A preparatory meeting was held on Friday at the Kalagi Inspection Bungalow, presided over by the Tahsildar, to plan the grand celebration of this year's Independence Day.
ಕಾಳಗಿ: ಪ್ರಸಕ್ತ ಸಾಲಿನ ಸ್ವಾತಂತ್ರ್ಯ ದಿನವನ್ನು ಅದ್ಧೂರಿಯಾಗಿ ಆಚರಿಸುವ ಸಲುವಾಗಿ ಕಾಳಗಿಯ ಪ್ರವಾಸಿ ಮಂದಿರದಲ್ಲಿ ತಹಸೀಲ್ದಾರರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಶುಕ್ರವಾರ ಜರುಗಿತು.ರಾಷ್ಟ್ರೀಯ ಹಬ್ಬಗಳ ಆಚರಣೆಯ ಕುರಿತು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ನಡೆಯುವ ಪೂರ್ವಭಾವಿ ಸಭೆಗಳಿಗೆ ಕೆಲ ಅಧಿಕಾರಿಗಳು ಗೈರು ಹಾಜರಾಗಿ ನಿರ್ಲಕ್ಷ ವಹಿಸಿದ್ದಾರೆ. ಇಂತಹ ವರ್ತನೆ ಮುಂದುವರೆದರೆ ನೋಟಿಸ್ ನೀಡಿ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಅನಿವಾರ್ಯ ಎಂದು ತಹಸೀಲ್ದಾರ್ ಪೃಥ್ವಿರಾಜ ಪಾಟೀಲ ಎಚ್ಚರಿಕೆ ನೀಡಿದರು.ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಆ.15 ರ ಸ್ವತಂತ್ರ ದಿನಾಚರಣೆ ರಾಷ್ಟ್ರೀಯ ಹಬ್ಬವನ್ನು ತಾಲೂಕಿನ ಎಲ್ಲ ಇಲಾಖೆ ಅಧಿಕಾರಿಗಳು ಪಾಲ್ಗೊಂಡು ಕಾರ್ಯಕ್ರಮ ಯಶ್ವಸ್ವಿಗೊಳಿಸುವುದು ಎಲ್ಲ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಪ್ರತಿಯೊಂದು ಇಲಾಖೆಯವರು ಜವಾಬ್ದಾರಿಯಿಂದ ಅವರಿಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ರಾಷ್ಟ್ರೀಯ ಹಬ್ಬವನ್ನು ಯಶ್ವಸಿಯಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.ಸಿಪಿಐ ಜಗದೇವಪ್ಪ ಪಾಳಾ, ಪಿ ಎಸ್ ಐ ತಿಮ್ಮಯ್ಯ ಬಿ.ಕೆ, ದತ್ತು ಕಲಾಲ, ಗುರುರಾಜ ಮದ್ದೂರ, ಶರಣಪ್ಪ ಬೇಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
