ದೀಪಾವಳಿ ಹಬ್ಬದ ಪ್ರಯುಕ್ತ ಉಡುಪಿ ಶ್ರೀಕೃಷ್ಣಮಠದಲ್ಲಿ ಸಾಂಪ್ರದಾಯಿಕವಾಗಿ ಎಣ್ಣೆ ಶಾಸ್ತ್ರ ಹಾಗೂ ತೈಲಾಭ್ಯಂಜನ ಕಾರ್ಯಕ್ರಮ ನಡೆಯಿತು.

ಉಡುಪಿ : ದೀಪಾವಳಿ ಹಬ್ಬದ ಪ್ರಯುಕ್ತ ಉಡುಪಿ ಶ್ರೀಕೃಷ್ಣಮಠದಲ್ಲಿ ಸಾಂಪ್ರದಾಯಿಕವಾಗಿ ಎಣ್ಣೆ ಶಾಸ್ತ್ರ ಹಾಗೂ ತೈಲಾಭ್ಯಂಜನ ಕಾರ್ಯಕ್ರಮ ನಡೆಯಿತು.ಪರ್ಯಾಯ ಶ್ರೀ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥರು ತಮ್ಮ ವಿದ್ಯಾಗುರುಗಳಾದ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥರು ಹಾಗೂ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥರ ಸಮ್ಮುಖದಲ್ಲಿ ಚಂದ್ರಶಾಲೆಯಲ್ಲಿ ಎಣ್ಣೆ ಶಾಸ್ತ್ರ ನೆರವೇರಿಸಿದರು.ಈ ಸಂದರ್ಭ ಯತಿಗಳು ಪರಸ್ಪರ ಎಣ್ಣೆ ಶಾಸ್ತ್ರ ನೆರವೇರಿಸಿಕೊಂಡ ಬಳಿಕ ಭಕ್ತಾದಿಗಳಿಗೂ ಎಣ್ಣೆ ಶಾಸ್ತ್ರ ಮಾಡಿದರು. ಮಠದ ಸಿಬ್ಬಂದಿಯೂ ಸಾಂಪ್ರದಾಯಿಕವಾಗಿ ಎಣ್ಣೆ ಶಾಸ್ತ್ರ ನೆರವೇರಿಸಿ ತೈಲಾಭ್ಯಂಜನ ಮಾಡಿಕೊಳ್ಳುವ ಮೂಲಕ ದೀಪಾವಳಿ ಸಂಭ್ರಮದಲ್ಲಿ ಪಾಲ್ಗೊಂಡರು.ಶಿರೂರು ಮಠದ ಶಿಷ್ಯವರ್ಗದವರು ಪರ್ಯಾಯ ಶ್ರೀಗಳಿಗೆ ಎಣ್ಣೆಹಚ್ಚಿ ಸಂಭ್ರಮದಿಂದ ದೀಪಾವಳಿ ಆಚರಿಸಿಕೊಂಡರು.

ಅಷ್ಟಮಠಗಳ ವಿದ್ವಾಂಸರು, ಪರ್ಯಾಯ ಮಠದ ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ, ಪಾರುಪತ್ಯೆದಾರ ಶ್ರೀಶ ಭಟ್ ಕಡೆಕಾರು, ಭಕ್ತರು ಹಾಗೂ ಸಿಬ್ಬಂದಿ ಇದ್ದರು.