ಕೊಪ್ಪಳದಲ್ಲಿ ರಾಗಿ ಮಾಲ್ಟ್ ಯೋಜನೆಗೆ ಡಿಡಿಪಿಐ ಚಾಲನೆ

| Published : Feb 23 2024, 01:47 AM IST

ಸಾರಾಂಶ

ರಾಗಿ ಮಾಲ್ಟ್ ನೀಡುವ ಯೋಜನೆ ಜಾರಿಯಾಗಿದೆ. ಮಕ್ಕಳಲ್ಲಿರುವ ಅಪೌಷ್ಟಿಕತೆ ಹೋಗಲಾಡಿಸಲು ಇದು ಸಹಾಯಕ ಯೋಜನೆಯಾಗಿದೆ.

ಕೊಪ್ಪಳ: ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತೆಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಯಲ್ಲಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಹಾಲಿನ ಜೊತೆಯಲ್ಲಿ ರಾಗಿ ಮಾಲ್ಟ್ ನೀಡುವ ಯೋಜನೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಎಸ್.ಎಸ್. ಬಿರಾದಾರ ನಗರದ ಸಿಪಿಎಸ್ ಶಾಲೆಯಲ್ಲಿ ಚಾಲನೆ ನೀಡಿದರು.ಶಾಲಾ ಶಿಕ್ಷಣ ಮತ್ತು ಸಾಕ್ಷರತೆಯ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಬಿರಾದಾರ ಮಾತನಾಡಿ, ಸರ್ಕಾರಿ ಮತ್ತು ಅನುದಾನಿತ ಶಾಲೆಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈಗಾಗಲೇ ಮಧ್ಯಾಹ್ನದ ಬಿಸಿಯೂಟದ ಜೊತೆಯಲ್ಲಿ ವಾರದಲ್ಲಿ 5 ದಿನ ಕ್ಷೀರಭಾಗ್ಯ ಯೋಜನೆಯಡಿ ಹಾಲು ನೀಡಲಾಗುತ್ತಿದೆ. ಜತೆಗೆ ರಾಗಿ ಮಾಲ್ಟ್ ನೀಡುವ ಯೋಜನೆ ಜಾರಿಯಾಗಿದೆ. ಮಕ್ಕಳಲ್ಲಿರುವ ಅಪೌಷ್ಟಿಕತೆ ಹೋಗಲಾಡಿಸಲು ಇದು ಸಹಾಯಕ ಯೋಜನೆಯಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ಸರಿಯಾದ ರೀತಿಯಲ್ಲಿ ಸರ್ಕಾರದ ಯೋಜನೆ ಬಳಿಸಿಕೊಳ್ಳಬೇಕು ಎಂದು ಹೇಳಿದರು.ಕಾರ್ಯಕ್ರಮದ ಕುರಿತು ಅಕ್ಷರ ದಾಸೋಹ ಅಧಿಕಾರಿ ಅನಿತಾ ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯ ಎಂ.ಡಿ. ಗುಲಾಮಹುಸೇನ ವಹಿಸಿದ್ದರು.ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶಂಕ್ರಯ್ಯಾ ಟಿ.ಎಸ್., ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ, ತಾಪಂ ಅಧಿಕಾರಿ ಮಹೇಶ, ಕ್ಷೇತ್ರ ಸಮ್ವಯಾಧಿಕಾರಿ ಪ್ರಕಾಶ ತಗಡಿನಮನಿ, ತಾಲೂಕು ಅಕ್ಷರ ದಾಸೋಹ ಅಧಿಕಾರಿ ಹನುಮಂತಪ್ಪ, ದೈಹಿಕ ಶಿಕ್ಷಣಾಧಿಕಾರಿ ಬಸವರಾಜ, ಶಿಕ್ಷಣ ಸಂಯೋಜಕ ಬೀಮಪ್ಪ ಹೂಗಾರ ಇದ್ದರು.ಕಾರ್ಯಕ್ರಮವನ್ನು ಶಿಕ್ಷಕರಾದ ಮೊಹಮ್ಮದ ಆಬೀದ್‌ ಹುಸೇನ ಅತ್ತಾರ ನಿರೂಪಿಸಿದರು.ಶಿಕ್ಷಕರಾದ ವಿರುಪಾಕ್ಷಪ್ಪ ಬಾಗೋಡಿ ಸ್ವಾಗತಿಸಿ, ನಾಗಪ್ಪ ನರಿ ವಂದಿಸಿದರು.