ಸವದತ್ತಿ: ಡಿಸಿಎಂ ಡಿ.ಕೆ.ಶಿವಕುಮಾರ ಅವರ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ ಪ್ರಯಾಣಿಸುತ್ತಿದ್ದ ಕಾರು ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಅಪಘಾತಕ್ಕೀಡಾಗಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ. ಸವದತ್ತಿ ಹೊರಭಾಗದ ಸವದತ್ತಿ -ಬೆಳಗಾವಿ ರಸ್ತೆಯ ನಿಕ್ಕಂ ಕಲ್ಯಾಣ ಮಂಟಪದ ಬಳಿ ಗುರುವಾರ ರಾತ್ರಿ ದುರ್ಘಟನೆ ಸಂಭವಿಸಿದೆ.
ಸವದತ್ತಿ: ಡಿಸಿಎಂ ಡಿ.ಕೆ.ಶಿವಕುಮಾರ ಅವರ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ ಪ್ರಯಾಣಿಸುತ್ತಿದ್ದ ಕಾರು ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಅಪಘಾತಕ್ಕೀಡಾಗಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ. ಸವದತ್ತಿ ಹೊರಭಾಗದ ಸವದತ್ತಿ -ಬೆಳಗಾವಿ ರಸ್ತೆಯ ನಿಕ್ಕಂ ಕಲ್ಯಾಣ ಮಂಟಪದ ಬಳಿ ಗುರುವಾರ ರಾತ್ರಿ ದುರ್ಘಟನೆ ಸಂಭವಿಸಿದೆ.ಸವದತ್ತಿ ಪಟ್ಟಣದ ನಿವಾಸಿ ಮಂಜುನಾಥ್ ಬೈರ್ನಟ್ಟಿ(30) ಮೃತಪಟ್ಟ ಬೈಕ್ ಸವಾರ. ಅಪಘಾತದಲ್ಲಿ ಡಿಸಿಎಂ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ ಸೇರಿ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಧಾರವಾಡದ ಆಸ್ಪತ್ರೆಗೆ ರವಾನಿಸಲಾಗಿದೆ. ಮಂಜುನಾಥ್ ಬೈರ್ನಟ್ಟಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಯ ಉದ್ಯೋಗಿಯಾಗಿದ್ದು, ಬೈಕ್‌ನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ತೀವ್ರ ರಕ್ತಸ್ರಾವವಾಗಿ ಮಂಜುನಾಥ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಪಘಾತದ ರಭಸಕ್ಕೆ ಕಾರ್ ಕೂಡ ಪಲ್ಟಿಯಾಗಿದ್ದು, ಕಾರ್ ಚಾಲಕ ಹಾಗೂ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ ಕೂಡ ಗಾಯಗೊಂಡಿದ್ದಾರೆ. ಈ ಕುರಿತು ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.