ಮಳೆ ಕೊರತೆಯಿಂದ ನಿರೀಕ್ಷಿತ ಪ್ರಮಾಣದಲ್ಲಿ ಬೆಳೆ ಬಂದಿಲ್ಲ. ರೈತರು ಎಕರೆಗೆ ₹60ರಿಂದ ₹70 ಸಾವಿರ ಖರ್ಚು ಮಾಡಿದ್ದರೂ ಹಾಕಿದ ಬಂಡವಾಳವೂ ಮರಳಿಲ್ಲ. ಕೃಷಿ ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿ ಅರೆಬರೆ ಬರಗಾಲ ಇದೆ ಎನ್ನುತ್ತಿದ್ದಾರೆ. ಈ ಕುರಿತು ಸಚಿವ ಸತೀಶ ಜಾರಕಿಹೊಳಿ ಅವರಿಗೂ ಬರ ಘೋಷಣೆಗೆ ಮನವಿ ಮಾಡಲಾಗಿದೆ.
ಹುಬ್ಬಳ್ಳಿ:
ಧಾರವಾಡ ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದೆ ಬೆಳೆ ಹಾನಿಯಾಗಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ ರೈತರಿಗೆ ಪರಿಹಾರ ಒದಗಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಸಂಚಾಲಕ ಸಿದ್ದಣ್ಣ ತೇಜಿ ಆಗ್ರಹಿಸಿದರು.ನಗರದಲ್ಲಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕಾರ್ಮಿಕ ಸಂಘಟನೆ ಮತ್ತು ಆಮ್ ಆದ್ಮಿ ಪಕ್ಷದ ವತಿಯಿಂದ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಮಳೆ ಕೊರತೆಯಿಂದ ನಿರೀಕ್ಷಿತ ಪ್ರಮಾಣದಲ್ಲಿ ಬೆಳೆ ಬಂದಿಲ್ಲ. ರೈತರು ಎಕರೆಗೆ ₹60ರಿಂದ ₹70 ಸಾವಿರ ಖರ್ಚು ಮಾಡಿದ್ದರೂ ಹಾಕಿದ ಬಂಡವಾಳವೂ ಮರಳಿಲ್ಲ. ಕೃಷಿ ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿ ''''''''''''''''ಅರೆಬರೆ ಬರಗಾಲ'''''''''''''''' ಇದೆ ಎನ್ನುತ್ತಿದ್ದಾರೆ. ಈ ಕುರಿತು ಸಚಿವ ಸತೀಶ ಜಾರಕಿಹೊಳಿ ಅವರಿಗೂ ಬರ ಘೋಷಣೆಗೆ ಮನವಿ ಮಾಡಲಾಗಿದೆ. ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳನ್ನು ಬರಪೀಡತದಿಂದ ಹೊರಗಿಟ್ಟಿರುವುದು ಉತ್ತರ ಕರ್ನಾಟಕದ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.ಒಂದು ವಾರದ ಗಡುವು:
ಧಾರವಾಡ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಸರ್ಕಾರಕ್ಕೆ ಒಂದು ವಾರದ ಗಡುವು ನೀಡಲಾಗಿದ್ದು, ಈ ಅವಧಿಯಲ್ಲಿ ನಿರ್ಧಾರ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ, ರಾಷ್ಟ್ರೀಯ ಹೆದ್ದಾರಿ ಬಂದ್ ಸೇರಿದಂತೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.ಸುದ್ದಿಗೋಷ್ಠಿಯಲ್ಲಿ ರಮೇಶ ಬೋಸ್ಲೆ, ಹುಸೇನಭಾಷಾ ತಳೆವಾಡ, ರವಿರಾಜ ಕಂಬಳಿ, ಸತೀಶ ಕಳ್ಳಿಮನಿ, ಶೇಖವ್ವ ಕೊಡತಗಿ, ಮೀನಾಕ್ಷಿ ತುರಮರಿ, ನಾಸೀರಅಹ್ಮದ ಮುಲ್ಲಾ, ನಿಂಗಪ್ಪ ಧಾರವಾಡ ಹಾಗೂ ನಾಗಪ್ಪ ಧಾರವಾಡ ಸೇರಿ ಹಲವರಿದ್ದರು.