ಸಾರಾಂಶ
ಆರು ದಿನಗಳ ಹಿಂದೆ ಕಾವೇರಿ ನದಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡ ಸರ್ಕಾರಿ ನೌಕರನ ಮೃತದೇಹ ಸೋಮವಾರ ಪತ್ತೆಯಾಗಿದೆ.
ಕನ್ನಡಪ್ರಭ ವಾರ್ತೆ ಕುಶಾಲನಗರ
ಕಳೆದ ಆರು ದಿನಗಳ ಹಿಂದೆ ಕಾವೇರಿ ನದಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡ ಸರ್ಕಾರಿ ನೌಕರ ಅರುಣ್ ಮೃತ ದೇಹ ಸೋಮವಾರ ಮಧ್ಯಾಹ್ನ ಪತ್ತೆಯಾಗಿದೆ.ಮಡಿಕೇರಿ ಉಪವಿಭಾಗಾಧಿಕಾರಿಗಳ ಕಚೇರಿ ಪ್ರಥಮ ದರ್ಜೆ ಸಹಾಯಕ ಅರುಣ್ ನದಿಗೆ ಹಾರಿದ್ದು ಕಳೆದ ಆರು ದಿನಗಳಿಂದ ಎನ್ ಡಿ ಆರ್ ಎಫ್, ಅಗ್ನಿಶಾಮಕ ತಂಡ, ಪೊಲೀಸ್ ಇಲಾಖೆ ಮತ್ತು ದುಬಾರೆ ರಾಪ್ಟರ್ ತಂಡದಿಂದ ಶೋಧ ಕಾರ್ಯ ನಡೆದಿತ್ತು.
ನದಿಗೆ ಹಾರಿದ ಸ್ಥಳದಿಂದ ಸುಮಾರು 10 ಕಿಮೀ ದೂರದ ಕೂಡುಮಂಗಳೂರು ಬಳಿ ನದಿ ಬದಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಮೃತನ ಸಂಬಂಧಿಕರು ಮೃತ ದೇಹವನ್ನು ಗುರುತಿಸಿದ್ದು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು.ನಂತರ ವಾರಸುದಾರರಿಗೆ ಶವವನ್ನು ಹಸ್ತಾಂತರಿಸಲಾಯಿತು. ಅರುಣ್ ಮೂಲತಃ ಮಂಡ್ಯ ಜಿಲ್ಲೆಯ ಕೊತ್ನಹಳ್ಳಿ ಗ್ರಾಮದ ನಿವಾಸಿಯಾಗಿದ್ದು ಅಲ್ಲಿಗೆ ಕುಟುಂಬಸ್ಥರು ಸಾಗಿಸಿದರು. ಅರುಣ್ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.