ಸಾರಾಂಶ
ಬೆಂಗಳೂರಿನ ನೈಸ್ ರಸ್ತೆ ಜಂಕ್ಷನ್‌ನಲ್ಲಿರುವ ಪಾರ್ಟಿ ಹಾಲ್‌ನಲ್ಲಿ ನಡೆದ ಸಭೆಯಲ್ಲಿ ಲೋಕ ಚುನಾವಣೆಯಂತೆ ಮುಂಬರುವ ಉಪಚುನಾವಣೆಯಲ್ಲೂ ಸಹ ಒಟ್ಟಾಗಿ ಕೆಲಸ ಮಾಡುವಂತೆ ಸಲಹೆ ನೀಡಿದ್ದಾರೆ.
ಚನ್ನಪಟ್ಟಣ: ಲೋಕಸಭಾ ಚುನಾವಣೆ ಸಮಯದಲ್ಲಿ ಹಾಗೂ ಇತ್ತೀಚೆಗೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಬಿಜೆಪಿ- ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರಿನಲ್ಲಿ ಅದ್ಧೂರಿ ಔತಣ ನೀಡಿದ್ದಾರೆ.
ಬೆಂಗಳೂರಿನ ನೈಸ್ ರಸ್ತೆ ಜಂಕ್ಷನ್‌ನಲ್ಲಿರುವ ಪಾರ್ಟಿ ಹಾಲ್‌ನಲ್ಲಿ ನಡೆದ ಸಭೆಯಲ್ಲಿ ಲೋಕ ಚುನಾವಣೆಯಂತೆ ಮುಂಬರುವ ಉಪಚುನಾವಣೆಯಲ್ಲೂ ಸಹ ಒಟ್ಟಾಗಿ ಕೆಲಸ ಮಾಡುವಂತೆ ಸಲಹೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸಭೆಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಸೇರ್ಪಡೆಗೊಂಡ ಎಲ್ಲರಿಗೂ ಮತ್ತೊಮ್ಮೆ ಸ್ವಾಗತ. ಮುಂದಿನ ದಿನಗಳಲ್ಲಿ ಎಲ್ಲರೂ ಒಗ್ಗೂಡಿ ಕೆಲಸ ಮಾಡೋಣವೆಂದು ತಿಳಿಸಿದ್ದಾರೆಂದು ತಿಳಿದು ಬಂದಿದೆ. ಸಭೆಯಲ್ಲಿ ಇತ್ತೀಚೆಗೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಚನ್ನಪಟ್ಟಣದ ನೂರಾರು ಕಾರ್ಯಕರ್ತರು, ಮುಖಂಡರು ಭಾಗಿಯಾಗಿದ್ದರು. ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಶಾಸಕ ಎಚ್.ಸಿ. ಬಾಲಕೃಷ್ಣ, ಎಂಎಲ್‌ಸಿ ರವಿ ಸೇರಿ ಅನೇಕ ಮುಖಂಡರು ಉಪಸ್ಥಿತರಿದ್ದರು.