ಸಾರಾಂಶ
ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿರುವ ಜನಔಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರ ದುರದೃಷ್ಟಕರ. ಈ ಬಗ್ಗೆ ರಾಜ್ಯ ಸರ್ಕಾರ ಪುನರ್ ಪರಿಶೀಲನೆ ನಡೆಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆಗ್ರಹಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಗಳೂರು
ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿರುವ ಜನಔಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರ ದುರದೃಷ್ಟಕರ. ಈ ಬಗ್ಗೆ ರಾಜ್ಯ ಸರ್ಕಾರ ಪುನರ್ ಪರಿಶೀಲನೆ ನಡೆಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆಗ್ರಹಿಸಿದ್ದಾರೆ.ಜನಔಷಧಿ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಲಕ್ಷಾಂತರ ಬಡ ಜನರಿಗೆ ಕಡಿಮೆ ಬೆಲೆಯ, ಉತ್ತಮ ಗುಣಮಟ್ಟದ ಜನರಿಕ್ ಔಷಧಿಗಳನ್ನು ಒದಗಿಸುತ್ತಿದೆ. ಎಷ್ಟೋ ಮಂದಿ ಔಷಧಕ್ಕೆ ಹಣ ಇಲ್ಲ ಎಂದು ಮಾತ್ರೆಗಳನ್ನು ತೆಗೆದುಕೊಳ್ಳದೆ ಇರುವವರನ್ನು ನಾವು ಕಂಡಿದ್ದೇವೆ. ಈ ಯೋಜನೆಯಿಂದ ಅತ್ಯಂತ ಕಡಿಮೆ ದರದಲ್ಲಿ ಔಷಧವನ್ನು ಪಡೆಯುವ ಕಾರಣ ತಮ್ಮ ಜೀವವನ್ನು ಉಳಿಸಿದ್ದಾರೆ.ಆದರೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಈ ಯೋಜನೆ ಬಗ್ಗೆ ಆರ್ಥಿಕವಾಗಿಯೂ ಸಾಮಾಜಿಕವಾಗಿಯೂ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಜನಔಷಧಿ ಕೇಂದ್ರಗಳು ಬಡವರಿಗೆ ಅವಶ್ಯಕವಿಲ್ಲ, ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ಔಷಧಿ ಕೊಡಬೇಕು ಎಂಬ ಹೇಳಿಕೆ ನೀಡಿದ್ದು ಸರಿಯಲ್ಲ ಎಂದರು.
ಆದ್ದರಿಂದ ರಾಜ್ಯ ಸರ್ಕಾರ ತಕ್ಷಣ ಈ ತೀರ್ಮಾನವನ್ನು ಹಿಂಪಡೆಯಬೇಕು. ಬಡವರ ಔಷಧಿಯ ಹಕ್ಕನ್ನು ಕಿತ್ತುಕೊಳ್ಳಬಾರದು. ಜನಔಷಧಿ ಕೇಂದ್ರಗಳ ಪುನರ್ ಸ್ಥಾಪನೆ ಮತ್ತು ಹೊಸ ಕೇಂದ್ರಗಳ ಸ್ಥಾಪನೆಗೆ ಸರ್ಕಾರ ಸಹಕರಿಸಬೇಕು ಎಂದು ಕಿಶೋರ್ ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.