ಅದ್ದೂರಿ ವಾಲ್ಮೀಕಿ ಜಯಂತಿ ಆಚರಣೆಗೆ ನಿರ್ಧಾರ

| Published : Oct 01 2024, 01:22 AM IST

ಅದ್ದೂರಿ ವಾಲ್ಮೀಕಿ ಜಯಂತಿ ಆಚರಣೆಗೆ ನಿರ್ಧಾರ
Share this Article
  • FB
  • TW
  • Linkdin
  • Email

ಸಾರಾಂಶ

ಕೋಲಾರ ತಾಲೂಕಿನಿಂದ ಸುಮಾರು ೧೨೦ಕ್ಕೂ ಹೆಚ್ಚು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಪಲ್ಲಕ್ಕಿಗಳ ಮೆರವಣಿಗೆ ಸಹ ಅದ್ಧೂರಿಯಾಗಿ ನಡೆಸಲು ಪ್ರತಿ ಹಳ್ಳಿಯಿಂದ ಬರುವಂತೆ ನೋಡಿಕೊಳ್ಳಬೇಕು, ಜಯಂತಿ ಒಂದು ವರ್ಗಕ್ಕೆ ಸೀಮಿತಗೊಳಿಸದೆ ಎಲ್ಲ ಸಮುದಾಯ ಮುಖಂಡರನ್ನು ಹಾಗೂ ಸಂಘಟನೆಗಳನ್ನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಸೌಹಾರ್ದ ಪರಂಪರೆಯ ನಾಡು ಎಂಬುವ ಸಂದೇಶ ಸಾರುವ ರೀತಿಯಲ್ಲಿ ಆಚರಿಸೋಣ.

ವಾಲ್ಮೀಕಿ ಸಮುದಾಯ ಭವನದಲ್ಲಿ ನಡೆದ ಪೂರ್ವಭಾವಿ ಸಭೆ ಕನ್ನಡಪ್ರಭ ವಾರ್ತೆ ಕೋಲಾರಜಿಲ್ಲಾಡಳಿತ ಹಾಗೂ ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿಯ ಸಹಕಾರದೊಂದಿಗೆ ಅ.೧೭ ರಂದು ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಯಂತಿ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲು ವಾಲ್ಮೀಕಿ ಸಮುದಾಯದ ಮುಖಂಡರು ಸಭೆಯಲ್ಲಿ ತೀರ್ಮಾನಿಸಿದರು.ನಗರದ ಹೊರವಲಯದ ಶ್ರೀನಿವಾಸಪುರ ರಸ್ತೆಯ ಆರ್.ಜಿ ಲೇಔಟ್‌ನ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಮುಖಂಡರು, ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಪ್ರತಿ ವರ್ಷದಂತೆ ಈ ಬಾರಿಯು ಅರ್ಥಪೂರ್ಣವಾಗಿ ಅದ್ದೂರಿಯಾಗಿ ಆಯೋಜನೆ ಮಾಡಬೇಕು, ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ಪಲ್ಲಕ್ಕಿಗಳ ಅದ್ಧೂರಿ ಮೆರವಣಿಗೆ

ಕಾರ್ಯಕ್ರಮದಲ್ಲಿ ಕೋಲಾರ ತಾಲೂಕಿನಿಂದ ಸುಮಾರು ೧೨೦ಕ್ಕೂ ಹೆಚ್ಚು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಪಲ್ಲಕ್ಕಿಗಳ ಮೆರವಣಿಗೆ ಸಹ ಅದ್ಧೂರಿಯಾಗಿ ನಡೆಸಲು ಪ್ರತಿ ಹಳ್ಳಿಯಿಂದ ಬರುವಂತೆ ನೋಡಿಕೊಳ್ಳಬೇಕು, ಜಯಂತಿ ಒಂದು ವರ್ಗಕ್ಕೆ ಸೀಮಿತಗೊಳಿಸದೆ ಎಲ್ಲ ಸಮುದಾಯ ಮುಖಂಡರನ್ನು ಹಾಗೂ ಸಂಘಟನೆಗಳನ್ನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಸೌಹಾರ್ದ ಪರಂಪರೆಯ ನಾಡು ಎಂಬುವ ಸಂದೇಶ ಸಾರುವ ರೀತಿಯಲ್ಲಿ ಆಚರಿಸೋಣ ಎಂದರು.ಜಿಲ್ಲಾಡಳಿತ ನೇತೃತ್ವದಲ್ಲಿ ನಡೆಯಲಿರುವ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ವಾಲ್ಮೀಕಿ ಸಮುದಾಯದ ಮುಖಂಡರು ಭಾಗವಹಿಸಿ ಕಾರ್ಯಕ್ರಮದ ರೂಪರೇಷೆಗಳನ್ನು ಚರ್ಚಿಸಬೇಕು ಜೊತೆಗೆ ಸಮುದಾಯದ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ಸಭೆಯಲ್ಲಿ ತರುವಂತೆ ನಿರ್ಧರಿಸಲಾಯಿತು.ಸಭೆಯಲ್ಲಿ ನಗರಸಭೆ ಸದಸ್ಯ ಎನ್.ಅಂಬರೀಷ್, ಮುಖಂಡರಾದ ಬಾಲಗೋವಿಂದ್, ಮಾಲೂರು ಎನ್.ವೆಂಕಟರಾಮ್, ಕುಡುವನಹಳ್ಳಿ ಆನಂದ್, ಕೋಟೆ ಶ್ರೀನಿವಾಸ್, ರಾಜಣ್ಣ, ಬೈರಂಡಹಳ್ಳಿ ನಾಗೇಶ್, ಅಡ್ಡಗಲ್ ನರೇಶ್, ನರಸಿಂಹಪ್ಪ, ಕಮಾಂಡಹಳ್ಳಿ ನಾರಾಯಣಸ್ವಾಮಿ, ಭುವನಹಳ್ಳಿ ನಾರಾಯಣಸ್ವಾಮಿ ಇದ್ದರು.