ಸಾಲಬಾಧೆ: ಇಬ್ಬರು ಮಕ್ಕಳು, ಪತಿ ಆತ್ಮಹತ್ಯೆ

| Published : Sep 15 2025, 01:00 AM IST

ಸಾರಾಂಶ

ಹೊಸಕೋಟೆ: ಸಾಲಬಾಧೆಯಿಂದ ತಪ್ಪಿಸಿಕೊಳ್ಳಲು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬದಲ್ಲಿ ಇಬ್ಬರು ಮಕ್ಕಳು ಹಾಗೂ ಗಂಡ ಸಾವನ್ನಪ್ಪಿದ್ದು, ತಾಯಿ ಬದುಕುಳಿದಿರುವ ಘಟನೆ ತಾಲೂಕಿನ ಜಡಿಗೇನಹಳ್ಳಿ ಹೋಬಳಿಯ ಗೊನಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹೊಸಕೋಟೆ: ಸಾಲಬಾಧೆಯಿಂದ ತಪ್ಪಿಸಿಕೊಳ್ಳಲು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬದಲ್ಲಿ ಇಬ್ಬರು ಮಕ್ಕಳು ಹಾಗೂ ಗಂಡ ಸಾವನ್ನಪ್ಪಿದ್ದು, ತಾಯಿ ಬದುಕುಳಿದಿರುವ ಘಟನೆ ತಾಲೂಕಿನ ಜಡಿಗೇನಹಳ್ಳಿ ಹೋಬಳಿಯ ಗೊನಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗೊನಕನಳ್ಳಿ ಗ್ರಾಮದ ಶಿವು (32), ಮಗಳು ಚಂದ್ರಕಲಾ (11), ಮಗ ಉದಯ್ ಕುಮಾರ್ (7) ಮೃತಪಟ್ಟಿದ್ದು ತಾಯಿ ಮಂಜುಳಾ (28) ಬದುಕುಳಿದಿದ್ದಾಳೆ.

ಅನಾರೋಗ್ಯದಿಂದ ಬಳಲುತ್ತಿದ್ದ ಶಿವು ಚಿಕಿತ್ಸೆಗಾಗಿ ಸಾಲ ಮಾಡಿಕೊಂಡಿದ್ದ. ಸಾಲವನ್ನು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧಾರ ಮಾಡಿದ್ದ. ಗಂಡ ಹೆಂಡತಿ ಇಬ್ಬರೇ ಸತ್ತರೆ ಮಕ್ಕಳನ್ನು ಯಾರು ನೋಡಿಕೊಳ್ಳುತ್ತಾರೆ ಎಂದು ಇಬ್ಬರು ಮಕ್ಕಳನ್ನು ವೇಲ್‌ನಿಂದ ಕುತ್ತಿಗೆ ಬಿಗಿದು ಸಾಯಿಸಿ ತಾವು ಆತ್ಮಹತ್ಯೆ ಮಾಡಿಕೊಳ್ಳುವ ಸಂದರ್ಭದಲ್ಲಿ ಗಂಡ ಶಿವು ಸಾವನ್ನಪ್ಪಿದ್ದಾನೆ. ಹೆಂಡತಿ ಮಂಜುಳಾ ಹಗ್ಗ ಕಟ್ ಆಗಿ ನೆಲಕ್ಕೆ ಬಿದ್ದಿದ್ದಾಳೆ.

ಅಕ್ಕಪಕ್ಕದ ಜನರು ಎಚ್ಚರಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಮಂಜುಳಾಲನ್ನು ವಶಕ್ಕೆ ಪಡೆದು ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹೊಸಕೋಟೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.