ಸಾರಾಂಶ
ಜಿಲ್ಲಾ ಕೇಂದ್ರದಲ್ಲಿ ಈ ಬಾರಿ ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿಗಳನ್ನು ಅರ್ಥಪೂರ್ಣ ಹಾಗೂ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಏ.5ರಂದು ಬಾಬು ಜಗಜೀವನರಾಂ ಜಯಂತಿ
ಕನ್ನಡಪ್ರಭ ವಾರ್ತೆ ಚಿತ್ರದುರ್ಗಜಿಲ್ಲಾ ಕೇಂದ್ರದಲ್ಲಿ ಈ ಬಾರಿ ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿಗಳನ್ನು ಅರ್ಥಪೂರ್ಣ ಹಾಗೂ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಬರುವ ಏ.5 ರಂದು ಡಾ.ಬಾಬು ಜಗಜೀವನರಾಂ ಅವರ 118ನೇ ಜನ್ಮ ದಿನಾಚರಣೆ, ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ 134ನೇ ಜನ್ಮ ದಿನಾಚರಣೆ ಆಚರಿಸುವ ಕುರಿತು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕೋವಿಡ್ ಹಾಗೂ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಕಳೆದ ಮೂರು-ನಾಲ್ಕು ವರ್ಷಗಳಿಂದ ಉಭಯ ಮಹನೀಯರ ಜಯಂತಿಯನ್ನು ಸರಳವಾಗಿ ಆಚರಿಸಲಾಗಿದೆ. ಈ ಬಾರಿ ಮಹಾ ನಾಯಕರ ಜಯಂತಿಯನ್ನು ವಿಶೇಷ ರೀತಿಯಲ್ಲಿ ಹಾಗೂ ಮಾದರಿಯಾಗಿ ಆಚರಿಸಲು ಕ್ರಮ ವಹಿಸಲಾಗುವುದು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಡಿವೈಎಸ್‍ಪಿ ಪಿ.ಕೆ.ದಿನಕರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮುದಾಯ ಮುಖಂಡರಾದ ನಗರಸಭೆ ಮಾಜಿ ಅಧ್ಯಕ್ಷ ನಿರಂಜನಮೂರ್ತಿ, ಜಯಣ್ಣ, ಬಿ.ರಾಜಪ್ಪ, ಕೆ.ಟಿ. ಶಿವಕುಮಾರ್, ಕೆ.ಕುಮಾರ್, ದುರುಗೇಶಪ್ಪ, ಪ್ರಸನ್ನ, ಗೌನಹಳ್ಳಿ ಗೋವಿಂದಪ್ಪ, ಮಹಂತೇಶ್, ಡಿ.ಎನ್.ಮೈಲಾರಪ್ಪ, ವೈ. ರಾಜಣ್ಣ, ಅವಿನಾಶ್, ನಾಗರಾಜಕಟ್ಟೆ, ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ಡಿ.ಗೋಪಾಲಸ್ವಾಮಿ ನಾಯಕ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಮುಖಂಡರು ಇದ್ದರು.