ಅರ್ಥಪೂರ್ಣ ಕೆಂಪೇಗೌಡ ಜಯಂತಿ ಆಚರಣೆಗೆ ನಿರ್ಧಾರ

| Published : Jun 26 2024, 12:38 AM IST

ಸಾರಾಂಶ

ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಪಕ್ಷಾತೀತವಾಗಿ ಹಾಗೂ ಜಾತ್ಯತೀತವಾಗಿ ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ದೇವರಹಿಪ್ಪರಗಿಯಲ್ಲಿ ಆಚರಿಸಲು ಪೂರ್ವಭಾವಿ ಸಭೆಯಲ್ಲಿ ಒಕ್ಕೊರಲಿನ ತೀರ್ಮಾನ ಕೈಗೊಳ್ಳಲಾಯಿತು.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಪಕ್ಷಾತೀತವಾಗಿ ಹಾಗೂ ಜಾತ್ಯತೀತವಾಗಿ ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ದೇವರಹಿಪ್ಪರಗಿಯಲ್ಲಿ ಆಚರಿಸಲು ಪೂರ್ವಭಾವಿ ‌ಸಭೆಯಲ್ಲಿ ಒಕ್ಕೊರಲಿನ ತೀರ್ಮಾನ ಕೈಗೊಳ್ಳಲಾಯಿತು.

ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ತಹಸೀಲ್ದಾರ್ ಪ್ರಕಾಶ ಸಿಂದಗಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಮಾಡಲಾಯಿತು. ತಾಲೂಕು ಆಡಳಿತದ ವತಿಯಿಂದ ಜೂನ್ 27ರಂದು ನಡೆಯಲಿರುವ ಕೆಂಪೇಗೌಡರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ. ಕಾರ್ಯಕ್ರಮದ ಯಶಸ್ಸಿಗೆ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ತಮ್ಮ ಸಲಹೆಗಳನ್ನು ನೀಡಬೇಕೆಂದು ತಹಸೀಲ್ದಾರ್‌ ಕೋರಿದರು.

ಆ ದಿನ ಮೋಹರೆ ವೃತ್ತದಿಂದ ಕೆಂಪೇಗೌಡರ ಭಾವಚಿತ್ರ ಮೆರವಣಿಗೆ ಮೂಲಕ ಸಾಗಿ ಇಂಡಿ ರಸ್ತೆಯಲ್ಲಿರುವ 1008 ಪಂಚಾಚಾರ್ಯರು ಕಲ್ಯಾಣ ಮಂಟಪದ ವರೆಗೆ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕೆಂಪೇಗೌಡರ ಸ್ತಬ್ಧಚಿತ್ರ ಮೆರವಣಿಗೆ, ವಿವಿಧ ವೇಷ ಭೂಷಣಗಳ ಪ್ರದರ್ಶನ ನಡೆಯಲಿದೆ. ಕಾರ್ಯಕ್ರಮದ ಪೂರ್ವಭಾವಿಯಾಗಿ ಶಾಲೆಗಳಲ್ಲಿ ಮಕ್ಕಳಿಗೆ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಬಹುಮಾನ ನೀಡುವುದರ ಜೊತೆಗೆ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಇಲಾಖೆಯ ಅಧಿಕಾರಿಗಳು ಬೆಳಿಗ್ಗೆ ತಮ್ಮ ಕಚೇರಿಯಲ್ಲಿ ಜಯಂತಿ ಆಚರಿಸಿ ತಾಲೂಕು ಆಡಳಿತದಿಂದ ಬೆಳಗ್ಗೆ 8.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ತಾಲೂಕು ಕಸಾಪ ಅಧ್ಯಕ್ಷ ಜಿ.ಪಿ.ಬಿರಾದಾರ,ಕಂದಾಯ ಇಲಾಖೆಯ ಶಿರಸ್ತೇದಾರ ಸುರೇಶ ಮ್ಯಾಗೇರಿ, ಮುಖಂಡರುಗಳಾದ ಪ್ರಕಾಶ ಗುಡಿಮನಿ,ಹುಯೋಗಿ ತಳ್ಳೊಳ್ಳಿ, ದೈಹಿಕ ಶಿಕ್ಷಣ ಅಧಿಕಾರಿ ನಾಮದೇವ ಚವ್ಹಾಣ, ಸಂಗಮೇಶ ಗ್ವಾಳೇದ, ಜಿ.ಎಸ್.ರೊಡಗಿ ಸೇರಿದಂತೆ ಕಂದಾಯ,ತಾ.ಪಂ, ಶಿಕ್ಷಣ ಹಾಗೂ ಪೋಲಿಸ್ ಇಲಾಖೆಯ ಅಧಿಕಾರಿಗಳು, ಪಟ್ಟಣದ ಪ್ರಮುಖರು,ಗಣ್ಯರು ಹಾಗೂ ಇತರರು ಉಪಸ್ಥಿತರಿದ್ದರು.