ಕನ್ನಡಪ್ರಭ ವಾರ್ತೆ ಗೋಕಾಕ ಬೆಳಗಾವಿಯನ್ನು ಎರಡನೇ ಅಧಿಕೃತವಾಗಿ ರಾಜಧಾನಿ ಎಂದು ಘೋಷಿಸಬೇಕು, ಸುವರ್ಣಸೌಧದಲ್ಲಿ ಕಾರ್ಯದರ್ಶಿ ಮಟ್ಟದ ಎಲ್ಲಾ ಕಚೇರಿಗಳನ್ನು ಪ್ರಾರಂಭಿಸಬೇಕು, ಕಿತ್ತೂರ ಕರ್ನಾಟಕ ಭಾಗದ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ ಹಾಗೂ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು ಎಂದು ಆಗ್ರಹಿಸಿ ಡಿ.16ರಂದು ಬೆಳಗಾವಿ ಸುವರ್ಣಸೌಧದ ಎದುರು ಉತ್ತರ ಕರ್ನಾಟಕ ಹೋರಾಟ ಸಮಿತಿ ಮತ್ತು ಉತ್ತರ ಕರ್ನಾಟಕ ವಿಕಾಸ ವೇದಿಕೆಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ರಾಜಾಧ್ಯಕ್ಷ ಭೀಮಪ್ಪ ಗಡಾದ ಹೇಳಿದರು.
ಕನ್ನಡಪ್ರಭ ವಾರ್ತೆ ಗೋಕಾಕ
ಬೆಳಗಾವಿಯನ್ನು ಎರಡನೇ ಅಧಿಕೃತವಾಗಿ ರಾಜಧಾನಿ ಎಂದು ಘೋಷಿಸಬೇಕು, ಸುವರ್ಣಸೌಧದಲ್ಲಿ ಕಾರ್ಯದರ್ಶಿ ಮಟ್ಟದ ಎಲ್ಲಾ ಕಚೇರಿಗಳನ್ನು ಪ್ರಾರಂಭಿಸಬೇಕು, ಕಿತ್ತೂರ ಕರ್ನಾಟಕ ಭಾಗದ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ ಹಾಗೂ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು ಎಂದು ಆಗ್ರಹಿಸಿ ಡಿ.16ರಂದು ಬೆಳಗಾವಿ ಸುವರ್ಣಸೌಧದ ಎದುರು ಉತ್ತರ ಕರ್ನಾಟಕ ಹೋರಾಟ ಸಮಿತಿ ಮತ್ತು ಉತ್ತರ ಕರ್ನಾಟಕ ವಿಕಾಸ ವೇದಿಕೆಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ರಾಜಾಧ್ಯಕ್ಷ ಭೀಮಪ್ಪ ಗಡಾದ ಹೇಳಿದರು.ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರಕಾರ ಕಾಟಾಚಾರಕ್ಕೆ ಸುವರ್ಣ ಸೌಧದಲ್ಲಿ ಕೆಲ ಕಚೇರಿಗಳನ್ನು ಆರಂಭಿಸಿದೆ. ಆದರೆ ಕಚೇರಿಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಏನೇ ಕೆಲಸವಿದ್ದರೂ ಈ ಭಾಗದ ಜನರು ಬೆಂಗಳೂರಿಗೆ ಹೋಗಬೇಕಾಗಿದೆ. ಹೀಗಾಗಿ, ಸರಕಾರ ಕಾರ್ಯದರ್ಶಿ ಮಟ್ಟದ ಎಲ್ಲಾ ಪ್ರಮುಖ ಕಚೇರಿಗಳನ್ನು ಬೆಳಗಾವಿಯಲ್ಲಿ ಪ್ರಾರಂಭಿಸಿ ಸುವರ್ಣಸೌಧವನ್ನು ಶಕ್ತಿ ಸೌಧವನ್ನಾಗಿ ಮಾಡಿ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ಮಾಡಬೇಕು. ಉತ್ತರ ಕರ್ನಾಟಕ ಭಾಗದ ಎಲ್ಲಾ ಹೋರಾಟಗಾರರು ಈ ಹೋರಾಟದಲ್ಲಿ ಭಾಗವಹಿಸಬೇಕು. ಈ ಹೋರಾಟದಲ್ಲಿ ಹಿರಿಯ ನ್ಯಾಯವಾದಿ ಬಿ.ಡಿ.ಹಿರೇಮಠ ಅವರು ಸಹ ಭಾಗವಹಿಸಲಿದ್ದಾರೆ ಎಂದು ಹೇಳಿದರು.ಉತ್ತರ ಕರ್ನಾಟಕ ವಿಕಾಸ ವೇದಿಕೆ ಅಧ್ಯಕ್ಷ ಅಶೋಕ್ ಪೂಜಾರಿ ಮಾತನಾಡಿ. ವರ್ಷರ್ಕ್ಕೊಮ್ಮೆ 10 ದಿನಗಳ ಕಾಲ ಕಾಟಾಚಾರದ ಅಧಿವೇಶನ ಬಿಟ್ಟರೆ ಇಲ್ಲಿ ಯಾವುದೇ ಕಾರ್ಯಗಳು ನಡೆಯುತ್ತಿಲ. ಉತ್ತರ ಕರ್ನಾಟಕ ಭಾಗದ ಶಾಸಕರು ಸದನದಲ್ಲಿ ಈ ಇದರ ಬಗ್ಗೆ ಗಟ್ಟಿ ಧ್ವನಿ ಎತ್ತಬೇಕಾಗಿದೆ. ಕಾಗವಾಡ ಶಾಸಕ ರಾಜು ಕಾಗೆ ಅವರು ಪ್ರತ್ಯೇಕ ರಾಜ್ಯದ ಕೂಗನ್ನು ಎತ್ತಿದ್ದಾರೆ. ಉತ್ತರ ಕರ್ನಾಟಕ ಅಭಿವೃದ್ಧಿ ಮಾಡಿ ಇಲ್ಲದಿದ್ದರೆ ಪ್ರತ್ಯೇಕತೆಯ ಕೂಗು ಬಲಿಷ್ಠವಾಗಲಿದೆ. ಡಿ.31ವರೆಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೋದರೆ ಜನೇವರಿ ತಿಂಗಳಿನಿಂದ ನಮ್ಮ ಹೋರಾಟ ಉಗ್ರ ಸ್ವರೂಪ ತಾಳಲಿದೆ. ಬೆಳಗಾವಿ ಅಧಿವೇಶನ ಮುಗಿಯುವ ಒಳಗೆ ಬೆಳಗಾವಿ ಜಿಲ್ಲೆ ವಿಭಜನೆ ಮಾಡಿ ಗೋಕಾಕ ಹೊಸ ಜಿಲ್ಲೆಯನ್ನಾಗಿ ಘೋಷಿಸಬೇಕು. ಸಚಿವ ಸತೀಶ್ ಜಾರಕಿಹೊಳಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಈಗಾಗಲೇ ಗೋಕಾಕ ಜಿಲ್ಲೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ವಿನಂತಿ ಮಾಡಿದ್ದಾರೆ. ಅದರ ಪೂರಕವಾಗಿ ಬೆಳಗಾವಿ ಜಿಲ್ಲೆಯನ್ನು ವಿಂಗಡಿಸಿ ಗೋಕಾಕ ಜಿಲ್ಲೆ ಮಾಡಬೇಕು ಎಂದು ಆಗ್ರಹಿಸಿದರು.ಪತ್ರಿಕಾಗೋಷ್ಠಿಯಲ್ಲಿ ಉತ್ತರ ಕರ್ನಾಟಕ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಅಡಿವೇಶ ಇಟಗಿ, ರಾಜ್ಯ ಫ್ರಧಾನ ಕಾರ್ಯದರ್ಶಿ ನಾಗೇಶ್ ಗೋಳಶೆಟ್ಟಿ, ಉದಯ ಕರಜಗಿಮಠ, ಡಾ.ಪ್ರವೀಣ್ ನಾಯಿಕ, ಸಿದ್ದಪ್ಪ ಬಳಿಗಾರ ಉಪಸ್ಥಿತರಿದ್ದರು .