ಚಿಕ್ಕಮಗಳೂರುಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಆಡಳಿತ ಮಂಡಳಿ 13 ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ಪ್ರಕ್ರಿಯೆ ಜ. 2 ರಿಂದಲೇ ಆರಂಭಗೊಂಡಿದ್ದು, ನಾಮಪತ್ರ ಸಲ್ಲಿಕೆಗೆ ಜ. 9 ಕೊನೆ ದಿನ.
- ಸಿ.ಟಿ.ರವಿ, ಎಸ್.ಎಲ್. ಭೋಜೇಗೌಡ ರಿಂದ ನಾಮಪತ್ರ ಸಲ್ಲಿಕೆ, ಇಂದು ಉಮೇದುವಾರಿಕೆ ಸಲ್ಲಿಕೆಗೆ ಕೊನೆ ದಿನ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಆಡಳಿತ ಮಂಡಳಿ 13 ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ಪ್ರಕ್ರಿಯೆ ಜ. 2 ರಿಂದಲೇ ಆರಂಭಗೊಂಡಿದ್ದು, ನಾಮಪತ್ರ ಸಲ್ಲಿಕೆಗೆ ಜ. 9 ಕೊನೆ ದಿನ.
ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಹಿಂಪಡೆಯುವ ದಿನದ ಅವಧಿ ಹಾಗೂ ಚುನಾವಣಾ ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳ ಪ್ರಕಟಣೆ ದಿನದ ಸಮಯ ವಿಸ್ತರಿಸಿ ಡಿಸಿಸಿ ಬ್ಯಾಂಕ್ ಚುನಾವಣಾಧಿ ಕಾರಿಗಳು ಹಾಗೂ ಉಪ ವಿಭಾಗಾಧಿಕಾರಿ ಆದೇಶ ಹೊರಡಿಸಿದ್ದಾರೆ. ನಾಮಪತ್ರ ಹಿಂಪಡೆಯಲು ಜ.11ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆವರೆಗೆ ಇದ್ದ ಅವಧಿಯನ್ನು ಮಧ್ಯಾಹ್ನ 3 ಗಂಟೆ ವರೆಗೆ ವಿಸ್ತರಿಸಲಾಗಿದ್ದರೆ ಚುನಾವಣಾ ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳ ಪಟ್ಟಿಯನ್ನು ಜ.11 ರಂದು ಮಧ್ಯಾಹ್ನ 3 ಗಂಟೆ ನಂತರ ಪ್ರಕಟಿಸಲಾಗುವುದು. ಈ ಮೊದಲು ಅಂದು ಮಧ್ಯಾಹ್ನ 2 ಗಂಟೆ ನಂತರ ಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.ಜ. 17ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಚುನಾವಣೆ ನಡೆಯಲಿದ್ದು, ಬಳಿಕ ಮತ ಎಣಿಕೆ ಕಾರ್ಯ ನಡೆಯಲಿದೆ. ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮತದಾನ ಮಾಡಲು ಜಿಲ್ಲೆಯ 322 ಸಹಕಾರ ಸಂಘಗಳು ಅರ್ಹತೆ ಪಡೆದಿವೆ.ಬಿಜೆಪಿ- ಜೆಡಿಎಸ್ ದೋಸ್ತಿ
