ಧಾರವಾಡ ಜಿಲ್ಲೆಯಲ್ಲಿ ಶ್ರೀ ಮಾದಾರ ಚನ್ನಯ್ಯ ಸೇವಾ ಸಮಿತಿಯ ಸಂಘಟನೆಯನ್ನು ಮತ್ತಷ್ಟು ಬಲಪಡಿಸಿ, ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲ ಪದಾಧಿಕಾರಿಗಳು ಸಕ್ರಿಯವಾಗಿ ಶ್ರಮಿಸಬೇಕು.

ಜಿಲ್ಲಾ ಹಾಗೂ ಹುಬ್ಬಳ್ಳಿ ವಿಭಾಗದ ಸಂಘಟನಾತ್ಮಕ ಸಭೆಯಲ್ಲಿ ಸಮಿತಿಯ ರಾಜ್ಯ ಉಪಾಧ್ಯಕ್ಷ

ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ

ಧಾರವಾಡ ಜಿಲ್ಲೆಯಲ್ಲಿ ಶ್ರೀ ಮಾದಾರ ಚನ್ನಯ್ಯ ಸೇವಾ ಸಮಿತಿಯ ಸಂಘಟನೆಯನ್ನು ಮತ್ತಷ್ಟು ಬಲಪಡಿಸಿ, ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲ ಪದಾಧಿಕಾರಿಗಳು ಸಕ್ರಿಯವಾಗಿ ಶ್ರಮಿಸಬೇಕು ಎಂದು ಸಮಿತಿಯ ರಾಜ್ಯ ಉಪಾಧ್ಯಕ್ಷ ಅರುಣ ಅಹೋಳೆ ಕರೆ ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಧಾರವಾಡ ಜಿಲ್ಲಾ ಹಾಗೂ ಹುಬ್ಬಳ್ಳಿ ವಿಭಾಗದ ಸಂಘಟನಾತ್ಮಕ ಸಭೆಯಲ್ಲಿ ಮಾತನಾಡಿದರು.

ಡಿ. 6ರಂದು ಚಿತ್ರದುರ್ಗದ ಶ್ರೀಮಠದಲ್ಲಿ ನಡೆಯುವ ಮಾಸಿಕ ಸಭೆಯೊಳಗೆ ಜಿಲ್ಲಾ ಹಾಗೂ ವಿಧಾನಸಭಾ ಕ್ಷೇತ್ರಗಳ ಸಮಿತಿಗಳ ರಚನೆ ಮತ್ತು ಪದಾಧಿಕಾರಿಗಳ ಆಯ್ಕೆ ಪೂರ್ಣಗೊಳಿಸಿ, ಅಧಿಕೃತ ಪಟ್ಟಿಯೊಂದಿಗೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.

ಶ್ರೀಗಳ ಮಾರ್ಗದರ್ಶನದಲ್ಲಿ ನಡೆಯುವ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಸಮಾಜದ ಏಳಿಗೆ ಹಾಗೂ ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ಸಮಯ ಮತ್ತು ಶ್ರಮ ಸಮರ್ಪಿಸಬೇಕು ಎಂದರು.

ಸಹದೇವ ಮಾಳಗಿ ಜಿಲ್ಲೆಯ ಸಂಘಟನಾತ್ಮಕ ಬೆಳವಣಿಗೆಗಳ ವರದಿ ಮಂಡಿಸಿದರು. ವಿವಿಧ ವಿಧಾನಸಭಾ ಕ್ಷೇತ್ರಗಳ ಪದಾಧಿಕಾರಿಗಳು ಸಮಿತಿ ರಚನೆ, ಪದಾಧಿಕಾರಿಗಳ ಆಯ್ಕೆ ಹಾಗೂ ಮುಂದಿನ ಚಟುವಟಿಕೆಗಳ ಕುರಿತು ಚರ್ಚಿಸಿ ಸಲಹೆ ಪಡೆದರು.

ಜಿಲ್ಲಾಧ್ಯಕ್ಷ ಸಹದೇವ ಮಾಳಗಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಕೊಂಡಪಲ್ಲಿ, ಸತ್ಯನಾರಾಯಣ ಎಂ, ಪರಶುರಾಮ ಮಲ್ಯಾಳ, ಮಹೇಂದ್ರ ಹುಣಶಾಳ, ಆನಂದ ಅರ್ಜುನಗಿ, ಚಂದ್ರಶೇಖರ ನಡುವಿನಮನಿ, ಯಲ್ಲಪ್ಪ ಜಕ್ಕನೂರು, ಅಣ್ಣಾ ದೊರೈ, ಪ್ರಶಾಂತ ಅಣ್ಣೆಗಿರಿ, ಮಹೇಶ ತಗರಗುಂಟಿ ಸೇರಿದಂತೆ ಹಲವರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ ಗುಡಿಹಾಳ ಹಾಗೂ ರಾಕೇಶ ದೊಡ್ಡಮನಿ ನಿರೂಪಿಸಿದರು.