ಸಾರಾಂಶ
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಜಲ ಸಂಪನ್ಮೂಲ ಇಲಾಖೆ ಮತ್ತು ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್ ಅವರು ಹಾಗೂ ಕಾವೇರಿ ಜಲ ನಿಗಮ ನಿಯಮಿತದ ಅಧಿಕಾರಿಗಳು ಭಾಗವಹಿಸಿದ್ದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಅಪೂರ್ಣಗೊಂಡಿರುವ ಭಾಗಮಂಡಲ ಮೇಲ್ಸೇತುವೆ ಕಾಮಗಾರಿ ಯನ್ನ ಜನವರಿ ತಿಂಗಳಾಂತ್ಯಕ್ಕೆ ಮುಗಿಸುವಂತೆ ಕಾವೇರಿ ಜಲ ನಿಗಮ ನಿಯಮಿತದ ಅಧಿಕಾರಿಗಳಿಗೆ ಗಡುವು ನಿಗದಿಗೊಳಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದ್ದಾರೆ.ಸಚಿವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಜಲ ಸಂಪನ್ಮೂಲ ಇಲಾಖೆ ಮತ್ತು ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್ ಅವರು ಹಾಗೂ ಕಾವೇರಿ ಜಲ ನಿಗಮ ನಿಯಮಿತದ ಅಧಿಕಾರಿಗಳು ಭಾಗವಹಿಸಿದ್ದರು.
ಹಲವಾರು ವರ್ಷಗಳಿಂದ ಈ ಸೇತುವೆಯ ಕಾಮಗಾರಿ ನಡೆಯುತ್ತಿದೆ. ಆದರೆ, ಇದುವರೆಗೂ ಪೂರ್ಣಗೊಳಿಸಲಾಗಿಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ಇದನ್ನ ಶೀಘ್ರವಾಗಿ ಸಿದ್ಧಗೊಳಿಸುವ ಅವಶ್ಯಕತೆಯಿದೆ. ಅಂತಿಮ ಹಂತದ ಕಾಮಗಾರಿಯನ್ನ ಮುಗಿಸುವ ಅವಶ್ಯಕತೆಯಿದ್ದು, ತಿಂಗಳಾಂತ್ಯದ ಒಳಗೆ ಕಾಮಗಾರಿ ಮುಗಿಸವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.ಜಲ ಸಂಪನ್ಮೂಲ ಇಲಾಖೆ ಮತ್ತು ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್ ಮಾತನಾಡಿ, ಅಧಿಕಾರಿಗಳು ಕಾಮಗಾರಿಯನ್ನ ಮುಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರತಿ ದಿನ ಕಾಮಗಾರಿ ಪ್ರಗತಿಯ ವರದಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.