14 ರಂದು ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನ ಆಚರಣೆಗೆ ನಿರ್ಧಾರ

| Published : Apr 05 2024, 01:09 AM IST

14 ರಂದು ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನ ಆಚರಣೆಗೆ ನಿರ್ಧಾರ
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕು ಆಡಳಿತದಿಂದ ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಅಧ್ಯಕ್ಷತೆಯಲ್ಲಿ ಗುರುವಾರ ತಹಸೀಲ್ದಾರ್ ಕಾರ್ಯಾಲಯದಲ್ಲಿ ಏ. 5 ರಂದು ನಡೆಯುವ ಡಾ.ಬಾಬು ಜಗಜೀವನರಾಂ ರವರ 116ನೇ ಜನ್ಮದಿನಾಚರಣೆ ಮತ್ತು ಏ.14 ರಂದು ನಡೆಯುವ ಡಾ.ಬಿ.ಆರ್.ಅಂಬೇಡ್ಕರ್ ರವರ 133ನೇ ಜನ್ಮ ದಿನಾಚರಣೆ ಆಚರಿಸುವ ಕುರಿತು ಪೂರ್ವ ಸಿದ್ದತಾ ಸಭೆ ಏರ್ಪಡಿಸಲಾಗಿತ್ತು.

ಕನ್ನಡಪ್ರಭ ವಾರ್ತೆ, ತರೀಕೆರೆ

ತಾಲೂಕು ಆಡಳಿತದಿಂದ ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಅಧ್ಯಕ್ಷತೆಯಲ್ಲಿ ಗುರುವಾರ ತಹಸೀಲ್ದಾರ್ ಕಾರ್ಯಾಲಯದಲ್ಲಿ ಏ. 5 ರಂದು ನಡೆಯುವ ಡಾ.ಬಾಬು ಜಗಜೀವನರಾಂ ರವರ 116ನೇ ಜನ್ಮದಿನಾಚರಣೆ ಮತ್ತು ಏ.14 ರಂದು ನಡೆಯುವ ಡಾ.ಬಿ.ಆರ್.ಅಂಬೇಡ್ಕರ್ ರವರ 133ನೇ ಜನ್ಮ ದಿನಾಚರಣೆ ಆಚರಿಸುವ ಕುರಿತು ಪೂರ್ವ ಸಿದ್ದತಾ ಸಭೆ ಏರ್ಪಡಿಸಲಾಗಿತ್ತು.ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಉಪವಿಭಾಗೀಯ ಮಟ್ಟದ ದೌರ್ಜನ್ಯ ನಿಯಂತ್ರಣ ಉಸ್ತುವಾರಿ ಸಮಿತಿ ಸದಸ್ಯ ಎಸ್.ಎನ್.ಸಿದ್ರಾಮಪ್ಪ ಮಾತನಾಡಿ, ಎಲ್ಲಾ ಮಹನೀಯರ ಜಯಂತಿ ಆಚರಣೆಗೆ ಸಾಕಷ್ಟು ಅನುದಾನ ನೀಡುತ್ತಿದ್ದು, ಡಾ.ಬಿ.ಆರ್.ಆಂಬೇಡ್ಕರ್ ಜನ್ಮದಿನಾಚರಣೆ ಆಚರಿಸಲು ಅನುದಾನ ಕಡಿಮೆ ನೀಡಲಾಗುತ್ತಿದೆ. ಸರ್ಕಾರ ಕೂಡಲೇ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆಗೂ ಹೆಚ್ಚಿನ ಅನುದಾನ ನೀಡಬೇಕೆಂದು ಒತ್ತಾಯಿಸಿದರು.ಛಲವಾದಿ ಸಮಾಜದ ತಾಲೂಕು ಅಧ್ಯಕ್ಷ ಎಸ್.ಕೆ.ಸ್ವಾಮಿ ಮಾತನಾಡಿ ಸರ್ಕಾರ ಡಾ.ಬಿ.ಆರ್.ಅಂಬೇಡ್ಕರ್‌ ಜನ್ಮ ದಿನಾಚರಣೆ ಆಚರಿಸಲು ಹೆಚ್ಚಿನ ಅನುದಾನ ನೀಡಬೇಕೆಂದು ಒತ್ತಾಯಿಸಿದರು. ಉಫ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಮಾತನಾಡಿ ಏ. 14 ರಂದು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 10-30ಕ್ಕೆ ಡಾ.ಬಿ.ಆರ್. ಅಂಬೇಡ್ಕರ್ ರವರ 133ನೇ ಜನ್ಮದಿನಾಚರಣೆ ಮತ್ತು ಡಾ.ಬಾಬು ಜಗಜೀವನರಾಮ್ ಅವರ 116ನೇ ಜನ್ಮದಿನಾಚರಣೆ ಕಾರ್ಯಕ್ರಮ ಆಚರಿಸಲಾಗುವುದು ಎಂದು ತಿಳಿಸಿದರು. ಮುಖಂಡರಾದ ಜಿ.ಟಿ.ರಮೇಶ್, ಓಂಕಾರಪ್ಪ, ಹಾದಿಕೆರೆ ರಾಜು, ರಾಮಪ್ಪ, ತಹಸೀಲ್ದಾರ್ ವಿ.ಎಸ್.ರಾಜೀವ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್, ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್ , ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

4ಕೆಟಿಆರ್.ಕೆ.5ಃ

ತರೀಕೆರೆಯಲ್ಲಿ ತಾಲೂಕು ಅಡಳಿತದಿಂದ ನಡೆದ ಡಾ. ಬಾಬು ಜಗಜೀವನರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆಯನ್ನು ಉಪವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ವಹಿಸಿ ಮಾತನಾಡಿದರು. ತಹಸೀಲ್ದಾರ್ ವಿ.ಎಸ್.ರಾಜೀವ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್, ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್ ಇದ್ದರು.