ಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ

| Published : Jan 11 2025, 12:46 AM IST

ಸಾರಾಂಶ

ಗಣರಾಜ್ಯೋತ್ಸವವನ್ನು ನಗರದ ನೇತಾಜಿ ಕ್ರೀಡಾಂಗಣದಲ್ಲಿ ಅಯೋಜಿಸಿದ್ದು, ಬೆಳಿಗ್ಗೆ 9ಗಂಟೆಗೆ ತಾಲ್ಲೂಕು ಆಡಳಿತ ವತಿಯಿಂದ ನಡೆಯುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ಎಲ್ಲಾ ವರ್ಗದ ಅಧಿಕಾರಿಗಳು ಮತ್ತು ಸಿಬ್ಬಂಧಿ ವರ್ಗದವರು ಚಾಚೂತಪ್ಪದೆ ಕಡ್ಡಾಯವಾಗಿ ಭಾಗವಹಿಸುವಂತೆ ಸೂಚಿಸಲಾಗಿದೆ.

ಕನ್ನಡಪ್ರಭ ವಾರ್ತೆ ಗೌರಿಬಿದನೂರು

ಜನವರಿ 26ರಂದು ಗಣರಾಜ್ಯೋತ್ಸವ ದಿನವನ್ನು ತಾಲ್ಲೂಕು ಆಡಳಿತದಿಂದ ತಾಲ್ಲೂಕಿನಲ್ಲಿ, ಹಬ್ಬದ ರೀತಿಯಲ್ಲಿ ಅರ್ಥಪೂರ್ಣವಾಗಿ ವಿಜೃಂಬಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ತಹಶೀಲ್ದಾರ್‌ ಮಹೇಶ್‌.ಎಸ್.ಪತ್ರಿ ತಿಳಿಸಿದರು.ನಗರದ ಹೊರವಲಯದಲ್ಲಿರುವ ತಾಲ್ಲೂಕು ಆಡಳಿತ ಸಭಾಂಗಣದಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕ್ರೀಡಾಂಗಣದಲ್ಲಿ ಕಾರ್ಯಕ್ರಮ

ಗಣರಾಜ್ಯೋತ್ಸವವನ್ನು ನಗರದ ನೇತಾಜಿ ಕ್ರೀಡಾಂಗಣದಲ್ಲಿ ಅಯೋಜಿಸಿದ್ದು, ಬೆಳಿಗ್ಗೆ 9ಗಂಟೆಗೆ ತಾಲ್ಲೂಕು ಆಡಳಿತ ವತಿಯಿಂದ ನಡೆಯುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ಎಲ್ಲಾ ವರ್ಗದ ಅಧಿಕಾರಿಗಳು ಮತ್ತು ಸಿಬ್ಬಂಧಿ ವರ್ಗದವರು ಚಾಚೂತಪ್ಪದೆ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸೂಚಿಸಿದರು. ಅದರಂತೆ ತಾಲ್ಲೂಕಿನಾದ್ಯಂತ ಅರ್ಥಪೂರ್ಣ ಹಣರಾಜ್ಯೋತ್ಸವ ಆಚರಣೆಗೆ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶಿಸಿದರು.

ಶಿಷ್ಟಾಚಾರ ಪಾಲನೆ ಮತ್ತು ವೇದಿಕೆ ನಿರ್ಮಾಣ ಸೇರಿದಂತೆ ನಗರ, ಮೈದಾನ ಸ್ವಚ್ಚತೆ, ವಿವಿಧ ಕಛೇರಿ, ವೃತ್ತಗಳಿಗೆ ದೀಪಾಲಂಕಾರ ವ್ಯವಸ್ಥೆಗಳನ್ನು ನೋಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ವಿದ್ಯುತ್‌ ದೀಪಾಲಂಕಾರ

ದ್ವಜಾರೋಹಣ ಪ್ರಯುಕ್ತ ರಾಷ್ಟ್ರಗೀತೆ, ನಾಡಗೀತೆ, ಧ್ವಜಾರೋಹಣ, ಪಥಸಂಚಲನ, ಶಿಷ್ಟಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಲು ಮತ್ತು ಇನ್ನಿತರ ಕುರಿತು ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡು ಅಚ್ಚುಕಟ್ಟಾಗಿ ನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು. ನಗರದ ಪ್ರತಿಯೊಂದು ವೃತ್ತದಲ್ಲೂ ಜಗ-ಜಗಿಸುವ ವಿದ್ಯುತ್‌ ದೀಪಾಲಂಕಾರದಿಂದ ನಗರದ ಸೌಂದರ್ಯವನ್ನು ಹೆಚ್ಚಸಬೇಕೆಂದು ತಿಳಿಸಿದರು. ಮತ್ತು ವಿವಿಶ ಕ್ಷೇತ್ರಗಳಲ್ಲಿ ಸೇವೆಗೈದವರಿಗೆ ಸನ್ಮಾನ ಸಂಮಾರಂಭವನ್ನು ಮಾಡಲು ತಿಳಿಸಿದರು.ಇದೇ ಸಂದರ್ಭದಲ್ಲಿ, ಪಂಚಾಯಿತಿ ಸಹಾಯ ನಿರ್ದೇಶಕ ಕರಿಯಪ್ಪ, ಗ್ರಾಮಾಂತರ ಠಾಣೆ ಉಪನಿರೀಕ್ಷಕ ರಮೇಶ್ ಗುಗ್ಗರಿ, ಅಭಕಾರಿ ನಿರೀಕ್ಷಕ ಮಂಜುನಾಥ್, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಚೆನ್ನಪ್ಪಗೌಡ ನಾಯ್ಕರ್, ವನಜಾಕ್ಷಿ, ಸಿ.ಡಿ.ಪಿ.ಒ. ರವಿಕುಮಾರ್ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.