ಕೃಷಿ ಪತ್ತಿನ ಸಂಘದ ಅಧ್ಯಕ್ಷ - ಉಪಾಧ್ಯಕ್ಷರಾಗಿ ದೀಪಕ್ ಮತ್ತು ಅಶ್ವಿನಿ ಆಯ್ಕೆ

| Published : Apr 07 2025, 12:32 AM IST

ಕೃಷಿ ಪತ್ತಿನ ಸಂಘದ ಅಧ್ಯಕ್ಷ - ಉಪಾಧ್ಯಕ್ಷರಾಗಿ ದೀಪಕ್ ಮತ್ತು ಅಶ್ವಿನಿ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಆಶೀರ್ವಾದದಿಂದ ಹಾಗೂ ಎಲ್ಲಾ ನಿರ್ದೇಶಕರ ಸಹಕಾರದಿಂದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರ ಸಂಘಪಡೆದು ಸಂಘದ ಅಭಿವೃದ್ಧಿಗೆ ಶ್ರಮಿಸುತ್ತೇನೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕಿನ ಚಿಕ್ಕಾಡೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಸಿ.ಆರ್.ದೀಪಕ್, ಉಪಾಧ್ಯಕ್ಷರಾಗಿ ಅಶ್ವಿನಿ ಅವಿರೋಧವಾಗಿ ಆಯ್ಕೆಯಾದರು.

ಸಂಘದ ನೂತನ ಆಡಳಿತ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಭಾನುವಾರ ಚುನಾವಣೆ ಚುನಾವಣೆಯಲ್ಲಿ ಸಿ.ಆರ್. ದೀಪಕ್, ಅಶ್ವಿನಿ ಹೊರತುಪಡಿಸಿ ಬೇರೆ ಯಾವ ನಿರ್ದೇಶಕರು ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಮಾಡಲಾಗಿದೆ ಎಂದು ಚುನಾವಣಾಧಿಕಾರಿ ಘೋಷಿಸಿದರು.

ದೀಪಕ್ ಮತ್ತು ಅಶ್ವಿನಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆಯೇ ಹೊರಗೆ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಆಶೀರ್ವಾದದಿಂದ ಹಾಗೂ ಎಲ್ಲಾ ನಿರ್ದೇಶಕರ ಸಹಕಾರದಿಂದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರ ಸಂಘಪಡೆದು ಸಂಘದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.

ಈ ವೇಳೆ ನಿರ್ದೇಶಕರಾದ ವಿಜೇಂದ್ರಮೂರ್ತಿ, ಕಿರಣ್‌ಕುಮಾರ್, ಸಿ.ಆರ್.ರಾಮು, ಗೌತಮ್, ಮಂಜುನಾಥ್, ಲೋಹಿತ್, ರವಿಕುಮಾರ್, ಜಗದೀಶ್ ಸೇರಿದಂತೆ ಗ್ರಾಮದ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಹಾಜರಿದ್ದರು.ಹೇಮೆ ನೀರು ಹರಿಸದಿದ್ದರೆ ಸಚಿವರ ನಿವಾಸದ ಎದುರು ಧರಣಿ ಎಚ್ಚರಿಕೆ

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಪಾಂಡವಪುರ ಉಪ ವಿಭಾಗಾಧಿಕಾರಿ ಡಾ. ಶ್ರೀನಿವಾಸ್ ವಿರುದ್ಧ ಕೆಲವರು ವ್ಯವಸ್ಥಿತ ಪಿತೂರಿ ನಡೆಸುತ್ತಿದ್ದಾರೆ ಎಂದು ಜಿಲ್ಲಾ ರೈತಸಂಘದ ಮಾಜಿ ಅಧ್ಯಕ್ಷ ಎಂ.ವಿ.ರಾಜೇಗೌಡ ಆರೋಪಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಎಸಿ ಡಾ.ಶ್ರೀನಿವಾಸ್ ಜನಪರ ಕೆಲಸ ಮಾಡುತ್ತಿದ್ದಾರೆ. ತಾಲೂಕಿನಲ್ಲಿ ಸಾಧ್ಯವಾದಷ್ಟು ಸಮಸ್ಯೆಗಳನ್ನು ಪರಿಹರಿಸಿಕೊಡುತ್ತಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಇರುವ ಡಾ.ಶ್ರೀನಿವಾಸ್ ಪ್ರತಿ ಶುಕ್ರವಾರ ಎ.ಸಿ ಕೋರ್ಟ್ ನಡೆಸಿ ನೆನಗುದಿಗೆ ಬಿದ್ದಿದ್ದ ಕಡತಗಳ ವಿಲೇ ಮಾಡಿ ರೈತ ಸಮುದಾಯಕ್ಕೆ ನೆರವಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಉಪ ವಿಭಾಗಾಧಿಕಾರಿಗಳ ವಿರುದ್ಧ ಕೆಲವು ಮಧ್ಯವರ್ತಿಗಳು ಷಡ್ಯಂತ್ರ ನಡೆಸಿ ಅವರ ಪ್ರಾಮಾಣಿಕತೆಗೆ ಮಸಿ ಬಳಿದು ವರ್ಗಾವಣೆ ಮಾಡಿಸುವ ಪಿತೂರಿ ನಡೆಸುತ್ತಿದ್ದಾರೆ. ಎಸಿ ಅವರ ಬೆನ್ನಿಗೆ ರೈತ ಸಂಘ ನಿಲ್ಲಲಿದೆ ಎಂದು ಹೇಳಿದ್ದಾರೆ.

ಹೇಮಾವತಿ ನೀರಿಗಾಗಿ ರೈತರು ನಿರಂತರ ಹೋರಾಟ ಮಾಡುತ್ತಿದ್ದರೂ ಹೋರಾಟ ನಡೆಸಿದಾಗಲೆಲ್ಲಾ ಮೀಟಿಂಗ್ ಮಾಡಿ ಭರವಸೆ ನೀಡುತ್ತಿರುವ ಅಧಿಕಾರಿಗಳು ಇದುವರೆಗೂ ಕಾಲುವೆಗಳಿಗೆ ನೀರು ಹರಿಸದೆ ಕಾಲಹರಣ ಮಾಡುತ್ತಿದ್ದಾರೆ. ಮೀಟಿಂಗ್ ಹೆಸರಿನಲ್ಲಿ ರೈತರನ್ನು ಅಧಿಕಾರಿಗಳು ವಂಚಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಹೇಮಾವತಿ ನೀರಿನ ವಿಚಾರದಲ್ಲಿ ಮೌನವಾಗಿರುವ ಜನ ಪ್ರತಿನಿಧಿಗಳನ್ನು ಎಚ್ಚರಿಸಲು ಏ.5ರಂದು ರೈತಸಂಘದ ಕಾರ್ಯಕರ್ತರು ತಾಲೂಕಿನ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಮನೆ ಬಾಗಿಲಿಗೆ ಹೋಗಲಿದ್ದು, ನೀರು ಹರಿಸದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮನೆ ಎದುರು ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.