ಸಾರಾಂಶ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಜ.31ರಂದು ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಸ್ವಾಮಿ ವಿವೇಕಾನಂದರ ಅಂತಾರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಸದ್ಭಾವನ ಪ್ರಶಸ್ತಿ ಪ್ರದಾನ ಮತ್ತು ರಾಜ್ಯಮಟ್ಟದ ಯುವಜನ ಮೇಳ ಹಮ್ಮಿಕೊಳ್ಳಲಾಗುವುದು ಎಂದು ಡಾ.ಎಸ್.ಬಾಲಾಜಿ ಹೇಳಿದರು.
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ
ಜ.31ರಂದು ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಸ್ವಾಮಿ ವಿವೇಕಾನಂದರ ಅಂತಾರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಸದ್ಭಾವನ ಪ್ರಶಸ್ತಿ ಪ್ರದಾನ ಮತ್ತು ರಾಜ್ಯಮಟ್ಟದ ಯುವಜನ ಮೇಳ ಹಮ್ಮಿಕೊಳ್ಳಲಾಗುವುದು ಎಂದು ಡಾ.ಎಸ್.ಬಾಲಾಜಿ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ 5 ಪ್ರಶಸ್ತಿ, ರಾಷ್ಟ್ರೀಯ ಮಟ್ಟದ ಹತ್ತು ಪ್ರಶಸ್ತಿ, ರಾಜ್ಯಮಟ್ಟದ 31 ಮತ್ತು ಎರಡು ಸಂಘ ಸಂಸ್ಥೆಗಳಿಗೆ ನೀಡುವ ರಾಜ್ಯ ಮಟ್ಟದ ಪ್ರಶಸ್ತಿ ಹಾಗೂ ರಾಜ್ಯಮಟ್ಟದ ಯುವಜನ ಮೇಳ ಕಾರ್ಯಕ್ರಮ ಮಾಡಲು ತೀರ್ಮಾನಿಸಿದ್ದೇವೆ. ಅದ್ದೂರಿ ಕಾರ್ಯಕ್ರಮ ನಡೆಸಲು ತಿರ್ಮಾನಿಸಿದ್ದು, ಎಲ್ಲರ ಸಹಕಾರ ಅತ್ಯಗತ್ಯವಾಗಿದೆ. ಹೀಗಾಗಿ, ಸಂಘದ ಮುಖಂಡರು ಉತ್ಸಾಹಿಗಳಾಗಿ ಕಾರ್ಯಕ್ರಮದ ಯಶಸ್ವಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.ಜಿಲ್ಲಾಧ್ಯಕ್ಷ ಪುಂಡಲಿಕ್ ಮುರಾಳ ಮಾತನಾಡಿ, ಕಳೇದ 15 ವರ್ಷಗಳಿಂದ ಮುದ್ದೇಬಿಹಾಳ ಪಟ್ಟಣದಲ್ಲಿ ರಾಜ್ಯವೇ ಮೆಚ್ಚುವಂತೆ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ. ಸರ್ಕಾರ ಯುವಕ ಸಂಘಗಳ ಕಡಗಣನೆ ಮಾಡುತ್ತಿರುವುದು ಮಾತ್ರವಲ್ಲದೇ, ಯುವಜನ ಮೇಳ ಹಾಗೂ ಯುವ ಪ್ರಶಸ್ತಿಗಳನ್ನು ನಿಲ್ಲಿಸಿದ್ದು, ಪುನಃ ಪ್ರಾರಂಭಿಸಬೇಕು. ಸಂಘಗಳಿಗೆ ಅನುದಾನವನ್ನು ನೀಡಬೇಕು. ಅಂದಾಗ ಯುವಕ ಸಂಘಗಳು ಬೆಳೆಯಲು ಸಾಧ್ಯವಾಗುತ್ತದೆ. ಅಕ್ಟೋಬರ್ ತಿಂಗಳಲ್ಲಿ ಕೊಪ್ಪಳದಲ್ಲಿ ಅಂಬೇಡ್ಕರ್ ಪ್ರಶಸ್ತಿ, ಸ್ಥಳೀಯ ಕ್ಷೇತ್ರದಲ್ಲಿ ವಿವಿಧ ಸಾಧನೆ, ಸಾಹಸ ಮಾಡಿದವರಿಗೆ ಹಾಗೂ ವೀರಯೋಧರಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಿದೆ. ಈ ಸಂದರ್ಭದಲ್ಲಿ ಕೊಪ್ಪಳದ ಗವಿ ಸಿದ್ದೇಶ್ವರ ಶ್ರೀ, ಹಂಪಿ ಮತ್ತು ಜಾನಪದ ವಿಶ್ವವಿದ್ಯಾಲಯದ ಕುಲಪತಿಗಳು, ಸಚಿವ ಸಂತೋಷ ಲಾಡ್ ಮತ್ತು ಸ್ಥಳೀಯ ಶಾಸಕ ಸಿ.ಎಸ್.ನಾಡಗೌಡ ಸೇರಿ ಗಣ್ಯರು ಭಾಗವಹಿಸಲಿದ್ದಾರೆ ಎಂದರು.ಸಂಘದ ಗೌರವ ಅಧ್ಯಕ್ಷ ಅಶೋಕ ನಾಡಗೌಡ, ವಿಶ್ರಾಂತ ಪ್ರೊಫೆಸರ್ ಎಸ್.ಎಸ್.ಹೂಗಾರ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ಲ, ಬಾಗಲಕೋಟೆ ಜಿಲ್ಲಾಧ್ಯಕ್ಷ ದಾನಯ್ಯಸ್ವಾಮಿ ಹಿರೇಮಠ, ನಿಕಟಪೂರ್ವ ಅಧ್ಯಕ್ಷ ಮಾಂತೇಶ ಬೂದಿಹಾಳಮಠ, ತಾಲೂಕ ಅಧ್ಯಕ್ಷ ವೀರೇಶ ಗುರುಮಠ, ಪತ್ರಕರ್ತ ಸಂಘದ ಬಾಗಲಕೋಟ ಜಿಲ್ಲಾಧ್ಯಕ್ಷ ಡಿ.ಬಿ.ವಿಜಯಶಂಕರ, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಗಮೇಶ ಹಾರಿವಾಳ, ತಾಲೂಕ ಪ್ರಧಾನ ಕಾರ್ಯದರ್ಶಿ ರಾಜು ತುಂಬಗಿ, ಸಂಗಣ್ಣ ಕಂಚ್ಯಾಣಿ, ತಾಲೂಕು ಉಪಾಧ್ಯಕ್ಷ ಅಪ್ಪುಗೌಡ ಪಾಟೀಲ, ಹಿರೇಮುರಾಳ ವಲಯ ಘಟಕದ ಅಧ್ಯಕ್ಷ ಮೈಬು ಮುಲ್ಲಾ, ಉಪಾಧ್ಯಕ್ಷ ಸಿದ್ದಯ್ಯ ಮಠ, ಅಮಿನಗಡದ ವಲಯ ಘಟಕದ ಅಧ್ಯಕ್ಷ ಕಿರಣ್, ಭೀಮಸಿ ರಾಠೋಡ, ಜಾನಪದ ಯುವ ಬ್ರಿಗೇಡ್ ತಾಲೂಕು ಸಂಚಾಲಕ ಸುಚಿತ ಚಳ್ಳಗೇರಿ, ನಗರ ಘಟಕದ ಸಂಚಾಲಕ ಕೃಷ್ಣಾ ಕುಂಬಾರ, ಆಕಾಶ ನಾಲತವಾಡ ಸೇರಿ ಹಲವರು ಇದ್ದರು.