ಕಳೆದ ಲೋಕಸಭಾ ಚುನಾವಣೆಯಲ್ಲಿ ನಡೆಸಿದ ಬಿಜೆಪಿ - ಜೆಡಿಎಸ್ ದೋಸ್ತಿ ಸಹಕಾರ ಕ್ಷೇತ್ರದ ಚುನಾವಣೆಯಲ್ಲೂ ಮುಂದುವರಿದಿದೆ. ಚಿಕ್ಕಮಗಳೂರು ಜಿಲ್ಲಾ ಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿ 13 ನಿರ್ದೇಶಕರ ಸ್ಥಾನಗಳಿಗೆ ಉಭಯ ಪಕ್ಷಗಳಿಂದ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ. ಒಟ್ಟು 13 ಸ್ಥಾನಗಳ ಪೈಕಿ ಜೆಡಿಎಸ್ 2 ಕ್ಷೇತ್ರಗಳಿಂದ ಸ್ಪರ್ಧೆ ಮಾಡುತ್ತಿದ್ದರೆ, ಇನ್ನುಳಿದ 11 ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಟ್ಟಿದೆ. ಹಾಗಾಗಿ ವಿಧಾನಪರಿಷತ್ ಸದಸ್ಯರಾದ ಸಿ.ಟಿ. ರವಿ ಹಾಗೂ ಎಸ್.ಎಲ್. ಭೋಜೇಗೌಡ ಗುರುವಾರ ನಿರ್ದೇಶಕರ ಸ್ಥಾನಗಳಿಗೆ ನಾಮಪತ್ರ ಸಲ್ಲಿಸಿದರು. ಸಿ.ಟಿ. ರವಿ ಇದೇ ಮೊದಲ ಬಾರಿಗೆ ಡಿಸಿಸಿ ಬ್ಯಾಂಕಿನ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧೆ ಮಾಡಿರುವುದು ಕುತೂಹಲ ಮೂಡಿಸಿದೆ. -- ಬಾಕ್ಸ್ -----ಬಿಜೆಪಿ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಸಮನ್ವಯ ಸಮಿತಿ ರಚಿಸಿಕೊಂಡು ಸಭೆ ನಡೆಸಲಾಗಿದೆ. ಎರಡೂ ಪಕ್ಷಗಳ ಮುಖಂಡರು ಸೇರಿ ಬಿಜೆಪಿ 11 ಕ್ಷೇತ್ರದಲ್ಲಿ ಮತ್ತು ಜೆಡಿಎಸ್ 2 ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ನಿರ್ಣಯಿಸಿ ತೀರ್ಮಾನ ಕೈಗೊಳ್ಳಲಾಗಿದೆ. ಮೊದಲ ಬಾರಿಗೆ 1991 ರಲ್ಲಿ ಆಲ್ದೂರು ಸಹಕಾರ ಸಂಘದ ನಿರ್ದೇಶಕರ ಆಯ್ಕೆಯಾಗಿದೆ. ತಾವು ಬೇರೆ ಬೇರೆ ಕಾರಣಗಳಿಂದ ಅದರಲ್ಲಿ ಮುಂದುವರಿಯಲು ಸಾಧ್ಯವಾಗಿರಲಿಲ್ಲ. ನನ್ನ ರಾಜಕೀಯ ಜೀವನ ಪ್ರಾರಂಭ ವಾಗಿದ್ದೇ ಸಹಕಾರಿ ಕ್ಷೇತ್ರದ ಮೂಲಕ. ನಿರ್ದೇಶಕರ ಅಪೇಕ್ಷೆ ಮತ್ತು ಪಕ್ಷದ ನಿರ್ಣಯದಂತೆ ತಾವು ಸ್ಪರ್ಧೆ ಮಾಡಿದ್ದು, ಇದರಲ್ಲಿ ವೈಯಕ್ತಿಕ ಆಕಾಂಕ್ಷೆ ಏನೂ ಇಲ್ಲ. ಭೂತ್ ರಾಜಕಾರಣದಿಂದ ರಾಷ್ಟ್ರ ರಾಜಕಾರಣಕ್ಕೆ ರಾಜಕೀಯ ಮಾಡಿರುವುದಾಗಿ ತಿಳಿಸಿದರು.- ಸಿ.ಟಿ. ರವಿ
ವಿಧಾನಪರಿಷತ್ ಸದಸ್ಯರು--- ಬಾಕ್ಸ್ ----
ಬಿಜೆಪಿ ಮತ್ತು ಜೆಡಿಎಸ್ ಚಿಕ್ಕಮಗಳೂರಿನಲ್ಲಿ ಬಾಂಧವ್ಯ ಅಬಾಧಿತವಾಗಿದ್ದು, ಇದೊಂದೇ ಚುನಾವಣೆ ಅಲ್ಲ, ಮುಂದಿನ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಒಟ್ಟಾಗಿ ಎದುರಿಸುತ್ತೇವೆ. ಸಹಕಾರಿ ಕ್ಷೇತ್ರ ರೈತ ಸಮುದಾಯದ ಸಂಸ್ಥೆಯಾಗಿದ್ದು, ಪುರೋಭಿವೃದ್ಧಿಗಾಗಿ ಒಗ್ಗಟ್ಟಾಗಿ ಚುನಾವಣೆ ನಡೆಸಲು ನಿರ್ಧರಿಸಿದ್ದೇವೆ.ಸಮನ್ವಯ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಂಡಂತೆ ಜೆಡಿಎಸ್‌ಗೆ 2, ಬಿಜೆಪಿಗೆ 11 ಸ್ಥಾನ ಸ್ಪರ್ಧೆ ಮಾಡಲು ಅವಕಾಶ ವಿದ್ದು, ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ವಿಧಾನ ಪರಿಷತ್ ಉಪ ಸಭಾಪತಿಯಾಗಿದ್ದ ಎಸ್.ಎಲ್. ಧರ್ಮೇಗೌಡ ಪ್ರತಿನಿಧಿಸುತ್ತಿದ್ದ ಹಾಲು ಉತ್ಪಾದಕರ ಸಹಕಾರಿ ಕ್ಷೇತ್ರದಿಂದ ಅವರ ಮಗ ಸೋನಾಲ್ ನಾಮಪತ್ರ ಸಲ್ಲಿಸುತ್ತಿದ್ದಾರೆ.- ಎಸ್.ಎಲ್. ಭೋಜೇಗೌಡ
