ಡಿಸಿಸಿ ಬ್ಯಾಂಕ್‌ಗೆ ನುಗ್ಗಿದ ಜಿಂಕೆಯನ್ನು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಸಿಬ್ಬಂದಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ.

ಶಿವಮೊಗ್ಗ: ಡಿಸಿಸಿ ಬ್ಯಾಂಕ್‌ಗೆ ನುಗ್ಗಿದ ಜಿಂಕೆಯನ್ನು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಸಿಬ್ಬಂದಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ಭದ್ರಾವತಿ ತಾಲೂಕು ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಜಿಂಕೆ ನುಗ್ಗಿದೆ. ಗಾಬರಿಯಲ್ಲಿ ಗಾಜಿಗೆ ಗುದ್ದಿಕೊಂಡು ಕುಸಿದು ಬಿದ್ದಿತ್ತು. ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜಿಂಕೆಯ ರಕ್ಷಣೆ ಮಾಡಿದ್ದಾರೆ. ಬಳಿಕ ಅದನ್ನು ಸಮೀಪದ ಅರಣ್ಯಕ್ಕೆ ಕೊಂಡೊಯ್ದು ಬಿಡುಗಡೆ ಮಾಡಿದ್ದಾರೆ. ಬೆನ್ನಟ್ಟಿ ಬಂದ ನಾಯಿಗಳಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಜಿಂಕೆ ಕುವೆಂಪು ವಿಶ್ವವಿದ್ಯಾಲಯದ ಒಳಭಾಗದಿಂದ ಜಿಗಿದು ಡಿಸಿಸಿ ಬ್ಯಾಂಕಿಗೆ ನುಗ್ಗಿದೆ. ಬ್ಯಾಂಕ್ ಸಿಬ್ಬಂದಿ ತಕ್ಷಣ ಗೇಟ್‌ಗಳನ್ನು ಬಂದ್ ಮಾಡಿ ಜಿಂಕೆಯನ್ನು ರಕ್ಷಿಸಿ, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.