ಶ್ರೀವೆಂಕಟೇಶ್ವರಸ್ವಾಮಿಗೆ ಹೂ ಮತ್ತು ಆಭರಣಗಳ ಅಲಂಕಾರ

| Published : Sep 02 2024, 02:08 AM IST

ಶ್ರೀವೆಂಕಟೇಶ್ವರಸ್ವಾಮಿಗೆ ಹೂ ಮತ್ತು ಆಭರಣಗಳ ಅಲಂಕಾರ
Share this Article
  • FB
  • TW
  • Linkdin
  • Email

ಸಾರಾಂಶ

ಭಾರತೀನಗರದ ಶ್ರೀವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ಕಡೇ ಶ್ರಾವಣ ಶನಿವಾರದ ಅಂಗವಾಗಿ ಮೂರ್ತಿಗೆ ಹೂ ಮತ್ತು ಆಭರಣಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.

ಕನ್ನಡಪ್ರಭ ವಾರ್ತೆ ಭಾರತೀನಗರ

ಶ್ರೀವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ಕಡೇ ಶ್ರಾವಣ ಶನಿವಾರದ ಅಂಗವಾಗಿ ಸ್ವಾಮಿಯ ಮೂರ್ತಿಗೆ ಹೂ ಮತ್ತು ಆಭರಣಗಳಿಂದ ವಿಶೇಷ ಅಲಂಕಾರ ಮಾಡಿ ಪೂಜಿಸಲಾಯಿತು.

ದೇಗುಲದ ಆವರಣದಲ್ಲಿ ವಾದ್ಯಗೋಷ್ಠಿಯೊಂದಿಗೆ ನಡೆದ ಪೂಜಾ ಕಾರ್ಯಕ್ರಮದಲ್ಲಿ ನೂರಾರು ಭಕ್ತಾದಿಗಳು ಭಾಗವಹಿಸಿ ಪೂಜೆ ಸಲ್ಲಿಸಿದರು. ಬೆಳಗ್ಗೆಯಿಂದ ರಾತ್ರಿ 9 ಗಂಟೆಯವರೆವಿಗೂ ಭಕ್ತಾದಿಗಳು ದೇವಾಲಯಕ್ಕೆ ಆಗಮಿಸಿ ದೇವರ ಮೂರ್ತಿಗೆ ತುಳಸಿ ಹಾಗೂ ವಿವಿಧ ಹೂಗಳನ್ನು ತಂದು ವಿಶೇಷ ಪೂಜೆ ಸಲ್ಲಿಸಿ ತಮ್ಮ ಕಷ್ಟಕಾರ್ಪಾಣ್ಯಗಳನ್ನು ಹೋಗಲಾಡಿಸುವಂತೆ ಬೇಡಿಕೊಂಡರು. ಈ ವೇಳೆ ಭಕ್ತಾದಿಗಳು ಗೋವಿಂದನ ನಾಮಸ್ಮರಣೆ ಜಪಿಸಿದರು. ಶ್ರೀವೆಂಕಟೇಶ್ವರ ಸೇವಾಟ್ರಸ್ಟ್ ವತಿಯಿಂದ ಎಲ್ಲಾ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.ಸೆ.4 ರಂದು ಬಾಪೂಜಿ ಪ್ರಬಂಧ ಸ್ಪರ್ಧೆ

ಕನ್ನಡಪ್ರಭ ವಾರ್ತೆ ಮಂಡ್ಯವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ಸೆ.4 ರಂದು ಬಾಪೂಜಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ.

ವಿದ್ಯಾರ್ಥಿ, ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮೊದಲಾದ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ.ಜಿಲ್ಲಾ ಮಟ್ಟದಲ್ಲಿ ವಿಜೇತರಾದವರಿಗೆ ಪ್ರತಿ ವಿಭಾಗದಲ್ಲಿ ಪ್ರತ್ಯೇಕ ಹಾಗೂ ಕ್ರಮವಾಗಿ ತಲಾ 3, 2 ಹಾಗೂ 1 ಸಾವಿರ ರು. ಹಾಗೂ ರಾಜ್ಯ ಮಟ್ಟದಲ್ಲಿ ವಿಜೇತರಿಗೆ ಪ್ರತಿ ವಿಭಾಗದಲ್ಲಿ ಪ್ರತ್ಯೇಕ ಹಾಗೂ ಕ್ರಮವಾಗಿ ತಲಾ 31 ಸಾವಿರ, 21 ಸಾವಿರ ಹಾಗೂ 11 ಸಾವಿರ ರು. ನಗದು ಬಹುಮಾನ ನೀಡಲಾಗುವುದು.

