ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಅಶೋಕ್ ಕುಮಾರ್ ರೈ, ಸ್ವರ್ಣೋದ್ಯಮಿ ಜಿ.ಎಲ್.ಬಲರಾಮ ಅಚಾರ್ಯ, ಅಧ್ಯಕ್ಷರಾಗಿ ಸಾಮಾಜಿಕ ಧುರೀಣ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ಎನ್.ರವೀಂದ್ರ ಶೆಟ್ಟಿ ನುಳಿಯಾಲು ಅವರನ್ನು ಆಯ್ಕೆ ಮಾಡಲಾಗಿದೆ.
ಕನ್ನಡಪ್ರಭವಾರ್ತೆ ಪುತ್ತೂರು
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಅಶೋಕ್ ಕುಮಾರ್ ರೈ, ಸ್ವರ್ಣೋದ್ಯಮಿ ಜಿ.ಎಲ್.ಬಲರಾಮ ಅಚಾರ್ಯ, ಅಧ್ಯಕ್ಷರಾಗಿ ಸಾಮಾಜಿಕ ಧುರೀಣ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ಎನ್.ರವೀಂದ್ರ ಶೆಟ್ಟಿ ನುಳಿಯಾಲು ಅವರನ್ನು ಆಯ್ಕೆ ಮಾಡಲಾಗಿದೆ.ಉಪಾಧ್ಯಕ್ಷರಾಗಿ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ದೇರ್ಲ ಕರುಣಾಕರ ರೈ, ಪರ್ಲಡ್ಕ ಎಸ್‌ಡಿಪಿ ರೆಮಿಡೀಸ್‌ನ ಆಯುರ್ವೇದ ತಜ್ಞ ಡಾ. ಹರಿಕೃಷ್ಣ ಪಾಣಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಾಧ್ಯಾಪಕರೂ ಆಗಿರುವ ದೈವನರ್ತಕ ಡಾ. ರವೀಶ್ ಪಡುಮಲೆ, ಸಂಚಾಲಕರಾಗಿ ಸಂತೋಷ್ ಕುಮಾರ್ ರೈ ಗಾಡಿಗುಡ್ಡೆ, ಕೋಶಾಧಿಕಾರಿಯಾಗಿ ಯಸ್.ದಾಮೋದರ ಪಾಟಾಳಿ, ಜೊತೆ ಕಾರ್ಯದರ್ಶಿಯಾಗಿ ಮುಂಡೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಸಿಇಒ ಜಯಪ್ರಕಾಶ್ ರೈ ಚೆಲ್ಯಡ್ಕ, ಸಹಕೋಶಾಧಿಕಾರಿಯಾಗಿ ಶ್ರೀಧರ್ ತೆಂಕಿಲ ಅವರನ್ನು ಆಯ್ಕೆ ಮಾಡಲಾಗಿದೆ.
ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿರುವ ನಿವೃತ್ತ ಎಸ್ಪಿ ರಾಮದಾಸ್ ಗೌಡ ನೆಲ್ಲಿಕಟ್ಟೆ, ರೋಟರಿ ಕ್ಲಬ್‌ನ ಜಗಜೀವನ್‌ದಾಸ್ ರೈ, ನೇಮಾಕ್ಷ ಸುವರ್ಣ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ರವೀಂದ್ರ ನಾಥ ರೈ ಬಳ್ಳಮಜಲು, ರವಿ ಆಚಾರ್ಯ, ಚೇತನ್ ಉಪ್ಪಳಿಗೆ, ವಿರೂಪಾಕ್ಷ ಭಟ್, ಡಾ.ಗೋಪಾಲಕೃಷ್ಣ ಎಂ, ಪದ್ಮಾಸೋಲಾರ್‌ನ ಮಾಲಕ ಪದ್ಮನಾಭ ಶೆಟ್ಟಿ, ಉಪೇಂದ್ರ ಬಲ್ಯಾಯ ದೇವಸ್ಯ, ನಿತಿನ್ ಪಕ್ಕಳ, ರಂಜಿತ್ ಬಂಗೇರ, ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಡಾ.ರಾಜೇಶ್ ಬೆಜ್ಜಂಗಳ ಇವರಿಗೆ ವಿವಿಧ ಸಮಿತಿಯಲ್ಲಿ ಸೇರಿಸಲಾಯಿತು ಎಂದು ಸಮಿತಿ ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು ತಿಳಿಸಿದ್ದಾರೆ.