ಸಾರಾಂಶ
ಸೋಮವಾರಪೇಟೆ ಪಟ್ಟಣಕ್ಕೆ ಆಗಮಿಸುವ ಸಂವಿಧಾನ ಜಾಗೃತಿ ಜಾಥಾವನ್ನು, ಅದ್ದೂರಿಯಾಗಿ ಸ್ವಾಗತಿಸಲು ತೀರ್ಮಾನಿಸಲಾಯಿತು
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಫೆ.19ರಂದು ಸೋಮವಾರಪೇಟೆ ಪಟ್ಟಣಕ್ಕೆ ಆಗಮಿಸುವ ಸಂವಿಧಾನ ಜಾಗೃತಿ ಜಾಥಾವನ್ನು, ಅದ್ದೂರಿಯಾಗಿ ಸ್ವಾಗತಿಸಲು ತೀರ್ಮಾನಿಸಲಾಯಿತು.ಪಂಚಾಯಿತಿ ಆಡಳಿತಾಧಿಕಾರಿ ತಹಸೀಲ್ದಾರ್ ನವೀನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಜಾಥಾ ಪೂರ್ವಭಾವಿ ಸಭೆಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರು ಹಾಗು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡು ಸಲಹೆ ನೀಡಿದರು.ಡಾ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆಯೊಂದಿಗೆ ಜೇಸೀ ವೇದಿಕೆಯಲ್ಲಿ ಕಾರ್ಯಕ್ರಮವಿರುತ್ತದೆ. ಸಂಪನ್ಮೂಲ ವ್ಯಕ್ತಿ ಭಾಷಣ ಮಾಡಲಿದ್ದಾರೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘಸಂಸ್ಥೆಯವರು ಭಾಗವಹಿಸಲಿದ್ದಾರೆ ಎಂದು ಆಡಳಿತಾಧಿಕಾರಿ ತಿಳಿಸಿದರು. ಸಭೆಯಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ, ಪಂಚಾಯಿತಿ ಸದಸ್ಯರಾದ ಶೀಲಾ ಡಿಸೋಜ, ಮೃತ್ಯುಂಜಯ, ಮೋಹಿನಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಡಿ. ವಿಜೇತ್, ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ಅಧ್ಯಕ್ಷ ಗಂಗಾಧರ್, ಜಯಕರ್ನಾಟಕದ ಅಧ್ಯಕ್ಷ ಸಿ.ಬಿ.ಸುರೇಶ್‍ಶೆಟ್ಟಿ, ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಮಹೇಶ್, ಜೇಸಿ ಸಂಸ್ಥೆಯ ಅಧ್ಯಕ್ಷ ಎಸ್.ಆರ್.ವಸಂತ್ ಮತ್ತಿತರರು ಇದ್ದರು.