ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಯಾವುದೇ ಸುಳ್ಳು, ದುರುದ್ದೇಶಪೂರಿತ ಮತ್ತು ಅವಹೇಳನ-ಮಾನಹಾನಿಕರ ಹೇಳಿಕೆ ನೀಡದಂತೆ ಧನ್ವೀರ್ ವಿರುದ್ಧ ನ್ಯಾಯಾಲಯದಿಂದ ಪ್ರತಿಬಂಧಕ ಆದೇಶ ಪಡೆದಿದ್ದ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮೀ ಅವರು, ಇದೀಗ ಧನ್ವೀರ್ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಯಾವುದೇ ಸುಳ್ಳು, ದುರುದ್ದೇಶಪೂರಿತ ಮತ್ತು ಅವಹೇಳನ-ಮಾನಹಾನಿಕರ ಹೇಳಿಕೆ ನೀಡದಂತೆ ಧನ್ವೀರ್ ವಿರುದ್ಧ ನ್ಯಾಯಾಲಯದಿಂದ ಪ್ರತಿಬಂಧಕ ಆದೇಶ ಪಡೆದಿದ್ದ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮೀ ಅವರು, ಇದೀಗ ಧನ್ವೀರ್ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.ಈ ಕುರಿತು ನಗರದ 37ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ವಿಜಯಲಕ್ಷ್ಮೀ ಅವರು ಧನ್ವೀರ್ ವಿರುದ್ಧ ಮಾನನಷ್ಟ ಆರೋಪದ ಮೇಲೆ ಖಾಸಗಿ ದೂರು ದಾಖಲಿಸಿದ್ದಾರೆ. ದೂರಿನ ವಿಚಾರಣೆಯನ್ನು ನ್ಯಾಯಾಲಯ ನ.30ಕ್ಕೆ ನಿಗದಿಪಡಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರನ್ನು ಜೈಲಿನಿಂದ ಹೊರ ಕರೆತರಲು ತಮಗೆ (ವಿಜಯಲಕ್ಷ್ಮೀ) ಇಷ್ಟವಿಲ್ಲ. ದರ್ಶನ್ ಶಾಶ್ವತವಾಗಿ ಜೈಲಿನಲ್ಲಿ ಸೊರಗಬೇಕು ಎಂದು ತಾನು ಬಯಸಿದ್ದೇವೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು ಪ್ರದೂಷ್ ರಾವ್ ಅವರನ್ನು ಮನವೊಲಿಸಿದ್ದೇವೇ ಎಂದು ಧನ್ವೀರ್ ವಿವಿಧ ಮಾಧ್ಯಮಗಳ ಮೂಲಕ ಸುಳ್ಳು, ದ್ವೇಷಪೂರಿತ ಹಾಗೂ ಮಾನ ಹಾನಿಕಾರಕ ಹೇಳಿಕೆ ನೀಡಿದ್ದಾರೆ. ಇದರಿಂದ ಅವರ ವಿರುದ್ಧ ಮಾನನಷ್ಟ ಪ್ರಕರಣವನ್ನು ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸಬೇಕು ಎಂದು ವಿಜಯಲಕ್ಷ್ಮೀ ತಮ್ಮ ಖಾಸಗಿ ದೂರಿನಲ್ಲಿ ಆರೋಪಿಸಿದ್ದರು.