ಪ್ರತ್ಯೇಕ ಪ್ರಾಧಿಕಾರ ಘೋಷಣೆ: ಸಂಭ್ರಮಾಚರಣೆ

| Published : Feb 19 2024, 01:31 AM IST

ಪ್ರತ್ಯೇಕ ಪ್ರಾಧಿಕಾರ ಘೋಷಣೆ: ಸಂಭ್ರಮಾಚರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಬಜೆಟ್‌ನಲ್ಲಿ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ ಘೋಷಣೆ ಮಾಡಿರುವುದರಿಂದ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಾಷ್ಟ್ರೀಯ ಬಸವಸೈನ್ಯ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪರಸ್ಪರ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ಬಜೆಟ್‌ನಲ್ಲಿ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ ಘೋಷಣೆ ಮಾಡಿರುವುದರಿಂದ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಾಷ್ಟ್ರೀಯ ಬಸವಸೈನ್ಯ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪರಸ್ಪರ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಮಾತನಾಡಿ, ಕಳೆದ 20 ವರ್ಷಗಳಿಂದ ರಾಷ್ಟ್ರೀಯ ಬಸವ ಸೈನ್ಯ ಸಂಘಟನೆಯ ನೇತೃತ್ವದಲ್ಲಿ ಬಸವ ಜನ್ಮಸ್ಥಳ ಬಸವನ ಬಾಗೇವಾಡಿ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ರಚನೆ ಆಗಬೇಕೆಂದು ಹೋರಾಟಗಳನ್ನು ನಡೆಸುತ್ತಾ ಬಂದಿತ್ತು. ಶುಕ್ರವಾರ ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್‌ನಲ್ಲಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದಾಗಿ ಘೋಷಣೆ ಮಾಡಿರುವುದು ಬಸವ ನಾಡಿನ ಜನರ ಬಹುದಿನದ ಬೇಡಿಕೆ ಈಡೇರಿದಂತಾಗಿದೆ. ನಮ್ಮ ಬೇಡಿಕೆಗೆ ಸ್ಪಂದಿಸಿದ ಜವಳಿ, ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲರ ಶ್ರಮ ಬಹಳಷ್ಟಿದೆ. ಸಚಿವರಿಗೆ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಹೇಳಿದರು.

ನಿವೃತ್ತ ಶಿಕ್ಷಕ ಎಂ.ಜಿ.ಆದಿಕೊಂಡ ಮಾತನಾಡಿ, ಕಾಯಕ, ದಾಸೋಹ,ಸಮಾನತೆ ಸಂದೇಶ ಸಾರಿದ ಬಸವೇಶ್ವರ ಜನಿಸಿದ ಬಸವನಬಾಗೇವಾಡಿ ಸಮಗ್ರ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಾಧಿಕಾರ ರಚನೆಗೆ ಸಿಎಂ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದು ಬಸವ ಭಕ್ತರಿಗೆ ಹರ್ಷ ಉಂಟುಮಾಡಿದೆ ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ಲೋಕನಾಥ ಅಗರವಾಲ, ಬಸಣ್ಣ ದೇಸಾಯಿ, ಬಸವರಾಜ ಹಾರಿವಾಳ, ಬಸವರಾಜ ಗೊಳಸಂಗಿ, ಶೇಖರ ಗೊಳಸಂಗಿ, ಸಂಗಮೇಶ ಓಲೇಕಾರ, ಸಂಗಣ್ಣ ಕಲ್ಲೂರ, ಅಶೋಕ ಹಾರಿವಾಳ, ಶ್ರೀಕಾಂತ ಕೊಟ್ರಶೆಟ್ಟಿ, ಸುನಿಲಗೌಡ ಚಿಕ್ಕೊಂಡ, ಜಟ್ಟಿಂಗರಾಯ ಮಾಲಗಾರ, ಮನ್ನಾನ ಶಾಬಾದಿ, ನಿಂಗಪ್ಪ ಅವಟಿ, ಸಂಜು ಬಿರಾದಾರ ಸುರೇಶಗೌಡ ಪಾಟೀಲ, ಪ್ರಶಾಂತ ಮುಂಜಾನೆ, ಅರವಿಂದ ಸಾಲವಾಡಗಿ, ಮಾಂತೇಶ ಸಾಸಾಬಾಳ ,ಶೇಖರಗೌಡ ಪಾಟೀಲ, ಪರಶುರಾಮ ದಿಂಡವಾರ, ಪ್ರವೀಣ ಪೂಜಾರಿ, ಅನಿಲ ದುಂಬಾಳಿ, ಶಾಂತು ಡಂಬಳ, ಶಿವಾನಂದ ಮಂಗಾನವರ ಇದ್ದರು.