ಸಾರಾಂಶ
ಕೂಡ್ಲಿಗಿ: ಪಟ್ಟಣದ ಮೈಲಾರ ಮಹದೇವ ಕ್ರೀಡಾಂಗಣದಲ್ಲಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ಜ.26ರಂದು ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಾನಾ ಸಂಘ, ಸಂಸ್ಥೆಗಳ ಮುಖಂಡರು, ಅಧಿಕಾರಿಗಳು ಸೇರಿ ಎಲ್ಲರೂ ಒಮ್ಮತದಿಂದ ತೀರ್ಮಾನಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಹಸೀಲ್ದಾರ್ ಎಂ.ರೇಣುಕಾ ಅಧ್ಯಕ್ಷತೆಯಲ್ಲಿ ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಈ ಕುರಿತು ನಿರ್ಧರಿಸಲಾಯಿತು.
ತಹಸೀಲ್ದಾರ್ ಎಂ.ರೇಣುಕಾ ಮಾತನಾಡಿ, ಪ್ರತಿ ವರ್ಷದಿಂದ ಈ ಬಾರಿ ಗಣರಾಜ್ಯೋತ್ಸವನ್ನು ಆಚರಿಸಲು ತಾಲೂಕು ಮಟ್ಟದ ಅಧಿಕಾರಿಗಳು, ನಾನಾ ಸಂಘ, ಸಂಸ್ಥೆಗಳು ಸೇರಿ ತಾಲೂಕಿನ ಜನತೆ ಸಹಕಾರ ನೀಡಬೇಕೆಂದು ಕೋರಿದರು. ಗಣರಾಜ್ಯೋತ್ಸವಕ್ಕೆ ಒಂದು ದಿನ ಮುಂಚಿತವಾಗಿ ಪಟ್ಟಣದ ಎಲ್ಲ ಸರ್ಕಾರಿ ಕಚೇರಿಗಳು, ಎಲ್ಲ ವೃತ್ತಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಬೇಕು. ವಿಶೇಷವಾಗಿ ಡಾ.ಬಿ.ಆರ್. ಅಂಬೇಡ್ಕರ್ ವೃತ್ತಕ್ಕೆ ವಿದ್ಯುತ್ ದೀಪಾಲಂಕಾರದ ಜತೆಗೆ ಹೂವಿನ ಅಲಂಕಾರವನ್ನು ಮಾಡಬೇಕೆಂದು ದಲಿತ ಮುಖಂಡರು ಅನೇಕರು ಒತ್ತಾಯಿಸಿದರು.ಮಹಾತ್ಮ ಗಾಂಧಿ ಚಿತಾಭಸ್ಮವಿರುವ ರಾಷ್ಟ್ರೀಯ ಹುತತ್ಮಾರ ಸ್ಮಾರಕಕ್ಕೆ ಪುಷ್ಪನಮನ, ನಂತರ ಧ್ವಜಾರೋಹಣ, ಧ್ವಜವಂದನೆ ನೆರೆವೇರಿಸುವುದು. ವೇದಿಕೆಯಲ್ಲಿ ಪಟ್ಟಣದ ವ್ಯಾಪ್ತಿ ಶಾಲೆಗಳ ವಿದ್ಯಾರ್ಥಿಗಳಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಂವಿಧಾನ ಮತ್ತು ಅಂಬೇಡ್ಕರ್ ಕುರಿತ ಹಾಡುಗಳ ನೃತ್ಯಗಳಿಗೆ ಹೆಚ್ಚಿನ ಆದ್ಯತೆ ಸಿಗಬೇಕು. ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ಪಟ್ಟಣದಲ್ಲಿ ಲಾರಿಗಳ ಸಂಚಾರ ನಿರ್ಬಂಧಿಸಬೇಕು ಎಂದು ಸಭೆಯಲ್ಲಿ ಮುಖಂಡರು ಸೂಚಿಸಿದರು.
ಸಭೆಯಲ್ಲಿಯ ಸಲಹೆ, ಸೂಚನೆಗಳನ್ನು ಪಾಲಿಸುವುದಾಗಿ ತಾಪಂ ಇಒ ಕೆ.ನರಸಪ್ಪ ತಿಳಿಸಿದರು.ಈ ಸಂದರ್ಭದಲ್ಲಿ ಪಪಂ ಅಧ್ಯಕ್ಷ ಕಾವಲ್ಲಿ ಶಿವಪ್ಪನಾಯಕ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಶ್ರೀಕಂಠಾಪುರ ವೆಂಕಟೇಶ್, ಡಾ.ಬಿ.ಆರ್. ಅಂಬೇಡ್ಕರ್ ಸಂಘದ ಅಧ್ಯಕ್ಷ ಗುಣಸಾಗರ ಕೃಷ್ಣಪ್ಪ, ಪಿಎಸ್‌ಐ ಸಿ.ಪ್ರಕಾಶ್, ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಎಸ್. ಜಗದೀಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಕೆ.ಜಿ. ಆಂಜನೇಯ, ಭಾರತ ಸೇವಾದಳ ತಾಲೂಕು ಅಧ್ಯಕ್ಷ ಬ್ಯಾಳಿ ವಿಜಯಕುಮಾರ ಗೌಡ, ಒನಕೆ ಓಬವ್ವ ಸಂಘದ ರಾಜ್ಯಾಧ್ಯಕ್ಷ ಹಿರೇಕುಂಬಳಗುಂಟೆ ಉಮೇಶ್, ಛಲವಾದಿ ಮಹಾಸಭಾ ತಾಲೂಕು ಅಧ್ಯಕ್ಷ ಮೊರಬನಹಳ್ಳಿ ಮಾರಪ್ಪ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎ.ಎಂ.ವೀರಯ್ಯ, ದಲಿತ ಮುಖಂಡ ಬಂಡೆ ರಾಘವೇಂದ್ರ, ಕರವೇ ಕೂಡ್ಲಿಗಿ ತಾಲೂಕು ಅಧ್ಯಕ್ಷ ಕಾಟೇರ ಹಾಲೇಶ್, ಸಮಾಜ ಸೇವಕರಾದ ಶಾಮಿಯಾನ ಚಂದ್ರಪ್ಪ, ಅಬ್ದುಲ್ ರೆಹಮಾನ್ ಸೇರಿ ತಾಲೂಕು ಮಟ್ಟದ ಅಧಿಕಾರಿಗಳು, ನಾನಾ ಸಂಘ, ಸಂಸ್ಥೆಗಳ ಮುಖಂಡರು ಇದ್ದರು.
;Resize=(128,128))
;Resize=(128,128))
;Resize=(128,128))