ರಾಜ್ಯದಲ್ಲಿ ಡಿಸಿಸಿ ಬ್ಯಾಂಕ್ ಗೆ ಎರಡನೇ ಸ್ಥಾನ: ಡಿ ಎಸ್ ಸುರೇಶ್

| Published : Dec 08 2024, 01:18 AM IST

ಸಾರಾಂಶ

ಅಜ್ಜಂಪುರ, ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ರಾಜ್ಯದಲ್ಲಿ 2ನೇ ಸ್ಥಾನ ಪಡೆದಿದೆ ಎಂದು ಮಾಜಿ ಶಾಸಕ ಹಾಗೂ ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ. ಎಸ್. ಸುರೇಶ್ ಹೇಳಿದರು.

ಬುಕ್ಕಂಬೂದಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಉದ್ಘಾಟನೆ

ಕನ್ನಡಪ್ರಭ ವಾರ್ತೆ, ಅಜ್ಜಂಪುರ

ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ರಾಜ್ಯದಲ್ಲಿ 2ನೇ ಸ್ಥಾನ ಪಡೆದಿದೆ ಎಂದು ಮಾಜಿ ಶಾಸಕ ಹಾಗೂ ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ. ಎಸ್. ಸುರೇಶ್ ಹೇಳಿದರು.

ಬುಕ್ಕಂಬೂದಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಉದ್ಘಾಟಿಸಿ ಮಾತನಾಡಿ, ನಾವು ಅಧಿಕಾರ ವಹಿಸಿಕೊಂಡ ಮೇಲೆ ತರೀಕೆರೆ ಮತ್ತು ಅಜ್ಜಂಪುರ ಭಾಗದ ಸೊಸೈಟಿಗಳಿಗೆ ಅತಿ ಹೆಚ್ಚು ಸಾಲ ವಿತರಣೆ ಮಾಡಿದ್ದು ₹4 ಕೋಟಿ ಮಂಜೂರಾಗಿದೆ. ಫೆಬ್ರವರಿ ತಿಂಗಳಲ್ಲಿ ತಾಲೂಕಿನ ಎಲ್ಲಾ ಸಂಘಗಳಿಗೆ ಮೂಲಭೂತ ಸೌಕರ್ಯಕ್ಕಾಗಿ ತಲಾ ₹2 ಲಕ್ಷದಂತೆ ಬಿಡುಗಡೆ ಮಾಡಲಾಗುವುದು ಎಂದರು.

ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಆರ್.ಆನಂದಪ್ಪ ಮಾತನಾಡಿ ಸಂಘದ ಏಳಿಗೆ ಮತ್ತು ಯಶಸ್ಸಿಗೆ ಆಡಳಿತ ಮಂಡಳಿ ಮತ್ತು ನೌಕರರ ವರ್ಗದ ಸದಸ್ಯರನ್ನುವಿಶ್ವಾಸಕ್ಕೆ ತೆಗೆದುಕೊಂಡು ಸಮತೋಲನ ಆಡಳಿತ ನಡೆಸುವುದರಿಂದ ಸಂಘದ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದರು. ನಮ್ಮ ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ತಾರತಮ್ಯವಿಲ್ಲದೆ ಎಲ್ಲಾ ಸಂಘಗಳಿಗೆ ಸಮಾನ ಅನುದಾನ ಹಂಚಿಕೆ ಮಾಡಿದ್ದಾರೆ. ನೂತನ ಕಟ್ಟಡ ತುಂಬಾ ಸುಂದರ ಮತ್ತು ಸುಸಜ್ಜಿತವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ತರಿಕೆರೆ- ಅಜ್ಜಂಪುರ ತಾಲೂಕಿನ ಸಂಘದ ಮಾಜಿ ಮತ್ತು ಹಾಲಿ ನಿರ್ದೇಶಕರು, ಕಾರ್ಯದರ್ಶಿಗಳನ್ನು ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಗಿರೀಶ್ ಚವಾಣ್, ಮಾಜಿ ಉಪಾಧ್ಯಕ್ಷ ಟಿ.ಎಲ್ .ರಮೇಶ್, ಅಜ್ಜಂಪುರ ತಾಲೂಕಿನ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಂಜುಂಡಪ್ಪ, ಪ್ರಭಾರಿ ಸಿಇಒ ಸತೀಶ್, ಕಾರ್ಯದರ್ಶಿ ಕರಿಬಸಪ್ಪ, ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ. ಸಿ. ತಿಮ್ಮಯ್ಯ , ಸಹಕಾರ ಸಂಘದ ಸದಸ್ಯರು, ಸಾರ್ವಜನಿಕರು ಭಾಗವಹಿಸಿದ್ದರು.