ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಕೃಷ್ಣಮೃಗ (ಬ್ಲ್ಯಾಕ್‌ಬಕ್) ಅಭಯಾರಣ್ಯ ಘೋಷಣೆಯಾಗಿ 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದ್ದು, ಅ. 2ರಿಂದ 8ರ ವರೆಗೆ ವಿವಿಧ ಕಾರ್ಯಕ್ರಮಗಳ ಮೂಲಕ ವನ್ಯಜೀವಿ ಜಾಗೃತಿ ಮೂಡಿಸಬೇಕು ಎಂದು ಸಕ್ಕರೆ, ಜವಳಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು.
ಹಾವೇರಿ: ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಕೃಷ್ಣಮೃಗ (ಬ್ಲ್ಯಾಕ್‌ಬಕ್) ಅಭಯಾರಣ್ಯ ಘೋಷಣೆಯಾಗಿ 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದ್ದು, ಅ. 2ರಿಂದ 8ರ ವರೆಗೆ ವಿವಿಧ ಕಾರ್ಯಕ್ರಮಗಳ ಮೂಲಕ ವನ್ಯಜೀವಿ ಜಾಗೃತಿ ಮೂಡಿಸಬೇಕು ಎಂದು ಸಕ್ಕರೆ, ಜವಳಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ನಡೆದ ಕೃಷ್ಣಮೃಗ ಅಭಯಾರಣ್ಯ ಸುವರ್ಣ ಮಹೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಹಾವೇರಿ ಜಿಲ್ಲೆಯನ್ನು ಪ್ರವಾಸೋದ್ಯಮದ ಪ್ರಮುಖ ತಾಣವನ್ನಾಗಿ ಅಭಿವೃದ್ಧಿ ಪಡಿಸುವ ಉದ್ದೇಶ ಹೊಂದಲಾಗಿದೆ. ಜಿಲ್ಲೆಯಲ್ಲಿ ಕೃಷ್ಣಮೃಗ ಅಭಯಾರಣ್ಯ ಸೇರಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಪಾರಂಪರಿಕ ಪ್ರವಾಸಿ ತಾಣಗಳಿದ್ದು, ಅವುಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ದೇಶ-ವಿದೇಶದ ಪ್ರವಾಸಿಗರಿಗೆ ಪರಿಚಯಿಸುವ ಅಗತ್ಯವಿದೆ ಎಂದು ಹೇಳಿದರು.
ಅಭಯಾರಣ್ಯದ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.ಪ್ರವಾಸೋದ್ಯಮಕ್ಕೆ ಒತ್ತು: ರಾಣಿಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ಮಾತನಾಡಿ, ಕೃಷ್ಣಮೃಗ ಅಭಯಾರಣ್ಯದಲ್ಲಿ ದೇಶದಲ್ಲೇ ಗಮನಾರ್ಹ ಸಂಖ್ಯೆಯಲ್ಲಿ ಕೃಷ್ಣಮೃಗಗಳಿದ್ದು, ಈ ನೈಸರ್ಗಿಕ ಕುರಿತು ಹೆಚ್ಚಿನ ಜನರಿಗೆ ಅರಿವು ಮೂಡಿಸುವ ಅಗತ್ಯವಿದೆ. ಕೃಷ್ಣಮೃಗ ಅಭಯಾರಣ್ಯದ 50ನೇ ವರ್ಷದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಆಚರಿಸುವುದರ ಜೊತೆಗೆ ಬ್ಲ್ಯಾಕ್‌ಬಕ್ ಡೇ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಹೇಳಿದರು.
