದಾರೆ. ಅವರೆಲ್ಲರ ಆರ್ಥಿಕ ಬೆಳವಣಿಗೆ ಸಹಕಾರಿಯಾಗುವ ಹಾಗೇ ಜಿಲ್ಲಾಡಳಿತದಿಂದ ಸಹಕಾರ ಮತ್ತು ಕ್ರಮ ಕೈಗೊಳ್ಳಲಾಗುವುದು ಎಂದ ಅವರು ಸರ್ಕಾರಿ ಸವಲತ್ತುಗಳು ನಿಗದಿತ ಸಮಯಕ್ಕೆ ತಲುಪಿಸುವುಕ್ಕೆ ಅಧಿಕಾರಿಗಳ ಸಹಕಾರ ಅಗತ್ಯ. ಇದಕ್ಕೆ ಜನರು ಹಾಗೂ ಸಿಬ್ಬಂದಿ ಸಹಕಾರ ನೀಡಬೇಕು ಎಂದು ಹೇಳಿದರು.ಇದೇ ವೇಳೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ದಾಸೋಹ ಸಮಿತಿಯಿಂದ ಜಿಲ್ಲಾಧಿಕಾರಿಗೆ ಸ್ವಾಗತ ಕೋರಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ತಹಸೀಲ್ದಾರ್‌ ಮಲ್ಲಿಕಾರ್ಜುನ್, ಕೆಂಚಮ್ಮ ಹೊಸಕೋಟೆಯ ಹೋಬಳಿಯ ರಾಜಸ್ವ ನಿರೀಕ್ಷಕ ಗೋವಿಂದರಾಜು, ಕೆಂಚಾಂಬಾ ದೇವಸ್ಥಾನದ ಪ್ರಧಾನ ಅರ್ಚಕ ಎಚ್ಎನ್ ರಾಮಸ್ವಾಮಿ, ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷ ಗೋಪಾಲ್, ರಘು ದಾಸೋಹ ಸಮಿತಿಯ ಸದಸ್ಯರಾದ ಕುಮಾರಸ್ವಾಮಿ, ಅಶೋಕ್, ಸತ್ಯನಾರಾಯಣ್ ಸೇರಿದಂತೆ ಮುಂತಾದವರು ಹಾಜರಿದ್ದರು