ಹಳಿಯಾಳ ವಿದ್ಯಾರ್ಥಿನಿ ಸಾವು: ಕ್ರಮಕ್ಕೆ ಸಿಎಂ ಕಚೇರಿ ಸೂಚನೆ

| Published : Nov 30 2024, 12:45 AM IST

ಹಳಿಯಾಳ ವಿದ್ಯಾರ್ಥಿನಿ ಸಾವು: ಕ್ರಮಕ್ಕೆ ಸಿಎಂ ಕಚೇರಿ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಶಾಲೆಯ ಮುಖ್ಯಗುರುಗಳು ಹಾಗೂ ಶಿಕ್ಷಕರ ನಿರ್ಲಕ್ಷ್ಯತೆ ಎದ್ದು ಕಾಣುತ್ತಿದ್ದು ಸ್ಪಷ್ಟವಾಗಿರುತ್ತದೆ. ಈ ಕುರಿತು ಹಳಿಯಾಳ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕಾರವಾರ: ಹಳಿಯಾಳ ಮುಂಡವಾಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2ನೇ ತರಗತಿಯ ವಿದ್ಯಾರ್ಥಿನಿ ಸಾನ್ವಿ ಮೂತ್ರ ವಿಸರ್ಜನೆಗೆ ಹೋದ ಸಮಯದಲ್ಲಿ ವಿದ್ಯುತ್‌ ತಂತಿ ತಗುಲಿ ಮೃತಪಟ್ಟಿರುವ ಘಟನೆ ನ. 28ರಂದು ನಡೆದಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿ ತಕ್ಷಣವೇ ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.

ಕೂಡಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದು, ಈ ಶಾಲೆಗೆ ಕೆಇಬಿ ಅನುಮತಿ ಇಲ್ಲದೆ ವಿದ್ಯುತ್‌ ಸಂಪರ್ಕ ಪಡೆದುಕೊಂಡು ಬೋರ್‌ವೆಲ್‌ಗೆ ಸಂಪರ್ಕ ಕಲ್ಪಿಸಿದ್ದು, ಈ ತಂತಿ ಹಲವು ಕಡೆ ತುಂಡಾಗಿ ಜಾಯಿಂಟ್‌ ಮಾಡಿದ್ದು. ಈ ತಂತಿಯ ಮೇಲೆ ಅದೇ ಸಮಯದಲ್ಲಿ ಕೋತಿಗಳು ಓಡಾಡಿದ್ದರಿಂದ ತಂತಿ ತುಂಡಾಗಿ ಬಿದ್ದಿರುವುದನ್ನು ಈ ವಿದ್ಯಾರ್ಥಿನಿ ಗಮನಿಸದೆ ಹರಿದ ತಂತಿಯನ್ನು ಸ್ಪರ್ಶಿಸಿದ್ದು, ಅವಘಡಕ್ಕೆ ಕಾರಣವಾಗಿದೆ.

ಇಲ್ಲಿ ಶಾಲೆಯ ಮುಖ್ಯಗುರುಗಳು ಹಾಗೂ ಶಿಕ್ಷಕರ ನಿರ್ಲಕ್ಷ್ಯತೆ ಎದ್ದು ಕಾಣುತ್ತಿದ್ದು ಸ್ಪಷ್ಟವಾಗಿರುತ್ತದೆ. ಈ ಕುರಿತು ಹಳಿಯಾಳ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕರ್ತವ್ಯ ನಿರ್ಲಕ್ಷ್ಯತನದ ಹಿನ್ನೆಲೆ ಈ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕರನ್ನು ಅಮಾನತು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ ಎಂದು ಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ. ರೆಸಾರ್ಟ್‌ ಮಾಲೀಕರ ವಿರುದ್ಧ ಪ್ರಕರಣ ದಾಖಲು

ಗೋಕರ್ಣ: ಪ್ರವಾಸಿಗರ ಸುರಕ್ಷತೆ ಹಾಗೂ ತಿಳಿವಳಿಕೆ ನೀಡಲು ನಿರ್ಲಕ್ಷ್ಯ ತೋರಿದ್ದರಿಂದ ಹಾಗೂ ಪ್ರವಾಸಿಗರ ಸಾವಿಗೆ ಕಾರಣವಾದ ಆರೋಪದ ಹಿನ್ನೆಲೆ ರೆಸಾರ್ಟ್‌ ಮಾಲೀಕರು ಹಾಗೂ ರೆಸಾರ್ಟ್‌ ನಡೆಸುತ್ತಿದ್ದ ವ್ಯಕ್ತಿಯ ಮೇಲೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬುಧವಾರ ಇಲ್ಲಿನ ಠಾಣೆಯಲ್ಲಿ ಡಿವೈಎಸ್‌ಪಿ ಮಹೇಶ ಎಂ.ಕೆ. ಅವರ ನೇತೃತ್ವದಲ್ಲಿ ಎಲ್ಲ ಹೋಟೆಲ್, ರೆಸಾರ್ಟ್ ಮಾಲೀಕರ ಸಭೆ ನಡೆಸಿ, ಪ್ರವಾಸಿಗರಿಗೆ ಸುರಕ್ಷತಾ ಕ್ರಮದ ಬಗ್ಗೆ ಹಾಗೂಕಾನೂನು ಬಾಹಿರ ಚಟುವಟಿಕೆ ನಡೆಯದಂತೆ ನೋಡಿಕೊಳ್ಳಲು ಸೂಚಿಸಿದ್ದರಲ್ಲದೇ, ನೀರಿಗಿಳಿಯದಂತೆ ಎಚ್ಚರಿಕೆ ನೀಡಲು ತಿಳಿಸಿದ್ದರು. ಆದರೆ ಮರುದಿನ(ಗುರುವಾರ)ವೇ ಇಲ್ಲಿನ ರೆಸಾರ್ಟ್‌ವೊಂದರಲ್ಲಿ ವಸತಿ ಪಡೆದಿದ್ದ ಬೆಂಗಳೂರಿನ ಪ್ರವಾಸಿಗರಾದ ಪ್ರತೀಕ(೩೩) ಹಾಗೂ ರವಿ(೨೬) ಸಮುದ್ರದಲ್ಲಿ ಈಜಾಡಲು ತೆರಳಿ ಸುಳಿಗೆ ಸಿಲುಕಿ ಮೃತಪಟ್ಟಿದ್ದರು.

ಪ್ರತೀಕ ಅವರ ತಂದೆ ಪಾಲಾಕ್ಷಪ್ಪ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜನರಿಗೆ ಸಮುದ್ರಕ್ಕಿಳಿಯದಂತೆ ಸೂಕ್ತ ಮಾರ್ಗದರ್ಶನ ನೀಡದೆ ನಿರ್ಲಕ್ಷಿಸಿ ತನ್ನ ಮಗ ಹಾಗೂ ಆತನ ಗೆಳೆಯನ ಸಾವಿಗೆ ಕಾರಣರಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.