ಪ್ರೌಢ ಶಾಲಾ ವಿಭಾಗ:-ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, ಗಾಂಧೀಜಿಯವರ ವಿಚಾರದಲ್ಲಿ ಸತ್ಯಾಗ್ರಹ, ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವುದು, ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವುದು ಹೇಗೆ ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 900 ಪದಗಳಿಗೆ ಮೀರದಂತೆ ಪ್ರಬಂಧಗಳನ್ನು ರಚಿಸಬೇಕು.

ಪದವಿ ಪೂರ್ವ ಶಿಕ್ಷಣ ವಿಭಾಗ:ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, ದೇಶದ ಕಳಂಕವಾದ ಅಸ್ಪೃಶ್ಯತೆ ನಿವಾರಿಸುವಲ್ಲಿನ ಗಾಂಧೀಜಿಯವರ ಪ್ರಯೋಗಗಳು, ಗಾಂಧೀಜಿಯವರನ್ನು ಜಗತ್ತು ಗ್ರಹಿಸಿದ ರೀತಿ, ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 1500 ಪದಗಳಿಗೆ ಮೀರದಂತೆ ಪ್ರಬಂಧ ರಚಿಸಬೇಕು.

ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗ:ಇಂದಿನ ಪ್ರಜಾಪ್ರಭುತ್ವದಲ್ಲಿ ಸತ್ಯಾಗ್ರಹದ ಮಹತ್ವ, ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯತೀತ ನಿಲುವುಗಳು, ಗಾಂಧೀಜಿಯವರ ಧಾರ್ಮಿಕ ಸಹಿಷ್ಣುತ ಚಿಂತನೆ, ಸ್ವಾತಂತ್ರ್ಯ ಮತ್ತು ಸಮಾನತೆಯ ಪರಿಕಲ್ಪನೆಗಳು. , ಗಾಂಧೀಜಿಯವರ ವಿಚಾರದಲ್ಲಿ ಸತ್ಯದ ಪರಿಕಲ್ಪನೆ, ಗಾಂಧೀಜಿಯವರು ಕಂಡ ಸ್ವರಾಜ್ಯ ಮತ್ತು ಆರ್ಥಿಕ ಚಿಂತನೆಗಳು. ಈ ಐದು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 2000 ಪದಗಳಿಗೆ ಮೀರದಂತೆ ಪ್ರಬಂಧಗಳನ್ನು ರಚಿಸಬೇಕು.

ಪ್ರಬಂಧವು ಸಂಪೂರ್ಣ ಸ್ವರಚಿತವಾಗಿ ಸ್ಪರ್ಧೆ ನಡೆಯುವ ಸ್ಥಳದಲ್ಲಿಯೇ ಶುದ್ಧ ಕೈಬರಹದಲ್ಲಿ ಬರೆಯಬೇಕು. ಆಕಾರವಾಗಿ ಬಳಸಿದ ಪರಾಮರ್ಶನ/ಆಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು. ಆದರೆ, ಪರಾಮರ್ಶನ/ ಆಧಾರ ಗ್ರಂಥಗಳು/ ಮೊಬೈಲ್ ಗಳ ಬಳಕೆಗೆ ಅವಕಾಶವಿಲ್ಲ.ಪ್ರಬಂಧಕಾರರ ಹೆಸರು, ವಿಳಾಸ ನಮೂದಿಸಿರಬೇಕು. ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು. ಆಯ್ದ ಪ್ರಬಂಧಗಳ ಪ್ರಕಟಣೆ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊಂದಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಎಸ್.ಹೆಚ್ ನಿರ್ಮಲ ತಿಳಿಸಿದ್ದಾರೆ.