ವಿಧಾನಪರಿಷತ್ ಸದಸ್ಯರು--
ಕಾಂಗ್ರೆಸ್ ಕಾರ್ಯಕರ್ತನನ್ನು ಕಾಂಗ್ರೆಸ್‌ನವರೇ ಹತ್ಯೆ ಮಾಡಿದ್ದಾರೆ: ಸಿ.ಟಿ. ರವಿಚಿಕ್ಕಮಗಳೂರು: ಬಳ್ಳಾರಿ ಘಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನನ್ನು ಕಾಂಗ್ರೆಸ್‌ನವರೇ ಹತ್ಯೆ ಮಾಡಿ ಬಿಜೆಪಿ ತಲೆಗೆಕಟ್ಟುವ ಷಡ್ಯಂತ್ರ ನಡೆದಿದ್ದು, ಮಾಧ್ಯಮದವರು ಬಿಡುಗಡೆ ಮಾಡಿದ ವಿಡಿಯೋ ತುಣುಕು ಇಲ್ಲದಿದ್ದರೆ ಬಿಜೆಪಿ ಇದರ ಹೊಣೆ ಹೊರ ಬೇಕಾಗಿತ್ತು. ಆದರೆ, ಈ ಘಟನೆಯನ್ನು ರಾಜ್ಯಸರ್ಕಾರ ಗಂಭೀರವಾಗಿ ಪರಿಗಣಿಸಲಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಘಟನೆ ಸಮಗ್ರ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿದರು. ಹುಬ್ಬಳ್ಳಿಯಲ್ಲಿ ನಡೆದಿರುವ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವ ಅಮಾನವೀಯ ಘಟನೆಯಾಗಿದೆ. ಪೊಲೀಸರೇ ನಿಮ್ಮ ಬಳಿಯೂ ಬಾಡಿ ಕ್ಯಾಮರಾ ಇರುತ್ತಲ್ಲ ತೋರಿಸಿ, ಆಕೆ ತಾನೇ ವಿವಸ್ತ್ರಗೊಳ್ಳಲು ಪ್ರಯತ್ನಿಸಿದ್ದರೆ, ನಿಮ್ಮ ಎದೆಯ ಮೇಲೆ ಮೈಕ್ರೋ ಕ್ಯಾಮರಾ ಇರುತ್ತಲ್ಲ ತೋರಿಸಿ. ನಿಮ್ಮ ದೌರ್ಜನ್ಯ ಸಂತ್ರಸ್ತೆ ತಲೆಗೆ ಕಟ್ಟಿ ನೀವು ಬಚಾವಾಗಲು ಬಯಸಿದ್ದೀರಾ ಎಂದರು.ಮಹಿಳೆಯನ್ನು ವಿವಸ್ತ್ರಗೊಳಿಸಿರುವುದು ಸರಿಯಲ್ಲ, ಸಂತ್ರಸ್ಥೆ ಮೇಲೆ ಹಾಕಿರುವ ಕೇಸುಗಳನ್ನು ವಾಪಾಸ್ ತೆಗೆದು, ಮಹಿಳೆಗೆ ನ್ಯಾಯ ಒದಗಿಸಬೇಕು, ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ಇಡೀ ಪ್ರಕರಣವನ್ನು ಸಮಗ್ರ ತನಿಖೆ ನಡೆಸ ಬೇಕೆಂದು ಒತ್ತಾಯಿಸಿದರು.
--8 ಕೆಸಿಕೆಎಂ 3ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಅವರು ಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಕ್ಕೆ ಗುರುವಾರ ನಾಮಪತ್ರ ಸಲ್ಲಿಸಿದರು.
8 ಕೆಸಿಕೆಎಂ 4ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಕ್ಕೆ ಗುರುವಾರ ನಾಮಪತ್ರ ಸಲ್ಲಿಸಿದರು.