ಸಾರಾಂಶ
ತುಮಕೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಜಿಲ್ಲೆಯಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಮೀಕ್ಷಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ತುಮಕೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಜಿಲ್ಲೆಯಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಮೀಕ್ಷಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬುಧವಾರ ಅವರು ತುಮಕೂರಿನ ಸದಾಶಿವನಗರ ಹಾಗೂ ಸರಸ್ವತಿಪುರಂ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯವನ್ನು ಪರಿಶೀಲಿಸಿದ ಅವರು, ಗಣತಿದಾರರು ಮನೆ-ಮನೆಗೆ ತೆರಳಿ ಮಾಹಿತಿಯನ್ನು ನಿಖರವಾಗಿ ದಾಖಲಿಸುತ್ತಿರುವುದನ್ನು ಗಮನಿಸಿದರು. ಸಮೀಕ್ಷೆಯ ವೇಳೆ ಎದುರಾಗುವ ತಾಂತ್ರಿಕ ಸಮಸ್ಯೆಗಳ ಕುರಿತು ಗಣತಿದಾರರೊಂದಿಗೆ ಚರ್ಚಿಸಿ, ಸಮೀಕ್ಷಾ ಕಾರ್ಯವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕೆಂದು ನಿರ್ದೇಶಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಘುಚಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಹನುಮಂತಪ್ಪ, ಹಿಂದುಳಿದ ವರ್ಗಗಳ ಇಲಾಖೆ ತಾಲೂಕು ಅಧಿಕಾರಿ ರಂಗಸ್ವಾಮಿ ಸೇರಿದಂತೆ ಮತ್ತಿತರ ಗಣತಿದಾರರು ಉಪಸ್ಥಿತರಿದ್ದರು.