ಸಾರಾಂಶ
ಕ್ರೀಡೆಯಲ್ಲಿ ಆರೋಗ್ಯಕರ ಸ್ಪರ್ಧೆ ಇರಬೇಕು. ಅದರೊಂದಿಗೆ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಜಯಶಾಲಿಗಳಾಗಿ ಸಾಧನೆ ಮಾಡಬೆಕು. ಕ್ರೀಡೆಯಲ್ಲಿ ಮುಖ್ಯವಾಗಿ ಸ್ನೇಹಭಾವನೆ ವೃದ್ಧಿಸಿಕೊಳ್ಳುವುದು ಅಗತ್ಯ. ಇದರ ಜೊತೆಗೆ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಆರೋಗ್ಯಕರ ಪೈಪೋಟಿ ನಡೆಸಲು ಸಾಧ್ಯವಾಗುತ್ತದೆ.
ಕನ್ನಡಪ್ರಭ ವಾರ್ತೆ ಮಂಡ್ಯ
ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಂಡು ಕ್ರೀಡೆಯನ್ನು ಸ್ನೇಹದ ರೀತಿಯಲ್ಲಿ ನೋಡುತ್ತಾ ಭಾಗವಹಿಸಬೇಕು. ಆ ಮೂಲಕ ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದತ್ತ ಗುರಿ ಇಟ್ಟುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವರಾಮೇಗೌಡ ತಿಳಿಸಿದರು.ಶ್ರೀಲಕ್ಷ್ಮಿ ಜನಾರ್ಧನ ಶಿಕ್ಷಣ ಸಮಿತಿ ಟ್ರಸ್ಟ್, ಶಾಲಾ ಶಿಕ್ಷಣ ಇಲಾಖೆ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಮಂಡ್ಯ ನಗರ ಎರಡನೇ ವೃತ್ತ ಮಟ್ಟದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಮಾತನಾಡಿದರು.
ಕ್ರೀಡೆಯಲ್ಲಿ ಆರೋಗ್ಯಕರ ಸ್ಪರ್ಧೆ ಇರಬೇಕು. ಅದರೊಂದಿಗೆ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಜಯಶಾಲಿಗಳಾಗಿ ಸಾಧನೆ ಮಾಡಬೆಕು. ಕ್ರೀಡೆಯಲ್ಲಿ ಮುಖ್ಯವಾಗಿ ಸ್ನೇಹಭಾವನೆ ವೃದ್ಧಿಸಿಕೊಳ್ಳುವುದು ಅಗತ್ಯ. ಇದರ ಜೊತೆಗೆ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಆರೋಗ್ಯಕರ ಪೈಪೋಟಿ ನಡೆಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಿಸಿದರು.ಶ್ರೀಲಕ್ಷ್ಮಿ ಜನಾರ್ಧನ ಶಿಕ್ಷಣ ಟ್ರಸ್ಟ್ ಅಧ್ಯಕ್ಷೆ ಅಂಜನಾ ಕಾರ್ಯಕ್ರಮ ಉದ್ಘಾಟಿಸಿದರು. ಟ್ರಸ್ಟಿಗಳಾದ ಹಾಲಹಳ್ಳಿ ಅಶೋಕ್, ಡಾ. ಬಿ.ಕೆ.ಸುರೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವು, ಮುಖ್ಯ ಶಿಕ್ಷಕರಾದ ಚಂದ್ರಮ್ಮ, ಧನಲಕ್ಷ್ಮೀ, ಪದ್ಮಾ ಶ್ರೀನಿವಾಸ್, ಆಶಾಲತಾ ಹಾಗೂ ದೈಹಿಕ ಶಿಕ್ಷಣ ಇಲಾಖೆ ಶಿಕ್ಷಕರು ಹಾಜರಿದ್ದರು.
;Resize=(128,128))
;Resize=(128,128))