ಸಾರಾಂಶ
ಚನ್ನಪಟ್ಟಣ: ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಕ್ರವಾರ ಬಿರುಸಿನ ಪ್ರಚಾರ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಸ್ವಗ್ರಾಮ ಚಕ್ಕೆರೆ, ಹೊನ್ನಾಯಕನಹಳ್ಳಿ, ನಾಗವಾರ, ಮಾಕಳಿ, ಮೈಲನಾಯಕನಹಳ್ಳಿ, ರಾಂಪುರ, ನಗರದ ಕೋಟೆ ಮಾರಮ್ಮನ ದೇವಸ್ಥಾನದ ಬಳಿ ಮಂಗಳವಾರಪೇಟೆಯ ಬಸವನಗುಡಿ ಹಾಗೂ ರಾಜಾಕೆಂಪೇಗೌಡ ಬಡಾವಣೆಯಲ್ಲಿ ಕಾಂಗ್ರೆಸ್ ಸಭೆಯಲ್ಲಿ ಭಾಗಿಯಾಗುವ ಮೂಲಕ ಬಿರುಸಿನ ಪ್ರಚಾರ ನಡೆಸಿದರು.

ಈ ವೇಳೆ ಸಚಿವರಾದ ರಾಮಲಿಂಗಾರೆಡ್ಡಿ. ಸುಧಾಕರ್, ಮಂಕಾಳವೈದ್ಯ, ದಿನೇಶ್ ಗುಂಡೂರಾವ್, ಸಂಸದ ಶ್ರೇಯಸ್ ಪಟೇಲ್, ಶಾಸಕರಾದ ಬಾಲಕೃಷ್ಣ,ಶ್ರೀನಿವಾಸ್, ಕದಲೂರು ಉದಯ್, ರಂಗನಾಥ್, ಮಾಜಿ ಶಾಸಕ ಎಂ.ಸಿ.ಅಶ್ವತ್ಥ್, ಒಕ್ಕಲಿಗರ ಸಂಘದ ನಿರ್ದೇಶಕ ಉಮಾಪತಿಗೌಡ, ಚಿತ್ರನಟ ಸಾಧುಕೋಕಿಲ ಸೇರಿದಂತೆ ಅನೇಕ ಕಾಂಗ್ರೆಸ್ ಸಚಿವರು, ಶಾಸಕರು ಹಾಜರಿದ್ದರು.ಪೊಟೋ೮ಸಿಪಿಟಿ೮: ಮೈಲನಾಯಕಹಳ್ಳಿಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯನ್ನು ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.ಪೊಟೋ೮ಸಿಪಿಟಿ೯: ತಾಲೂಕಿನ ಚಕ್ಕೆರೆ ಗ್ರಾಮದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಜನ.