ಸಾರಾಂಶ
ಚಾಮರಾಜನಗರ : ರಾಜ್ಯದಲ್ಲಿ ಕಳೆದ 10 ತಿಂಗಳಿಂದ ಅಧಿಕಾರ ನಡೆಸುತ್ತಿರುವ ಕಾಂಗ್ರೇಸ್ ಸರ್ಕಾರದಿಂದ ಯಾವುದೇ ಅಭಿವೃದ್ಧಿಯಾಗದೇ ಅಭಿವೃದ್ಧಿ ಶೂನ್ಯವಾಗಿದೆ, ಈ ಸರ್ಕಾರಕ್ಕೆ ಚುನಾವಣೆಯಲ್ಲಿ ಜನರು ತಕ್ಕಪಾಠ ಕಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜು ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ದುಡ್ಡಿನ ಅಹಂಕಾರ ಹಾಗೂ ಅಧಿಕಾರದ ಅಮಲಿನಿಂದ, ಹಣ, ಹೆಂಡದ ಮೂಲಕ ಚುನಾವಣೆ ಗೆಲ್ಲಲು ಮುಂದಾಗಿದೆ. ಇದಕ್ಕೆ ಮತದಾರರು ಅವಕಾಶ ಕೊಡಬಾರದು ಎಂದರು.
ಕೇಂದ್ರ ಮೇಲೆ ಬೊಟ್ಟು ತೋರಿಸುತ್ತಿದೆ:
ರಾಜ್ಯದಲ್ಲಿ ತೀವ್ರ ಬರಗಾಲವಿದ್ದು ಅದನ್ನು ಎದುರಿಸಲಾಗದೇ ಕೇಂದ್ರ ಮೇಲೆ ಬೊಟ್ಟು ಮಾಡುತ್ತಾ ಬರೀ ಸುಳ್ಳನ್ನೇ ಹೇಳುತ್ತಿದ್ದಾರೆ, ಗ್ಯಾರಂಟಿಗಳ ಮೂಲಕ ಜನರನ್ನು ವಂಚಿಸಿ, ಯಾವ ಅಭಿವೃದ್ಧಿ ಕಾರ್ಯವನ್ನು ಮಾಡುತ್ತಿಲ್ಲ ಎಂದು ಆರೋಪಿಸಿದರು. ಬಿಜೆಪಿ, ಜೆಡಿಎಸ್ ಪಕ್ಷ ಒಂದಾಗಿ ರಾಜ್ಯಾದ್ಯಂತ ಪ್ರವಾಸ ಹೊರಟ ತಕ್ಷಣ ಕಾಂಗ್ರೆಸ್ ಪಕ್ಷದವರ ಬ್ಯಾಟರಿ ಡೌನ್ ಆಗಿದೆ ಎಂದು ಲೇವಡಿ ಮಾಡಿದರು.
ಅಂಬೇಡ್ಕರ್ ಅಂತ್ಯ ಸಂಸ್ಕಾರಕ್ಕೂ ಕೂಡ ಕಾಂಗ್ರೆಸ್ ಪಕ್ಷ ಅವಕಾಶ ಮಾಡಿಕೊಡಲಿಲ್ಲ. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದವರು ಸೋಲಿಸಿದರು. ಸಂವಿಧಾನ, ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್‌ಗೆ ಉಳಿದಿಲ್ಲ ನರೇಂದ್ರಮೋದಿ ಅವರು ಅಂಬೇಡ್ಕರ್ ಅವರ ಮನೆ ಅಭಿವೃದ್ಧಿಪಡಿಸಿ ಪಂಚತೀರ್ಥಗಳನ್ನಾಗಿ ಪರಿವರ್ತನೆ ಮಾಡಿದ್ದಾರೆ ಎಂದರು.
ಬಾಲರಾಜ್ 1 ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ನರೇಂದ್ರಮೋದಿ ಅವರ ಕೈ ಬಲಪಡಿಸಿ ಅಭಿವೃದ್ಧಿಯ ಹರಿಕಾರ ನರೇಂದ್ರಮೋದಿ ಮತ್ತೇ ಪ್ರಧಾನಿಯಾಗುವಂತೆ ಮಾಡಬೇಕು ಎಂದು ಮನವಿ ಮಾಡಿದರುಮಾಜಿ ಸಿಎಂ ಡಿ.ವಿ.ಸದಾನಂದಗೌಡ, ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ, ಎಂ.ಆರ್.ಮಂಜುನಾಥ್, ಅಭ್ಯರ್ಥಿ ಎಸ್. ಬಾಲರಾಜ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್. ನಿರಂಜನಕುಮಾರ್ ಹಾಗೂ ಮತ್ತಿತರ ನಾಯಕರು ಭಾಗವಹಿಸಿದ್ದರು.
;Resize=(128,128))
;Resize=(128,128))