ಸಾರಾಂಶ
ಡಿಸೆಂಬರ್ ಮಧ್ಯದ ವರೆಗೂ ಮಳೆ ಸುರಿಯುತ್ತಿದ್ದ ಕಾರಣ ನದಿಗಳೆರಡರಲ್ಲೂ ನೀರಿನ ಹರಿವು ಹೆಚ್ಚಿತ್ತು. ಈ ಕಾರಣಕ್ಕೆ ಸಾಮಾನ್ಯವಾಗಿ ನವೆಂಬರ್‌ನಲ್ಲಿ ಬಿಳಿಯೂರು ಅಣೆಕಟ್ಟಿಗೆ ಗೇಟು ಅಳವಡಿಸಬೇಕಾದ ಪ್ರಕ್ರಿಯೆಯನ್ನು ಮುಂದೂಡಲಾಗಿತ್ತು. ಇದೀಗ ನದಿಯಲ್ಲಿ ನೀರಿನ ಪ್ರಮಾಣ ಗಣನೀಯ ಇಳಿಕೆ ಕಾಣಿಸಲಾರಂಭಿಸಿದ್ದು, ಡಿಸೆಂಬರ್ ಕೊನೆಯ ವಾರದಲ್ಲಿ ಅಣೆಕಟ್ಟಿಗೆ ಗೇಟು ಅಳವಡಿಸಿ ನೀರು ಸಂಗ್ರಹಿಸುವ ಕಾರ್ಯಕ್ಕೆ ಸಣ್ಣ ನಿರಾವರಿ ಇಲಾಖೆ ಮುಂದಾಗಲಿದೆ.
ಕನ್ನಡಪ್ರಭ ವಾರ್ತೆ ಉಪ್ಪಿನಂಗಡಿ
ಈ ಬಾರಿ ಸುದೀರ್ಘ ಮಳೆ ಸುರಿದ ಕಾರಣ ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳಲ್ಲಿ ನೀರಿನ ಹರಿವು ತೃಪ್ತಿದಾಯವಾಗಿದೆ. ಬಿಳಿಯೂರು ನೇತ್ರಾವತಿ ನದಿಯ ಅಣೆಕಟ್ಟಿಗೆ ಗೇಟು ಅಳವಡಿಸುವ ಕಾರ್ಯ ವಿಳಂಬವಾಗಿದ್ದು, ನದಿ ಪಾತ್ರದ ಕೃಷಿಕರಿಗೆ ನಿರಾಸೆಯುಂಟಾಗಿದೆ.ಡಿಸೆಂಬರ್ ಮಧ್ಯದ ವರೆಗೂ ಮಳೆ ಸುರಿಯುತ್ತಿದ್ದ ಕಾರಣ ನದಿಗಳೆರಡರಲ್ಲೂ ನೀರಿನ ಹರಿವು ಹೆಚ್ಚಿತ್ತು. ಈ ಕಾರಣಕ್ಕೆ ಸಾಮಾನ್ಯವಾಗಿ ನವೆಂಬರ್‌ನಲ್ಲಿ ಬಿಳಿಯೂರು ಅಣೆಕಟ್ಟಿಗೆ ಗೇಟು ಅಳವಡಿಸಬೇಕಾದ ಪ್ರಕ್ರಿಯೆಯನ್ನು ಮುಂದೂಡಲಾಗಿತ್ತು. ಇದೀಗ ನದಿಯಲ್ಲಿ ನೀರಿನ ಪ್ರಮಾಣ ಗಣನೀಯ ಇಳಿಕೆ ಕಾಣಿಸಲಾರಂಭಿಸಿದ್ದು, ಡಿಸೆಂಬರ್ ಕೊನೆಯ ವಾರದಲ್ಲಿ ಅಣೆಕಟ್ಟಿಗೆ ಗೇಟು ಅಳವಡಿಸಿ ನೀರು ಸಂಗ್ರಹಿಸುವ ಕಾರ್ಯಕ್ಕೆ ಸಣ್ಣ ನಿರಾವರಿ ಇಲಾಖೆ ಮುಂದಾಗಲಿದೆ.ಈ ಮಧ್ಯೆ ಮತ್ತೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡು ಮಳೆ ಸುರಿಯುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಮಳೆ ಸುರಿಯತೊಡಗಿದರೆ ಅಣೆಕಟ್ಟಿಗೆ ಗೇಟು ಅಳವಡಿಸುವ ಕಾರ್ಯದಲ್ಲಿ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.ನದಿಯಲ್ಲಿ ನೀರಿನ ಪ್ರಮಾಣ ಇಳಿಯುತ್ತಿದ್ದು, ಯಾವುದೇ ಸಮಯದಲ್ಲಿ ಗೇಟು ಅಳವಡಿಸುವ ಬಗ್ಗೆ ನಿರ್ಧಾರ ತಳೆಯಲಾಗುವುದು. ಮಳೆ ಸುರಿಯದೇ ಇದ್ದರೆ ಡಿಸೆಂಬರ್ ಕೊನೆಯ ವಾರದಲ್ಲೇ ಅಣೆಕಟ್ಟಿಗೆ ಗೇಟು ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಣ್ಣ ನಿರಾವರಿ ಇಲಾಖೆಯ ಸಹಾಯಕ ಕಾರ್ಯನಿರ್ವಹಕ ಎಂಜಿನಿಯರ್ ಶಿವಪ್ರಸನ್ನ ತಿಳಿಸಿದ್ದಾರೆ.