ಸಾರಾಂಶ
ಹೊಸಕೋಟೆ: ಜಿಲ್ಲಾ ಕೇಂದ್ರ ಬ್ಯಾಂಕುಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ತಾಲೂಕು ಸಹಕಾರ ಸಂಘಗಳ ಗೆಲುವೇ ಕಾರಣ ಎಂದು ಶಾಸಕ ಶರತ್ ಬಚ್ಚೆಗೌಡ ತಿಳಿಸಿದರು.
ನಗರದಲ್ಲಿ ಹೊಸಕೋಟೆ ಟೌನ್ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಚುನಾವಣಾ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜನವರಿ ೫ ಹೊಸಕೋಟೆ ಟೌನ್ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಚುನಾವಣೆಗೆ 12 ಸದಸ್ಯರು ಸ್ಪರ್ಧಿಸಲಿದ್ದಾರೆ. ಡಿಸಿಸಿ ಬ್ಯಾಂಕ್ ನಲ್ಲಿ ಮತ್ತಷ್ಟು ಹಿಡಿತ ಸಾಧಿಸಲು 12ಕ್ಕೆ 12 ಸದಸ್ಯರನ್ನು ಗೆಲ್ಲಿಸಲು ಕಾರ್ಯಕರ್ತರು ಮತದಾರರಿಗೆ ಸಂಘದ ಅಭಿವೃದ್ಧಿ ಕೆಲಸಗಳನ್ನು ಮನವರಿಕೆ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಪೂಜೇನ ಅಗ್ರಹಾರ ಕೃಷ್ಣಮೂರ್ತಿ ಮಾತನಾಡಿ, 2024-25ರ ಸಾಲಿಗೆ ಅಭ್ಯರ್ಥಿಗಳ ಆಯ್ಕೆಗೆ 12 ನಾಮಪತ್ರ ಸಲ್ಲಿಸಿದ್ದೇವೆ. ನಮ್ಮಸಂಘ 1983ರಿಂದ ರೈತರ ಸೇವಾ ಸಹಕಾರ ಎಂದು ಪ್ರಾರಂಭಗೊಂಡು 25 ವರ್ಷಗಳಿಂದ ರೇಷ್ಮೆ ಬೆಳೆಗಾರರರು, ರೈತರ ಅಬಿವೃದ್ಧಿಗೆ ಶ್ರಮಿಸುತ್ತಿದೆ. ಮತ್ತಷ್ಟು ಜನ ಪರ ಕೆಲಸ ಮಾಡಲು ನಮ್ಮ ತಂಡಕ್ಕೆ ಆಶೀರ್ವಾದ ಮಾಡಬೇಕು ಎಂದರು.
ಟೌನ್ ಕಾಂಗ್ರೆಸ್ ಅಧ್ಯಕ್ಷ ಬಿವಿ.ಭೈರೇಗೌಡ ಮಾತನಾಡಿ, 15 ವರ್ಷ ನಮ್ಮ ಬಳಿಯೇ ಇದ್ದು ಅಧಿಕಾರ ಅನುಭವಿಸಿದ ವ್ಯಕ್ತಿ ಈಗ ಬಿಜೆಪಿಗೆ ಹೋಗಿ ನಮ್ಮ ವಿರುದ್ಧವಾಗಿಯೇ ಚುನಾವಣೆಗೆ ನಿಂತಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳಿಗೆ ಗ್ರಾಮಗಳಲ್ಲಿ ಸಮಬಲ ಇದೆ ಎಂದು ಮತದಾರರ ದಿಕ್ಕು ತಪ್ಪಿಸುತ್ತಿದ್ದಾರೆ. ಆದ್ದರಿಂದ ಕಾರ್ಯಕರ್ತರು ಈ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಬಮುಲ್ ನಿರ್ದೇಶಕ ಹುಲ್ಲೂರು ಸಿ.ಮಂಜುನಾಥ್ ಹೆಸರೇಳದೆ ಕಾರ್ಯಕರ್ತರಿಗೆ ಸಲಹೆ ನೀಡಿದರು.ಸಭೆಯಲ್ಲಿ ರಾಜ್ಯ ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕ ಬಿ.ಎನ್.ಗೋಪಾಲಗೌಡ ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಭೈರೇಗೌಡ, ಬಮುಲ್ ನಿರ್ದೇಶಕ ಎಲ್‌ಎನ್‌ಟಿ ಮಂಜುನಾಥ್, ಟಿಎಪಿಸಿಎಂಎಸ್ ಅಧ್ಯಕ್ಷ ಮುತ್ಸಂದ್ರ ಬಾಬುರೆಡ್ಡಿ, ಬಿಎಂಆರ್‌ಡಿಎ ಸದಸ್ಯ ಡಾ.ಎಚ್.ಎಂ.ಸುಬ್ಬರಾಜ್, ಜಿಪಂ ಮಾಜಿ ಅಧ್ಯಕ್ಷ ಸಿ.ಮುನಿಯಪ್ಪ, ಯುವ ಮುಖಂಡ ಬಿ.ಜಿ.ನಾರಾಯಣಗೌಡ ಇತರರು ಹಾಜರಿದ್ದರು.
ಫೋಟೋ : 28 ಹೆಚ್‌ಎಸ್‌ಕೆ3ಹೊಸಕೋಟೆ ಟೌನ್ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಚುನಾವಣಾ ಪೂರ್ವ ಭಾವಿ ಸಭೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರ ಪರ ಶಾಸಕ ಶರತ್ ಬಚ್ಚೇಗೌಡ ಮತಯಾಚಿಸಿದರು.