ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಸೂಚಿಸಿದ್ದಾರೆ.ಇಲ್ಲಿನ ಜಿ.ಪಂ.ಸಭಾಂಗಣದಲ್ಲಿ ಶುಕ್ರವಾರ ನಡೆದ 2023-24 ನೇ ಸಾಲಿನ ಬರ ಪರಿಹಾರಕ್ಕೆ ಸಂಬಂಧಪಟ್ಟಂತೆ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ 2 ನೇ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಈ ಹಿಂದೆ ನಡೆದ ಸಭೆಯಲ್ಲಿ ಚರ್ಚಿಸಿ ಸೂಚಿಸಿದಂತೆ ಮುಂಬರುವ ದಿನಗಳಲ್ಲಿ ಮುಂಜಾಗ್ರತ ಕ್ರಮ ವಹಿಸಲು ತಮ್ಮ ಇಲಾಖೆಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಸಲುವಾಗಿ ಕ್ರಿಯಾಯೋಜನೆಯ ಅಂದಾಜು ಪಟ್ಟಿ ತಯಾರಿಸಿರಿ ತರಲು ಕಳೆದ ಸಭೆಯಲ್ಲಿ ಕೋರಲಾಗಿತ್ತು. ಶುಕ್ರವಾರದ ಸಭೆಯಲ್ಲಿ ಬರಗಾಲ ಸನ್ನಿವೇಶವನ್ನು ಎದುರಿಸಲು ವಿವಿಧ ಇಲಾಖೆಗಳು ಕೈಗೊಂಡಿರುವ ಅಗತ್ಯ ಕ್ರಮಗಳ ಕುರಿತು ಪರಿಶೀಲಿಸಲಾಯಿತು.ಗ್ರಾಮೀಣ ಭಾಗ ಮತ್ತು ನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವ ಆಗದಂತೆ ಸೂಕ್ತ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲು ಮತ್ತು ಟಾಸ್ಕ್ ಫೋರ್ಸ್ ನಲ್ಲಿ ಲಭ್ಯವಿರುವ ಅನುದಾನದಲ್ಲಿ ವಿವಿಧಡೆ ಅಗತ್ಯವಿರುವ ಕಡೆಗಳಲ್ಲಿ ಕೊಳವೆ ಬಾವಿಗಳನ್ನು ಕೊರೆಸಲು ಸನ್ನದ್ಧರಾಗುವಂತೆ ಮಂತರ್ ಗೌಡ ತಿಳಿಸಿದರು.ಮಡಿಕೇರಿ ತಹಸೀಲ್ದಾರ್ ಪ್ರವೀಣ್, ಕಾರ್ಯ ನಿರ್ವಹಣಾಧಿಕಾರಿ ಶೇಖರ್, ನಗರಸಭೆ ಆಯುಕ್ತ ವಿಜಯ್ ಹಾಗೂ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.