ಕುಕ್ಕೆ ಸುಬ್ರಹ್ಮಣ್ಯಕ್ಕೆ ಡಿಸಿಎಂ ಡಿಕೆಶಿ ಭೇಟಿ, ವಿಶೇಷ ಪೂಜೆ ಸಲ್ಲಿಕೆ

| Published : Mar 27 2024, 01:07 AM IST

ಕುಕ್ಕೆ ಸುಬ್ರಹ್ಮಣ್ಯಕ್ಕೆ ಡಿಸಿಎಂ ಡಿಕೆಶಿ ಭೇಟಿ, ವಿಶೇಷ ಪೂಜೆ ಸಲ್ಲಿಕೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ. ಅದರೊಂದಿಗೆ ದೇವರ ಆಶೀರ್ವಾದ ಬೇಡಲು ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ಶೃಂಗೇರಿ, ಗೌರಿಗದ್ದೆ, ಗೋಕರ್ಣ ಮುಂತಾದ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುವ ಉದ್ದೇಶ ನಮ್ಮದಾಗಿದೆ ಎಂದು ಡಿಕೆಶಿ ಹೇಳಿದರು.

ಕನ್ನಡಪ್ರಭ ವಾರ್ತೆ ಸುಬ್ರಹ್ಮಣ್ಯ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ನಂತರ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ. ಅದರೊಂದಿಗೆ ದೇವರ ಆಶೀರ್ವಾದ ಬೇಡಲು ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ಶೃಂಗೇರಿ, ಗೌರಿಗದ್ದೆ, ಗೋಕರ್ಣ ಮುಂತಾದ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುವ ಉದ್ದೇಶ ನಮ್ಮದಾಗಿದೆ. ನಮಗೆ ದೇವರಲ್ಲಿ ಸಂಪೂರ್ಣ ನಂಬಿಕೆ ಇದೆ ಧರ್ಮದ ಬಗ್ಗೆ ಕೂಡ ನಂಬಿಕೆ ಇದೆ ಎಂದರು. ಈ ಹಿಂದೆ ನಡೆದ ರಾಜ್ಯ ಅಸೆಂಬ್ಲಿ ಚುನಾವಣೆಯಲ್ಲಿ ಕೂಡ ದೇವರು ನಮ್ಮನ್ನ ಕೈ ಬಿಡದೆ ಒಳ್ಳೆಯದನ್ನೇ ಮಾಡಿದ್ದಾರೆ. ರಾಜ್ಯದ ಜನತೆಗೆ ಒಳ್ಳೆಯದಾಗಲಿ ಎಂದರು.

ನಕ್ಸಲರ ಶಂಕೆ ಇರುವ ಕೂಜಿಮಲೆ ಹಾಗೂ ಐನೆಕಿದು ಗ್ರಾಮಗಳ ಮನೆಗಳಿಗೆ ಭೇಟಿ ನೀಡಿದ ಡಿಕೆಸಿ, ಈ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ. ಕೋವಿ ಪರವಾನಗಿ ಇರುವಂತವರು ಠಾಣೆಗೆ ಕೋವಿ ಠೇವಣಿ ಮಾಡಬೇಕೋ ಬೇಡವೋ ಎನ್ನುವ ಬಗ್ಗೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಲ್ಲಿ ಚರ್ಚಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ, ಕಡಬ ಬ್ಲಾಕ್ ಸುಧೀರ್ ಕುಮಾರ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಭರತ್ ಮುಂಡೋಡಿ, ಧನಂಜಯ ಅಡ್ಪಂಗಾಯ, ಮಮತಾ ಗಟ್ಟಿ, ಅಶೋಕ್ ನೆಕ್ರಾಜೆ, ಪಿಪಿ ವರ್ಗೀಸ್, ಮಾಧವ ದೇವರಗದ್ದೆ, ಕೃಷ್ಣಪ್ಪ ಜಿ., ಪ್ರದೀಪ್ ಕಳಿಗೆ, ದಿನೇಶ್ ಮಡ್ತಿಲ, ಹರೀಶ್ ಇಂಜಾಡಿ, ರಾಜೀವ್ ರೈ, ವಿಜಯಕುಮಾರ ಸೊರಕೆ, ವಿಮಲ ರಂಗಯ್ಯ, ಸರಸ್ವತಿ ಕಾಮತ್, ಶಿವರಾಮ ರೈ, ಕೃಷ್ಣಮೂರ್ತಿ ಭಟ್, ಸುರೇಶ್ ಭಟ್, ಪವನ್ ಎಂ.ಡಿ, ಮನೋಜ್ ಕೈಕಂಬ, ಗೋಪಾಲ್ ಎಣ್ಣೆಮಜಲು ಮುಂತಾದವರು ಹಾಜರಿದ್ದರು.