ರಾಜ್ಯೋತ್ಸವ ಅದ್ಧೂರಿ ಆಚರಣೆಗೆ ನಿರ್ಧಾರ

| Published : Oct 25 2025, 01:00 AM IST

ಸಾರಾಂಶ

ಬಾಗೇಪಲ್ಲಿ ಪಟ್ಟಣದ ವಿವಿಧ ಸಂಘ ಸಂಸ್ಥೆ ಹಾಗೂ ಸಂಘಟನೆ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ನೇತೃತ್ವದಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ರವರ ಅಧ್ಯಕ್ಷತೆಯಲ್ಲಿ ಕನ್ನಡ ರಾಜ್ಯೋತ್ಸವ ನಡೆಯಲಿದೆ. ಕನ್ನಡ ರಾಜ್ಯೋತ್ಸವ ಆಚರಣೆ ಅಂಗವಾಗಿ ಪಟ್ಟಣದ ಎಲ್ಲ ಅಂಗಡಿಗಳ ಮಾಲೀಕರು ಸ್ವಯಂಪ್ರೇರಿತರಾಗಿ ಕನ್ನಡ ಬಾವುಟವನ್ನು ಹಾರಿಸಬೇಕು.

ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ

ಪಟ್ಟಣದ ತಾ.ಪಂ ಸಭಾಂಗಣದಲ್ಲಿ ತಹಸೀಲ್ದಾರ್ ಮನಿಷಾ ಎನ್ ಪತ್ರಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವನ್ನು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು.

ಪಟ್ಟಣದ ಬಾಲಕಿಯರ ಪ್ರೌಢಶಾಲೆಯ ಆವರಣದಲ್ಲಿ ನ. 1ರಂದು ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಅದಕ್ಕೂ ಮೊದಲು ಪಟ್ಟಣದ ಚಿತ್ರಾವತಿ ನದಿ ತೀರದಿಂದ ಪಟ್ಟಣದ ಮುಖ್ಯ ರಸ್ತೆಯಲ್ಲಿ ಭುವನೇಶ್ವರಿ ಭಾವಚಿತ್ರದೊಂದಿಗೆ ಮೆರವಣಿಗೆಯನ್ನು ವಿವಿಧ ಕಲಾತಂಡಗಳೊಂದಿಗೆ ಅದ್ಧೂರಿಯಾಗಿ ನಡೆಸಲು ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಯಿತು.

ಉತ್ಸವಕ್ಕೆ ಶಾಸಕರ ಅಧ್ಯಕ್ಷತೆ

ಪಟ್ಟಣದ ವಿವಿಧ ಸಂಘ ಸಂಸ್ಥೆ ಹಾಗೂ ಸಂಘಟನೆ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ನೇತೃತ್ವದಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ರವರ ಅಧ್ಯಕ್ಷತೆಯಲ್ಲಿ ಕನ್ನಡ ರಾಜ್ಯೋತ್ಸವ ನಡೆಯಲಿದೆ ಎಂದ ಅವರು ಕನ್ನಡ ರಾಜ್ಯೋತ್ಸವ ಆಚರಣೆ ಅಂಗವಾಗಿ ಪಟ್ಟಣದ ಎಲ್ಲ ಅಂಗಡಿಗಳ ಮಾಲೀಕರು ಸ್ವಯಂಪ್ರೇರಿತರಾಗಿ ಕನ್ನಡ ಬಾವುಟವನ್ನು ಹಾರಿಸುವ ಮೂಲಕ ನಾಡಿನ ಉತ್ಸವಕ್ಕೆ ಮೆರುಗು ತರುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಕನ್ನಡ ಚಿತ್ರಗಳ ಪ್ರದರ್ಶನ

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 10 ಜನ ಸಾಧಕರನ್ನು ಗುರುತಿಸಿ ಸನ್ಮಾನಿಸುವುದು, ಬಾಗೇಪಲ್ಲಿ ಪಟ್ಟಣದ ಚಿತ್ರಮಂದಿರಗಳಲ್ಲಿ ನವೆಂಬರ್‌ ತಿಂಗಳಲ್ಲಿ ಕನ್ನಡ ಸಿನೆಮಾ ಚಲನ ಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಬೇಕು. ಪ್ರತಿಭಾವಂತ ಮಕ್ಕಳಿಗೆ ಸನ್ಮಾನಿಸುವುದು ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ವೆಂಕಟರಾಮ್, ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಎನ್.ಕೃμÁ್ಣ ರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ನಾಗರಾಜು, ಶಿಕ್ಷಣ ಇಲಾಖೆ ಶಿವಪ್ಪ ,ಖಜಾನೆ ಇಲಾಖೆ ಅಧಿಕಾರಿಗಳಾದ ಕರಿಯಪ್ಪ, ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳಾದ ಕರವೇ ಬಿ.ಟಿಸಿ ಸೀನಾ, ಬಾಬಾಜಾನ್, ಜಭೀವುಲ್ಲಾ, ಕರವೇ ಕೆ.ಎಸ್ ಹರೀಶ್, ಸುಜಾತಮ್ಮ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.