ಹಾವೇರಿ ಜಿಲ್ಲೆಯಲ್ಲಿ ಬೆಟ್ಟ-ಗುಡ್ಡಗಳು, ನೈಸರ್ಗಿಕ ಸೌಂದರ್ಯ, ಐತಿಹಾಸಿಕ ಹಾಗೂ ಪುರಾತತ್ವ ಮಹತ್ವದ ತಾಣಗಳಿವೆ. ಇವುಗಳನ್ನು ಸಮರ್ಪಕವಾಗಿ ಗುರುತಿಸಿ ಪ್ರವಾಸಿಗರಿಗೆ ಪರಿಚಯಿಸುವ ಮೂಲಕ ಜಿಲ್ಲೆಯನ್ನು ಪ್ರವಾಸಿ ತಾಣವಾಗಿ ಮಾಡಿದರೆ ದೇಶದ ವಿವಿಧ ಭಾಗಗಳಿಂದ ಹಾಗೂ ವಿದೇಶಗಳಿಂದಲೂ ಪ್ರವಾಸಿಗರನ್ನು ಆಕರ್ಷಿಸಲು ಸಾಧ್ಯವಾಗಲಿದೆ. ಇದರಿಂದ ಜಿಲ್ಲೆಯ ಆರ್ಥಿಕ ಅಭಿವೃದ್ಧಿಯಾಗಲಿದೆ ಎಂದರು.ವಿವಿಧ ಕಾರ್ಯಕ್ರಮಗಳ ಆಯೋಜನೆ: ಕೃಷ್ಣಮೃಗ ಅಭಯಾರಣ್ಯ ಸುವರ್ಣ ಮಹೋತ್ಸವ ಅಂಗವಾಗಿ ಅ.2ರಿಂದ 8ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶದಿಂದ ಉದ್ದೇಶಿಸಲಾಗಿದೆ. ರಾಣಿಬೆನ್ನೂರು ನಗರದಿಂದ ಕೃಷ್ಣಮೃಗ ಅಭಯಾರಣ್ಯದ ಪ್ರವೇಶದ್ವಾರದವರೆಗೆ ಶಾಲಾ ವಿದ್ಯಾರ್ಥಿಗಳಿಂದ ಜಾಗೃತಿ ರ‍್ಯಾಲಿ, ಬೀದಿ ನಾಟಕ, ಡೊಳ್ಳು ಕುಣಿತ ಹಾಗೂ ವನ್ಯಜೀವಿ ವಿಷಯಾಧಾರಿತ ವೇಷಭೂಷಣ ಸ್ಪರ್ಧೆ, ಸಾವಿರಾರು ವಿದ್ಯಾರ್ಥಿಗಳಿಂದ ಕೃಷ್ಣಮೃಗದ ಬೃಹತ್ ಆಕಾರ ರಚಿಸುವ ಮೂಲಕ ಗಿನ್ನಿಸ್ ದಾಖಲೆ, ಮಣ್ಣಿನ ಆಕೃತಿ ರಚನೆ, ಚಿತ್ರಕಲೆ, ಪ್ರಬಂಧ ಹಾಗೂ ರಸಪ್ರಶ್ನೆ ಸ್ಪರ್ಧೆಗಳ ಆಯೋಜನೆ ನಡೆಸಲು, ಭಾರತೀಯ ಅಂಚೆ ಇಲಾಖೆಯ ಸಹಯೋಗದಲ್ಲಿ ಕೃಷ್ಣಮೃಗ ಅಭಯಾರಣ್ಯದ ಕುರಿತ ವಿಶೇಷ ಅಂಚೆ ಲಕೋಟೆ ಬಿಡುಗಡೆ, ಪಕ್ಷಿ ವೀಕ್ಷಣೆ ಹಾಗೂ ವನ್ಯಜೀವಿ ಛಾಯಾಚಿತ್ರ ಪ್ರದರ್ಶನ ಆಯೋಜನೆ, ಸಾಂಸ್ಕೃತಿಕ ಕಾರ್ಯಕ್ರಮ, ಉತ್ತಮ ಛಾಯಾಚಿತ್ರಗಳಿಗೆ ಬಹುಮಾನ ವಿತರಣೆ, ಕೃಷ್ಣಮೃಗ ಅಭಯಾರಣ್ಯ ಘೋಷಣೆಗೆ ಹಾಗೂ ಸಂರಕ್ಷಣಾ ಕಾರ್ಯಗಳಿಗೆ ಸೇವೆ ಸಲ್ಲಿಸಿದ ಅರಣ್ಯ ಇಲಾಖೆಯ ನಿವೃತ್ತ ಹಾಗೂ ಹಾಲಿ ಅಕಾರಿಗಳ ಸನ್ಮಾನಿಸಲು ರೂಪರೇಷ ಹಾಕಿಕೊಳ್ಳಲಾಗಿದೆ ಅರಣ್ಯ ಇಲಾಖೆ ಡಿಎಫ್‌ಒ ಅಕ್ಷಯ ಪ್ರಕಾಶಕರ ಸಭೆಗೆ ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, ರಾಷ್ಟ್ರೀಯ ವನ್ಯಜೀವಿ ಸಪ್ತಾಹದ ಸಂದರ್ಭದಲ್ಲಿ ಕೃಷ್ಣಮೃಗ ಅಭಯಾರಣ್ಯಕ್ಕೆ ಹೆಚ್ಚಿನ ಪ್ರಚಾರ ನೀಡುವ ಮೂಲಕ ಪ್ರವಾಸಿಗರನ್ನು ಆಕರ್ಷಿಸಬೇಕು. ಅಭಯಾರಣ್ಯದ ವೈಶಿಷ್ಟ್ಯಗಳು ಹಾಗೂ ವನ್ಯಜೀವಿ ಸಂಪತ್ತಿನ ಕುರಿತು ಜನರಲ್ಲಿ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು. ಜಿಲ್ಲೆಯಲ್ಲಿ ವನ್ಯಜೀವಿ ಹಾಗೂ ಪ್ರಕೃತಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿದ್ದು, ಇದನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಅಗತ್ಯವಿದೆ ಎಂದು ತಿಳಿಸಿದರು.ಸಭೆಯಲ್ಲಿ ಜಿಪಂ ಸಿಇಒ ದಲ್ಜಿತ್‌ಕುಮಾರ್, ಎಸ್‌ಪಿ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್., ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎಂ.ಎಂ. ಮೈದೂರು, ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕೃಷ್ಣಮೃಗ ಅಭಯಾರಣ್ಯದ ಅಭಿವೃದ್ಧಿಗೆ ಅಗತ್ಯವಿರುವ ರಸ್ತೆ, ಪ್ರವಾಸಿಗರಿಗೆ ಮೂಲಸೌಕರ್ಯ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯದಿಂದ ಕ್ರಮ ಕೈಗೊಳ್ಳಲಾಗುವುದು. ಪ್ರವಾಸಿಗರ ಸಂಖ್ಯೆ ಹೆಚ್ಚಿದರೆ ಸ್ಥಳೀಯವಾಗಿ ಆಟೋ, ಟ್ಯಾಕ್ಸಿ, ಹೋಟೆಲ್, ರೆಸ್ಟೋರೆಂಟ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಇದರಿಂದ ಜಿಲ್ಲೆಯ ಆರ್ಥಿಕ ಚಟುವಟಿಕೆಗಳಿಗೂ ಉತ್ತೇಜನ ದೊರೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು.ಶೇ.50 ರಿಯಾಯಿತಿ ದರದಲ್ಲಿ ಸಫಾರಿ: ಸುವರ್ಣ ಮಹೋತ್ಸವದ ಅಂಗವಾಗಿ ನಡೆಯುವ ಏಳು ದಿನಗಳ ಕಾರ್ಯಕ್ರಮದ ಅವಧಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ ಕೃಷ್ಣಮೃಗ ಅಭಯಾರಣ್ಯದ ಸಫಾರಿ ಸೇವೆಯನ್ನು ಶೇ.50ರ ರಿಯಾಯಿತಿ ದರದಲ್ಲಿ ಒದಗಿಸಲು ಉದ್ದೇಶಿಸಲಾಗಿದೆ ಎಂದು ರಾಣಿಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ತಿಳಿಸಿದರು.