ಜನನ-ಮರಣ ನೋಂದಣಿ ಪ್ರಕ್ರಿಯೆ ವಿಳಂಬ ಸಲ್ಲ: ಜಿಲ್ಲಾಧಿಕಾರಿ

| Published : Jun 28 2024, 12:46 AM IST / Updated: Jun 28 2024, 12:47 AM IST

ಜನನ-ಮರಣ ನೋಂದಣಿ ಪ್ರಕ್ರಿಯೆ ವಿಳಂಬ ಸಲ್ಲ: ಜಿಲ್ಲಾಧಿಕಾರಿ
Share this Article
  • FB
  • TW
  • Linkdin
  • Email

ಸಾರಾಂಶ

ದೊಡ್ಡಬಳ್ಳಾಪುರ: ಸರ್ಕಾರದ ಮಾರ್ಗಸೂಚಿಯಂತೆ ಜನನ-ಮರಣ‌ ನೋಂದಣಿಯನ್ನು ವಿಳಂಬ ಮಾಡದೆ ನಿಯಮಾನುಸಾರ ನಿಗದಿತ ಸಮಯದೊಳಗೆ ಪೂರ್ಣಗೊಳಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ದೊಡ್ಡಬಳ್ಳಾಪುರ: ಸರ್ಕಾರದ ಮಾರ್ಗಸೂಚಿಯಂತೆ ಜನನ-ಮರಣ‌ ನೋಂದಣಿಯನ್ನು ವಿಳಂಬ ಮಾಡದೆ ನಿಯಮಾನುಸಾರ ನಿಗದಿತ ಸಮಯದೊಳಗೆ ಪೂರ್ಣಗೊಳಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2024-25ನೇ ಸಾಲಿನ ಜನನ-ಮರಣ ನೋಂದಣಿ ಕಾರ್ಯ ಹಾಗೂ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 1110 ಜನನ ಮರಣ ನೋಂದಣಿ ಘಟಕಗಳಿದ್ದು ಗ್ರಾಮೀಣ ಪ್ರದೇಶದಲ್ಲಿ 1100 ಹಾಗೂ ನಗರ ಪ್ರದೇಶದಲ್ಲಿ 10 ನೋಂದಣಿ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. 2024 ನೇ ಸಾಲಿನ ಜನವರಿ ಮಾಹೆಯಿಂದ ಮೇ ಮಾಹೆಯವರೆಗೆ 3664 ಜನನ ಹಾಗೂ 4113 ಮರಣ ಸೇರಿ ಒಟ್ಟು 7777 ಜನನ-ಮರಣ ನೋಂದಣಿಯಾಗಿದೆ. ಜನನ ಮರಣ ನೋಂದಣಿ ಪಾರದರ್ಶಕವಾಗಿ ನಡೆಯಬೇಕು. ಜಿಲ್ಲೆಯಲ್ಲಿರುವ ಎಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಆಶಾ, ಅಂಗನವಾಡಿ ಕಾರ್ಯಕರ್ತರು, ಸ್ಥಳೀಯ ಸಂಸ್ಥೆಗಳಲ್ಲಿ ಜನನ ಮರಣ ನೋಂದಣಿ/ ಉಪ ನೋಂದಣಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಜನನ ಮರಣ ಘಟಕಗಳಲ್ಲಿ ಕಡ್ಡಾಯವಾಗಿ ಪರಿಶೀಲನೆ ನಡೆಸಿ ಆನ್‌ಲೈನ್ ನಲ್ಲಿ ನಿಗದಿತ ಸಮಯದೊಳಗೆ ನೋಂದಾಯಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿರುವ ಆಯಾ ತಾಲೂಕಿನ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ತಹಸೀಲ್ದಾರ್, ತಾಲೂಕು ಆರೋಗ್ಯಾಧಿಕಾರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕಾಲಕಾಲಕ್ಕೆ ಭೇಟಿ ನೀಡಿ ಜನನ ಮರಣ ನೋಂದಣಿ ಘಟಕಗಳನ್ನು ತಪಾಸಣೆ ಮಾಡಬೇಕು. ಪ್ರತಿ ತಿಂಗಳಿಗೊಮ್ಮೆ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಜನನ ಮರಣ ವಿಷಯಕ್ಕೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆಯನ್ನು ನಡೆಸಿ ವರದಿ ನೀಡಬೇಕು ಎಂದು ಹೇಳಿದರು.

ಜನ್ಮ ತಂತ್ರಾಂಶದಲ್ಲಿ ದಾಖಲಿಸಿ:

ಈ ಜನ್ಮ ತಂತ್ರಾಂಶದ ಆನ್ಲೈನ್ ಅಪ್ಲಿಕೇಶನ್ ಅಲ್ಲಿ ಎಂಟ್ರಿ ಮಾಡಿದ ಮಾಹಿತಿಗಳನ್ನು ಆಸ್ಪತ್ರೆಯ ವೈದ್ಯಾಧಿಕಾರಿಗಳು ಪರಿಶೀಲಿಸಿ ಅನುಮೋದಿಸಬೇಕು. ನೋಂದಣಾಧಿಕಾರಿ, ಉಪನೋಂದಣಾಧಿಕಾರಿಗಳು ನಿರ್ವಹಿಸುವ ಕೆಲಸಗಳನ್ನು ವೈದ್ಯಾಧಿಕಾರಿಗಳು ಸಹ ನಿರ್ವಹಿಸುತ್ತಾರೆ. ಮಾಹಿತಿಗಳು ಅನುಮೋದಿಸಿ ಡಿಜಿಟಲ್ ಸಹಿ ನಂತರ ಜನನ ಮರಣ ಪ್ರಮಾಣ ಪತ್ರಗಳನ್ನು ಸೃಜಿಸಿ ಸಂಬಂಧ ಪಟ್ಟ ವಿಷಯ ನಿರ್ವಾಹಕರು ವಿತರಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಲಕ್ಷ್ಮಿಕಾಂತ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾಂಖ್ಯಿಕ ‌ಇಲಾಖೆಯ ತಾಲೂಕು ಮಟ್ಟದ ಗಣತಿದಾರರು ಮತ್ತು ಸಾಂಖ್ಯಿಕ ನಿರೀಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು.

ಬಾಕ್ಸ್‌......

ಗ್ರಾಪಂ ಕಾರ್ಯದರ್ಶಿಗಳಿಗೆ ಜನನ-ಮರಣ ನೋಂದಣಿ ಅಧಿಕಾರ:

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಗ್ರಾಪಂ ಕಾರ್ಯದರ್ಶಿಗಳನ್ನು ಸರ್ಕಾರ ಜನನ ಮರಣ ಉಪನೋಂದನಾಧಿಕಾರಿಗಳಾಗಿ ನೇಮಿಸಿದೆ. ಮುಂದಿನ ದಿನಗಳಲ್ಲಿ ಜನನ ಮರಣ ಉಪನೋಂದನಾಧಿಕಾರಿಗಳು ಘಟನೆ ಸಂಭವಿಸಿದ 30 ದಿನಗಳ ಒಳಗೆ ಈ ಜನ್ಮ ತಂತ್ರಾಂಶದಲ್ಲಿ ನೋಂದಾಯಿಸಿ ಯಾವುದೇ ತಪ್ಪಿಲ್ಲದೆ ಸಾರ್ವಜನಿಕರಿಗೆ ಪ್ರಮಾಣ ಪತ್ರಗಳನ್ನು ವಿಸ್ತರಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

27ಕೆಡಿಬಿಪಿ1-

ಬೆಂ.ಗ್ರಾ. ಜಿಲ್ಲಾಡಳಿತ ಭವನದಲ್ಲಿ ಜನನ-ಮರಣ ನೊಂದಣಿ ಜಿಲ್ಲಾ ಮಟ್ಟದ ಸಮನ್ವಯ ಸಭೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯಿತು.