ಮನುಷ್ಯರಿಗೆ ಕ್ಯಾನ್ಸರ್ ಸೇರಿ ಮಾರಕ ಕಾಯಿಲೆಗಳು ಹೆಚ್ಚುತ್ತಿವೆ: ಬೆನ್ನೂರ್

| Published : Feb 05 2025, 12:35 AM IST

ಮನುಷ್ಯರಿಗೆ ಕ್ಯಾನ್ಸರ್ ಸೇರಿ ಮಾರಕ ಕಾಯಿಲೆಗಳು ಹೆಚ್ಚುತ್ತಿವೆ: ಬೆನ್ನೂರ್
Share this Article
  • FB
  • TW
  • Linkdin
  • Email

ಸಾರಾಂಶ

ದೇಶದಲ್ಲಿ ಪ್ರತಿ ವರ್ಷ 10 ಲಕ್ಷಕ್ಕೂ ಹೆಚ್ಚು ಜನರು ಹೊಸದಾಗಿ ಕ್ಯಾನ್ಸರ್ ರೋಗಿಗಳ ಸಾಲಿಗೆ ಸೇರುತ್ತಿದ್ದಾರೆ. ಕೆಲವೊಂದು ರೋಗ ವೈದ್ಯ ಲೋಕಕ್ಕೆ ಸವಾಲಾಗಿವೆ. ಮನುಷ್ಯ ಆಧುನಿಕನಾದಂತೆ ಆತನ ಮಾನಸಿಕ ಹಾಗೂ ದೈಹಿಕ ಸ್ವಾಸ್ಥ್ಯ ಹಾಳಾಗುತ್ತಿದೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಬದಲಾದ ಕೃಷಿ, ಆಹಾರ ಪದ್ಧತಿ ಜೊತೆಗೆ ದೈಹಿಕ ಚಟುವಟಿಕೆ ಇಲ್ಲದ ಕಾರಣ ಮನುಷ್ಯರಿಗೆ ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗಳು ಹೆಚ್ಚುತ್ತಿವೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ್ ಹೇಳಿದರು.

ತಾಲೂಕಿನ ಬಸ್ತಿಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಆಯುಷ್ಮಾನ್ ಆರೋಗ್ಯ ಮಂದಿರದಿಂದ ಆಯೋಜಿಸಿದ್ದ ವಿಶ್ವ ಕ್ಯಾನ್ಸರ್ ಜಾಗೃತಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇಶದಲ್ಲಿ ಪ್ರತಿ ವರ್ಷ 10 ಲಕ್ಷಕ್ಕೂ ಹೆಚ್ಚು ಜನರು ಹೊಸದಾಗಿ ಕ್ಯಾನ್ಸರ್ ರೋಗಿಗಳ ಸಾಲಿಗೆ ಸೇರುತ್ತಿದ್ದಾರೆ. ಕೆಲವೊಂದು ರೋಗ ವೈದ್ಯ ಲೋಕಕ್ಕೆ ಸವಾಲಾಗಿವೆ. ಮನುಷ್ಯ ಆಧುನಿಕನಾದಂತೆ ಆತನ ಮಾನಸಿಕ ಹಾಗೂ ದೈಹಿಕ ಸ್ವಾಸ್ಥ್ಯ ಹಾಳಾಗುತ್ತಿದೆ ಎಂದರು.

ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್ ಮಾತನಾಡಿ, ತಂಬಾಕು, ಮದ್ಯಪಾನದಿಂದ ದೂರವಿರುವುದು, ಶಿಸ್ತು ಬದ್ಧ ಜೀವನ ಶೈಲಿ, ಪೌಷ್ಟಿಕ ಆಹಾರ ಸೇವನೆ, ವೈಯಕ್ತಿಕ ಶುಚಿತ್ವ, ಆರೋಗ್ಯಕರ ಅಭ್ಯಾಸ, ಪ್ರತಿನಿತ್ಯ ವ್ಯಾಯಾಮ, ದೈಹಿಕವಾಗಿ ಸದಾ ಚಟುವಟಿಕೆಯಿಂದ ಇದ್ದರೆ ಇಂತಹ ರೋಗಗಳಿಂದ ದೂರ ಇರಬಹುದು ಎಂದು ಕಿವಿಮಾತು ಹೇಳಿದರು.

ಸಮುದಾಯ ಆರೋಗ್ಯಾಧಿಕಾರಿ ಅರುಣಾಕ್ಷಿ ಮಾತನಾಡಿ, ಹೆಂಗಸರಲ್ಲಿ ಗರ್ಭಕಂಠದ ಕ್ಯಾನ್ಸರ್ ಹಾಗೂ ಸ್ತನ ಕ್ಯಾನ್ಸರ್ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿವೆ. ಸ್ವಯಂ ಪರೀಕ್ಷೆ ಮಾಡಿಕೊಂಡು ಆರೋಗ್ಯದಲ್ಲಿ ತೊಂದರೆ ಕಂಡು ಬಂದಲ್ಲಿ ನಿರಂತರ ವೈದ್ಯಕೀಯ ತಪಾಸಣೆ ಅತ್ಯಗತ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಶಿವಣ್ಣ, ಆಶಾ ಕಾರ್ಯಕರ್ತೆ ಶಿವಕನ್ಯ, ಲೀಲಾವತಿ ಹಾಗೂ ಮಕ್ಕಳ ತಾಯಿಂದಿರರು ಸೇರಿದಂತೆ ಇತರರು ಇದ್ದರು.

ಫೆ.೭ರಿಂದ ೨೧ ರವರೆಗೆ ಖಾದಿ ಉತ್ಸವ

ಕನ್ನಡಪ್ರಭ ವಾರ್ತೆ ಮಂಡ್ಯ

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಹಾಗೂ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಿಂದ ಖಾದಿ ಉತ್ಸವ ರಾಜ್ಯ ಮಟ್ಟದ ಖಾದಿ ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟವನ್ನು ಫೆ.೭ರಿಂದ ೨೧ ರವರೆಗೆ ಹಮ್ಮಿಕೊಳ್ಳಲಾಗಿದೆ.

ಫೆ.೭ರಂದು ಮಧ್ಯಾಹ್ನ ೧ ಗಂಟೆಗೆ ಖಾದಿ ಉತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಮಂಡ್ಯ ವಿಶ್ವ ವಿದ್ಯಾನಿಲಯ ಆವರಣದಲ್ಲಿ ನಡೆಯಲಿದೆ. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ವಸ್ತು ಪ್ರದರ್ಶನ ಉದ್ಘಾಟಿಸುವರು. ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮ ಸಚಿವ ಶರಣಬಸಪ್ಪ ದರ್ಶನಪೂರ ಖಾದಿ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ.

ಖಾದಿ ಮತ್ತು ಗ್ರಾಮ ಉದ್ಯೋಗ ಮಂಡಳಿ ಅಧ್ಯಕ್ಷ ಬಸನಗೌಡ ತುರುವಿಹಾಳ ಪ್ರಾತ್ಯಕ್ಷತೆಯ ಉದ್ಘಾಟನೆ ಮಾಡುವರು. ಶ್ರೀರಂಗಪಟ್ಟಣ ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ಉಪಸ್ಥಿತರಿದ್ದು, ಮಂಡ್ಯ ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಅಧ್ಯಕ್ಷತೆ ವಹಿಸುವರು.

ವಿಶೇಷ ಆಹ್ವಾನಿತರಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಮಣ್‌ದೀಪ್ ಚೌಧರಿ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿ.ಟಿ.ವೆಂಕಟೇಶ್ ಇತರರು ಭಾಗವಹಿಸುವರು.