ಸಾರಾಂಶ
ಗದಗ: ಪಂಚ ಗ್ಯಾರಂಟಿ ಯೋಜನೆಗಳು ಬಡ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಸದುದ್ದೇಶ ಹೊಂದಿದ್ದು, ಈ ಯೋಜನೆಗಳ ಅನುಷ್ಠಾನದಲ್ಲಿ ವಿನಾಕಾರಣ ವಿಳಂಬ ಸಹಿಸುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಎಚ್.ಕೆ. ಪಾಟೀಲ ತಿಳಿಸಿದರು.
ಮಂಗಳವಾರ ನಗರದ ಜಿಪಂ ಸಭಾಭವನದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನವು ಆಡಳಿತ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬಹುದೊಡ್ಡ ಬದಲಾವಣೆಯಾಗಿದೆ. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನವು ಬಡಜನರ ಸೇವೆ ಮಾಡಲು ಒದಗಿಸಿದ ಬಹುದೊಡ್ಡ ಅವಕಾಶವಾಗಿದೆ. ಪಂಚಗ್ಯಾರಂಟಿ ಯೋಜನೆಯ ಮಹತ್ವವನ್ನು ಅರ್ಥೈಸಿಕೊಳ್ಳುವುದು ಹಾಗೂ ಅವುಗಳ ಪೂರ್ಣ ಪ್ರಮಾಣದ ಅನುಷ್ಠಾನಕ್ಕಾಗಿ ಇಲಾಖಾಧಿಕಾರಿಗಳು ಜವಾಬ್ದಾರಿಯಿಂದ ಹಾಗೂ ಆಸಕ್ತಿಯಿಂದ ಕಾರ್ಯನಿರ್ವಹಿಸುವುದು ಮುಖ್ಯವಾಗಿದೆ.
ಬಡಜನರ ಸೇವೆ ಪವಿತ್ರ ಕೆಲಸವಾಗಿದ್ದು ಯೋಜನೆಗಳ ಸೌಲಭ್ಯಗಳು ನಿಗದಿತ ಅವಧಿಯಲ್ಲಿಯೇ ತಲುಪಿದಾಗ ಅದರ ಸಾರ್ಥಕತೆ ಕಾಣಬಹುದು. ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಪ್ರಾಮಾಣಿಕತೆಯಿರಬೇಕು. ಆಡಳಿತದಲ್ಲಿ ಪಾರದರ್ಶಕತೆ ಅವಶ್ಯವಾಗಿದೆ ಎಂದರು.ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳ ಗುರಿ ಶೇ. 99.5ರಷ್ಟು ತಲುಪಿದ್ದು, ಜಿಲ್ಲೆಯು ಶೇ. 100ರಷ್ಟು ಗುರಿ ಸಾಧಿಸಿ ರಾಜ್ಯದಲ್ಲಿ ಅಗ್ರಸ್ಥಾನ ಪಡೆಯಬೇಕು. ಅಧಿಕಾರಿಗಳು ಈ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಿ ಇದನ್ನು ಯಶಸ್ವಿಗೊಳಿಸಬೇಕು ಎಂದರು.
ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನಾ ಸಮಿತಿ ಉಪಾಧ್ಯಕ್ಷೆ ನೀಲಮ್ಮ ಬೋಳನವರ, ಸದಸ್ಯ ಈರಣ್ಣ ಹುನಸಿಕಟ್ಟಿ, ಷರೀಫ್ ಬಿಳೆಯಲಿ, ತಾಲೂಕು ಗ್ಯಾರಂಟಿ ಸದಸ್ಯ ದಯಾನಂದ ಪವಾರ, ಶಂಭು ಕಾಳೆ, ಸಾವಿತ್ರಿ ಹೂಗಾರ, ಸಂಗು ಕೆರಕಲಕಟ್ಟಿ, ಎನ್.ಬಿ. ದೇಸಾಯಿ ಸಂಗಮೇಶ ಹಾದಿಮನಿ, ರಮೇಶ ಹೊನ್ನಿನಾಯ್ಕರ್, ದೇವರೆಡ್ಡಿ ತಿರ್ಲಾಪುರ, ಮಲ್ಲಪ್ಪ ದಂಡಿನ, ಚಿಂಚಲಿ, ಗಣೇಶ ಸಿಂಗ್ ಮಿಟಾಡೆ, ಮಲ್ಲಪ್ಪ ಎಚ್. ಬಾರಕೇರ, ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ತಾಪಂ ಇಒ ಮಲ್ಲಯ್ಯ ಕೆ. ಹಾಗೂ ಪಂಚ ಗ್ಯಾರಂಟಿ ಯೋಜನೆಗೆ ಸಂಬಂಧಿತ ಅಧಿಕಾರಿಗಳು ಇದ್ದರು.;Resize=(128,128))
;Resize=(128,128))
;Resize=(128,128))