ಸಾರಾಂಶ
ತರೀಕೆರೆ, ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ಆ.12 ರಿಂದ ನಿರ್ಣಾಯಕ ಹೋರಾಟ ನಡೆಸಲು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತೀರ್ಮಾನಿಸಿದೆ ಎಂದು ತರೀಕೆರೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ವಿ.ರವಿ ಹೇಳಿದ್ದಾರೆ.
ತರೀಕೆರೆ ಮತ್ತು ಅ್ಜಜಂಪುರ ತಾಲೂಕುಗಳ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪತ್ರಿಕಾಗೋಷ್ಠಿ
ಕನ್ನಡಪ್ರಭ ವಾರ್ತೆ, ತರೀಕೆರೆಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ಆ.12 ರಿಂದ ನಿರ್ಣಾಯಕ ಹೋರಾಟ ನಡೆಸಲು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತೀರ್ಮಾನಿಸಿದೆ ಎಂದು ತರೀಕೆರೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ವಿ.ರವಿ ಹೇಳಿದ್ದಾರೆ.
ಸೋಮವಾರ ತರೀಕೆರೆ ಮತ್ತು ಅ್ಜಜಂಪುರ ತಾಲೂಕುಗಳ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಪ್ರಸ್ತತ ಇರುವ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮುಂಚಿತವಾಗಿ ನೇಮಕವಾದ ಶಿಕ್ಷಕರಿಗೆ ಪೂರ್ವಾನ್ವಯ ಮಾಡಬಾರದು, ಪ್ರೌಢಶಾಲಾ ಶಿಕ್ಷಕರಾಗಿ ಬಡ್ತಿ ಹೊಂದುವಾಗ 2016ರ ಪೂರ್ವದಂತೆ ಅರ್ಹತೆ ಅಧಾರದ ಮೇಲೆ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ಮುಖ್ಯ ಗುರುಗಳಿಗೆ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾಜ್ಯೇಷ್ಠತೆ ಆಧಾರದ ಮೇಲೆ ಬಡ್ತಿ ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು ಎಂದು ಮನವಿ ಮಾಡಿದರು.2016ರಿಂದ ಹಲವಾರು ಬಾರಿ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದ್ದರೂ ಇದುವರೆಗೂ ಈ ಸಂಬಂಧವಾಗಿ ನಮ್ಮ ಯಾವುದೇ ಬೇಡಿಕೆಗಳನ್ನು ಪರಿಹರಿಸುವ ಕಾರ್ಯ ಆಗಿಲ್ಲ. ನಮ್ಮ ಬೇಡಿಕೆಗಳು ಈಡೇರುವವರೆಗೂ ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಒಂದು ದಿನದ ಬೃಹತ್ ಹೋರಾಟ ಕೈಗೊಳ್ಳಲು ರಾಜ್ಯ ಸಂಘ ತೀರ್ಮಾನಿಸಿದೆ ಎಂದು ಹೇಳಿದರು.
ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಆನಂದಕುಮಾರ್ ಎಚ್.ಡಿ ಅವರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೃಹತ್ ಹೋರಾಟದ ರೂಪು ರೇಷೆಗಳನ್ನು ವಿವರಿಸಿ ಮಾತನಾಡಿ 2017ರ ಸಿ ಆಂಡ್ ಆರ್ ನಿಯಮಗಳು 2016ಕ್ಕಿಂತ ಮುಂಜೆ ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂಬ ಕಾರ್ಯಾದೇಶ ಹೊರಡಿಸಿ ಮೂಲತಃ 1 ರಿಂದ 7 ನೇಮಕ ಹೊಂದದವರನ್ನು ಪಿಎಸ್ ಟಿ ಎಂದು ಪದನಾಮ ಮಾಡಿ 1 ರಿಂದ 5ಕ್ಕೆ ಸೀಮಿತಗೊಳಿಸಿರುವುದನ್ನು ಹಿಂಪಡೆಯಬೇಕು. ಅರ್ಹ ವಿದ್ಯಾರ್ಹತೆ ಹೊಂದಿದ 2016ಕ್ಕಿಂತ ಪೂರ್ವದಲ್ಲಿ ನೇಮಕಾತಿ ಆಗಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸೇವಾಜ್ಯೇಷ್ಠತೆಯೊಂದಿಗೆ ಬಡ್ತಿ ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ತಿಳಿಸಿದರು.ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಎಂ.ಬಿ.ರಾಮಚಂದ್ರಪ್ಪ ಮಾತನಾಡಿ ವರ್ಗಾವಣೆಯಲ್ಲಿ 2017ರ ಸಿಆಂಡ್ ಆರ್ ನಿಯಮದಿಂದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಅನ್ಯಾಯವಾಗುತ್ತಿದೆ. ಇದನ್ನು ಸರಿಪಡಿಸಬೇಕು ಎಂದು ತಿಳಿಸಿದರು.
ಅಜ್ಜಂಪುರ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗರಾಜ್, ಸಂಘದ ನಿರ್ದೇಶಕ ಆನಂತಪ್ಪ ಸಿ.ಆರ್. ಪುಟ್ಟಸ್ವಾಮಿ ಮಾತನಾಡಿದರು. ತರೀಕೆರೆ ಮತ್ತು ಅಜ್ಜಂಪುರ ತಾಲೂಕು ಪ್ರಾ.ಶಾ.ಶಿ.ಸಂಘದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.6ಕೆಟಿಆರ್.ಕೆ.1ಃ
ತರೀಕೆರೆಯಲ್ಲಿ ತರೀಕೆರೆ ಮತ್ತು ಅ್ಜಜಂಪುರ ತಾಲೂಕುಗಳ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಪತ್ರಿಕಾ ಗೋಷ್ಠಿ ಏರ್ಪಡಿಸಲಾಗಿತ್ತು.