ಸಾರಾಂಶ
ಇದು ಮಹತ್ತರವಾದ ಲೋಕಸಭಾ ಚುನಾವಣೆ, ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿವಿಗಾಗಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳನ್ನು ಸೋಲಿಸಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಬೇಕೆಂದು ರಾಜ್ಯದಲಿತ ಸಂಘರ್ಷಗಳ ಸಮಿತಿಗಳ ಐಕ್ಯ ಹೋರಾಟ ಸಮಿತಿ ಮುಖಂಡರು ಮನವಿ ಮಾಡಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಇದು ಮಹತ್ತರವಾದ ಲೋಕಸಭಾ ಚುನಾವಣೆ, ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿವಿಗಾಗಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳನ್ನು ಸೋಲಿಸಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಬೇಕೆಂದು ರಾಜ್ಯದಲಿತ ಸಂಘರ್ಷಗಳ ಸಮಿತಿಗಳ ಐಕ್ಯ ಹೋರಾಟ ಸಮಿತಿ ಮುಖಂಡರು ಮನವಿ ಮಾಡಿದರು.ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಇಂದೂಧರ ಹೊನ್ನಾಪುರ, ವಿ. ನಾಗರಾಜು, ಗುರುಪ್ರಸಾದ್ ಕೆರಗೋಡು, ಮಾವಳ್ಳಿ ಶಂಕರ್ ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸಿರುವ ಮೋದಿ ನೇತೃತ್ವದ ಸರ್ಕಾರ ಬರೀ ಸುಳ್ಳುಗಳನ್ನು ಹೇಳುತ್ತಾ, ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಹಲವಾರು ಸಾಂವಿಧಾನಿಕ ಸಂಸ್ಥೆಗಳನ್ನು ಮುಚ್ಚಿದೆ, ಸಾರ್ವಜನಿಕ ಉದ್ದಿಮೆಗಳನ್ನು ಮುಚ್ಚಿ ಖಾಸಗೀಕರಣಗೊಳಿಸುವ ಮೂಲಕ ಮೀಸಲಾತಿಯನ್ನು ಕಡಿತಗೊಳಿಸಿದ ಎಂದು ಆರೋಪಿಸಿದರು.ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಿದೆ, ಅಹಿಂದ ವರ್ಗಗಳ ವಿದ್ಯಾರ್ಥಿ ವೇತನವನ್ನು ಕಡಿತಗೊಳಿಸಿದೆ, ಒಂದುಕಡೆ ಸಂವಿಧಾನ ರಕ್ಷಣೆ ಮಾಡುತ್ತೇವೆ ಎಂದು ಮಾತನಾಡುತ್ತಾ, ಇನ್ನೊಂದು ಕಡೆ ಬಹುಮತ ಬಂದರೆ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂದು ಹೇಳುತ್ತಾರೆ, ಪ್ರತಿಯೊಂದಕ್ಕು ಜಿಎಸ್‌ಟಿ ತಂದು ರಾಜ್ಯಗಳಿಗೆ ಪಾಲು ಕೊಡದೇ ಒಕ್ಕೂಟದ ವ್ಯವಸ್ಥೆಗೆ ಧಕ್ಕೆತಂದಿದ್ದಾರೆ ಎಂದು ಆರೋಪಿಸಿದರು.ದಲಿತರು, ರೈತರು, ಬಡವರ, ಹಿಂದುಳಿದವರ ವಿರುದ್ಧದ ಕಾನೂನುಗಳನ್ನು ರೂಪಿಸಿ, ಅವರ ಹೋರಾಟಗಳನ್ನು ಹತ್ತಿಕ್ಕುವ ಕೆಲಸ ಮಾಡಿ, ನ್ಯಾಯದ ಪರ ಹೋರಾಟ ಮಾಡುವವರನ್ನು ಜೈಲಿಗೆ ಹಾಕಲಾಗಿದೆ, ಚಾತುವರ್ಣ ವ್ಯವಸ್ಥೆ ಜಾರಿಯಲ್ಲಿರಬೇಕೆಂದು ಬಯಸುವ ಶಕ್ತಿಗಳು ಸಾಮಾಜಿಕ ಚಕ್ರವನ್ನೇ ಹಿಮ್ಮುಖ ತಿರುಗಿಸಲು ಹುನ್ನಾರ ನಡೆಸಿವೆ ಎಂದರು.ದೇವರು, ಧರ್ಮದ ಹೆಸರಿನಲ್ಲಿಜನರ ಭಾವನೆಗಳನ್ನು ಕೆರಳಿಸಿ ರಾಜಕಾರಣಕ್ಕೆ ಬಳಸಿಕೊಂಡು ಜನರ ನಡುವೆ ದ್ವೇಷದ ವಿಷಬೀಜ ಬಿತ್ತುತ್ತಿದ್ದಾರೆ. ಬಿಜೆಪಿ ಆಡಳಿತದಲ್ಲಿ ದೇಶದಲ್ಲಿ ಹಸಿವು, ಆರೋಗ್ಯ, ನಿರುದ್ಯೋಗ ಹೆಚ್ಚಾಗಿದೆ. ಸಂವಿಧಾನವನ್ನು ಬುಡಮೇಲು ಮಾಡಲು ಬಿಜೆಪಿ ಕೈ ಹಾಕಿದೆ. ಮನುಸ್ಮೃತಿಯನ್ನು ಆಡಳಿತದಲ್ಲಿ ತರಲು ಕಾರ್ಯಸೂಚಿಯನ್ನು ಹೊಂದಿದ್ದಾರೆ. ಈ ಬಾರಿ ದೇಶದಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರುವಲ್ಲಿ ಯಾವುದೇ ಅನುಮಾನವಿಲ್ಲ. ಯುವಜನತೆ ಸಂವಿಧಾನ, ಪ್ರಜಾಪ್ರಭುತ್ವ ಉಳಿವಿಗೆ ಕಾಂಗ್ರೆಸ್ ಬೆಂಬಲಿಸಬೇಕು ಎಂದು ಮನವಿ ಮಾಡಿದರು.ರಾಜ್ಯಾದ್ಯಂತ ಜಾಗೃತಿ ಮೂಡಿಸಲಾಗುತ್ತಿದೆ, ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ಅಭ್ಯರ್ಥಿ ಸುನೀಲ್ ಬೋಸ್‌ರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಬೆನ್ನಗಾನಹಳ್ಳಿ ರಾಮಚಂದ್ರ, ಜೀವನಹಳ್ಳಿ ವೆಂಕಟೇಶ್, ಸೋಮಶೇಖರ್ ಇದ್ದರು.