ಸಾಲಬಾಧೆ: ಯುವಕ ನೇಣಿಗೆ ಶರಣು

| Published : Oct 25 2025, 01:00 AM IST

ಸಾರಾಂಶ

ದಾಬಸ್‍ಪೇಟೆ: ಸಾಲ ತೀರಿಸಲಾಗದೆ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾಬಸ್‍ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ದಾಬಸ್‍ಪೇಟೆ: ಸಾಲ ತೀರಿಸಲಾಗದೆ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾಬಸ್‍ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಟ್ಟಣದ ಜಯರಾಮು ಬಡಾವಣೆಯಲ್ಲಿ ವಾಸವಾಗಿದ್ದ ಚೇತನ್(28) ನೇಣಿಗೆ ಶರಣಾದ ದುರ್ದೈವಿ. ಈತ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ, ಕಳೆದ ನಾಲ್ಕೈದು ತಿಂಗಳಿಂದ ಕೆಲಸ ಬಿಟ್ಟು ಮನೆಯಲ್ಲಿದ್ದನು. ಇತ್ತೀಚೆಗಷ್ಟೇ ಕೆಲವರಿಂದ 1.50 ಲಕ್ಷ ಸಾಲ ಪಡೆದಿದ್ದ, ಸಾಲ ತೀರಿಸಲಾಗದೆ ಮನನೊಂದು ಅ.23ರಂದು ರಾತ್ರಿ ರೂಮಿನೊಳಗೆ ಸೇರಿ ಒಳಗಡೆಯಿಂದ ಲಾಕ್ ಮಾಡಿಕೊಂಡಿದ್ದು ಪ್ಯಾನಿಗೆ ಸೀರೆ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆಯವರು ರೂಮಿನ ಬಾಗಿಲನ್ನು ಬಡಿದರೂ ತೆಗೆಯದ ಕಾರಣ ಬಾಗಿಲನ್ನು ಒಡೆದು ನೋಡಿದಾಗ ಆತ್ಮಹತ್ಯೆಗೆ ಕಂಡು ಬಂದಿದೆ. ಘಟನಾ ಸ್ಥಳಕ್ಕೆ ದಾಬಸ್‍ಪೇಟೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸಿದ್ದಪ್ಪ, ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.