ಸರ್ಕಾರದ ಸುತ್ತೋಲೆ ವಿರೋಧಿಸಿ ನಾಳೆ ಪ್ರತಿಭಟನೆಗೆ ನಿರ್ಧಾರ

| Published : Nov 22 2023, 01:00 AM IST

ಸರ್ಕಾರದ ಸುತ್ತೋಲೆ ವಿರೋಧಿಸಿ ನಾಳೆ ಪ್ರತಿಭಟನೆಗೆ ನಿರ್ಧಾರ
Share this Article
  • FB
  • TW
  • Linkdin
  • Email

ಸಾರಾಂಶ

ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಜಿಲ್ಲಾ ಪಂಚಾಯಿತಿಯ ಸಿಇಒ ಅಧೀನಕ್ಕೆ ಒಳಪಡಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಇದನ್ನು ವಿರೋಧಿಸಿ ನ. 23 ರಂದು ನಗರದಲ್ಲಿ ಮೌನ ಪ್ರತಿಭಟನೆಯನ್ನು ನಡೆಸಲು ಮಂಗಳವಾರ ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಯಿತು.

ಪಪೂ ಶಿಕ್ಷಣ ಇಲಾಖೆಯನ್ನು ಜಿಪಂ ಸಿಇಓ ಅಧೀನಕ್ಕೆ ಒಳಡಿಸಿದ್ದಕ್ಕೆ ವಿರೋಧ ಕನ್ನಡಪ್ರಭ ವಾರ್ತೆ ಚಿತ್ರದುರ್ಗ ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಜಿಲ್ಲಾ ಪಂಚಾಯಿತಿಯ ಸಿಇಒ ಅಧೀನಕ್ಕೆ ಒಳಪಡಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಇದನ್ನು ವಿರೋಧಿಸಿ ನ. 23 ರಂದು ನಗರದಲ್ಲಿ ಮೌನ ಪ್ರತಿಭಟನೆಯನ್ನು ನಡೆಸಲು ಮಂಗಳವಾರ ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಯಿತು.

ಸಭೆಯಲ್ಲಿ ಮಾತನಾಡಿದ ಉಪನ್ಯಾಸಕರ ಸಂಘದ ಆಧ್ಯಕ್ಷರಾದ ಬಿ.ಆರ್. ಮಲ್ಲೇಶಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ಯನ್ನು ಜಿಲ್ಲಾ ಪಂಚಾಯಿತಿಯ ಸಿಇಒ ಅಧೀನಕ್ಕೆ ಒಳಪಡಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಇದು ಅವೈಜ್ಞಾನಿಕ ಹಾಗೂ ಅಪ್ರಸ್ತುತವಾಗಿದೆ. ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಹಾಗೂ ಸಿಇಟಿ ಅರ್ಹತಾ ಪರೀಕ್ಷೆ ನಡೆಸುವಲ್ಲಿ ದೇಶದ ಇತರೇ ರಾಜ್ಯಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮಾದರಿಯಾಗಿ ಪ್ರಶಂಸೆಗೆ ಪಾತ್ರವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಸುತ್ತೋಲೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಸ್ಮಿತೆಗೆ ಬಹುದೊಡ್ಡ ತೊಡಕಾಗಿದೆ ಎಂದರು. ಈ ಆದೇಶವನ್ನು ಹಿಂಪಡೆಯಬೇಕೆಂದು ಸರ್ಕಾರವನ್ನು ಒತ್ತಾಯಿಸಲು ನವೆಂಬರ್ 23ರಂದು ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ, ಉಪನ್ಯಾಸಕರ ಹಾಗೂ ಬೋಧಕೇತರ ಸಂಘಟನೆಗಳು ತೀರ್ಮಾನಿಸಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನ, ಅನುದಾನ ರಹಿತ ಕಾಲೇಜುಗಳ ಪ್ರಾಂಶುಪಾಲರುಗಳು, ಉಪನ್ಯಾಸಕರುಗಳು ಹಾಗೂ ಬೋಧಕೇತರ ಸಿಬ್ಬಂದಿ ಸದರಿ ದಿನದಂದು ಬೆಳಗ್ಗೆ 10 ಗಂಟೆಗೆ ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆವರಣಕ್ಕೆ ಆಗಮಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿ ಸರ್ಕಾರದ ಗಮನ ಸೆಳೆದು ಆದೇಶ ಹಿಂಪಡೆಯಲು ಹಕ್ಕು ಒತ್ತಾಯಿಸಲು ಮನವಿ ಮಾಡಿದ್ದಾರೆ. ಜಿಲ್ಲಾ ಉಪನಿರ್ದೇಶಕರ ಮೂಲಕ ಸ್ವತಂತ್ರವಾಗಿ ನಡೆಯುತ್ತಿದ್ದ ಇಲಾಖಾ ಕಾರ್ಯ ಚಟುವಟಿಕೆಗಳನ್ನು ಈಗ ಜಿ.ಪಂ. ಸಿಇಓಗಳ ಅಧಿನಕ್ಕೆ ಒಳಪಡಿಸಿರುವುದು ಸರಿಯಲ್ಲ ಕೂಡಲೇ ವಾಪಾಸ್ ಪಡೆಯಬೆಕೆಂದು ಆಗ್ರಹಿಸಲಾಯಿತು. ಸಭೆಯಲ್ಲಿ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ರಂಗಪ್ಪ, ಉಪನ್ಯಾಸಕರ ಸಂಘದ ಆಧ್ಯಕ್ಷರಾದ ಬಿ.ಆರ್.ಮಲ್ಲೇಶಪ್ಪ, ಕಾರ್ಯಾ ಧ್ಯಕ್ಷ ಜಿ.ಎಸ್.ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿ ಎ.ಕಾಂತರಾಜ್ ಹಾಗೂ ಪಪೂ ಕಾಲೇಜುಗಳ ಭೋದಕೇತರ ಸಂಘದ ಅಧ್ಯಕ್ಷ ದುರುಗೇಶಪ್ಪ ಸೇರಿ ಇತರರಿದ್ದರು.