ರಾಜ್ಯದಲ್ಲಿ ಇರುವ ಬಹುತೇಕ ಮಳೆಮಾಪನ ಯಂತ್ರಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಇದರಿಂದ ನಮಗೆ ಮಳೆ ಪ್ರಮಾಣದ ಪರಿಪೂರ್ಣ ಸತ್ಯಾಂಶ ತಿಳಿಯುವಲ್ಲಿ ತೊಂದರೆ ಆಗುತ್ತಿದೆ. ಮುಂದಿನ ದಿನಗಳಲ್ಲಿ ಪ್ರತಿಯೊಂದು ಮಾಪನವನ್ನು ದುರಸ್ತಿ ಮಾಡುವ ಕೆಲಸವನ್ನು ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಡಿಸಿಎಂ ಡಾ. ಜಿ ಪರಮೇಶ್ವರ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಕುಣಿಗಲ್

ಕುಣಿಗಲ್ ತಾಲೂಕಿನಲ್ಲಿ ಬರ ಅಧ್ಯಯನ ಪ್ರವಾಸ ಮುಗಿಸಿ ನಂತರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಶಾಸಕರ ಜೊತೆಗೂಡಿ ಮುಖ್ಯಮಂತ್ರಿಗಳ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿ ನಂತರ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.

ಮುಖ್ಯಮಂತ್ರಿಗಳು ಪ್ರಜಾ ಸೇವೆ ಎಂಬ ಹೊಸ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದಾರೆ ಅದರಿಂದ ಸಾಮಾಜಿಕ ಜನರು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಕೆಲಸ ಸುಲಭ ಆಗಲಿದೆ ಅಧಿಕಾರಿಗಳು ಅದಕ್ಕೆ ಸ್ಪಂದಿಸಬೇಕಾಗಿದೆ ಕ್ರಮ ಜರುಗಿಸಲು ಸರ್ಕಾರ ಸಿದ್ದವಿದೆ ಎಂದರು.ರಾಜ್ಯದಲ್ಲಿ ಬರ ಈ ಬಾರಿ ಅತಿಯಾದ ಬರ ಉಂಟಾಗಲಿದೆ ಎದುರಿಸಲು ಅಧಿಕಾರಿಗಳು ಸಿದ್ಧರಾಗಬೇಕು. ನಾನು ಪಾವಗಡ, ಬಾಗಲಕೋಟೆ , ಕೊಪ್ಪಳ ಸೇರಿದಂತೆ ವಿವಿಧ ಭಾಗಗಳಲ್ಲಿ ಬರ ಅಧ್ಯಯನ ಮಾಡಿದ್ದೇನೆ. ಇದೀಗ ಕುಣಿಗಲ್ ತಾಲೂಕಿನ ವಿವಿಧ ಭಾಗಗಳಲ್ಲಿ ಬರ ಅಧ್ಯಯನ ನಡೆಸಿದ್ದು ಇಲ್ಲಿನ ಹಲವಾರು ಅಡಿಕೆ ತೆಂಗು ಒಣಗಿದೆ. ಕುಡಿವ ನೀರು ಜಾನುವಾರುಗಳಿಗೆ ಮೇವಿನ ಸಮಸ್ಯೆ ಸೇರಿದಂತೆ ಇತರ ಸಮಸ್ಯೆಗಳು ಉಂಟಾಗಿದ್ದು ಅಧಿಕಾರಿಗಳು ತಮ್ಮ ಕೇಂದ್ರ ಸ್ಥಳದಲ್ಲಿ ಇದ್ದು ಬರವನ್ನು ಎದುರಿಸಬೇಕು ಎಂದರು. ಬರಗಾಲದ ಹಿನ್ನೆಲೆಯಲ್ಲಿ ಜನರು ಗುಳೆ ಹೋಗುವುದು ಸಾಮಾನ್ಯ ಸಂಗತಿ ಯಾಗಿದೆ ಅದಕ್ಕಾಗಿ ಜಿ ರಾಮ್ ಜಿ ಯೋಜನೆಯಲ್ಲಿ ಸ್ಥಳೀಯವಾಗಿ ಹಲವಾರು ಕಾಮಗಾರಿಗಳು ಸೇರಿದಂತೆ ಇತರ ಕಾರ್ಯಕ್ರಮಗಳನ್ನು ರೈತರಿಗೆ ನೀಡುವ ಮುಖಾಂತರ ಜನ ಗುಳೆ ಹೋಗುವುದನ್ನು ತಡೆಯಬೇಕೆಂದರು.

ಈ ಸಂದರ್ಭದಲ್ಲಿ ಕುಣಿಗಲ್ ಶಾಸಕ ಡಾ. ರಂಗನಾಥ್, ಡಿಸಿ ಶುಭಕಲ್ಯಾಣ್ ಸೇರಿದಂತೆ ತಾಲೂಕಿನ ವಿವಿಧ ಅಧಿಕಾರಿಗಳು ಇದ್ದರು.