ಗ್ರಾಮೀಣ ಭಾಗದಲ್ಲಿ ಏನೇ ಸಮಸ್ಯೆಗಳಿದ್ದರೂ ಜನಸ್ಪಂದನ ಕಾರ್ಯಕ್ರಮಗಳಲ್ಲಿ ಲಿಖಿತ ರೂಪದಲ್ಲಿ ನನಗೆ ದೂರು ಸಲ್ಲಿಸಿದರೆ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳದಲ್ಲೇ ಸಮಸ್ಯೆಗಳನ್ನು ಬಗೆಹರಿಸಿಕೊಡುತ್ತೇನೆ.
ತಾಯಲೂರು ಗ್ರಾಪಂ ವ್ಯಾಪ್ತಿ ಗ್ರಾಮಸ್ಥರು ದೂರುಗಳು ಸಲ್ಲಿಸಿದ ಹಿನ್ನೆಲೆ
ಕನ್ನಡಪ್ರಭ ವಾರ್ತೆ ಮುಳಬಾಗಿಲುತಾಲೂಕಿನ ತಾಯಲೂರು ಗ್ರಾಪಂ ವ್ಯಾಪ್ತಿಯ ಹಳ್ಳಿಗಳಿಂದ ಸಮಸ್ಯೆಗಳ ಬಗ್ಗೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ದೂರುಗಳು ಸಲ್ಲಿಸಿದ ಹಿನ್ನೆಲೆಯಲ್ಲಿ ಶಾಸಕ ಸಮೃದ್ಧಿ ವಿ.ಮಂಜುನಾಥ್ ಪಿಡಿಒ ಶ್ರೀನಿವಾಸ್ ರೆಡ್ಡಿ ಮೇಲೆ ಗರಂ ಆದ ಘಟನೆ ನಡೆಯಿತು.ತಾಯಲೂರಿನಲ್ಲಿ ನಮ್ಮ ನಡೆ ಹಳ್ಳಿ ಕಡೆ ಜನಸ್ಪಂದನ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ವಿವಿಧ ಗ್ರಾಮಸ್ಥರು ಪಿಡಿಒ ವಿರುದ್ಧ ದೂರುಗಳನ್ನು ಸಲ್ಲಿಸಿ ಯಾವುದೇ ಕೆಲಸ ಕಾರ್ಯಗಳನ್ನು ಸಕಾಲಕ್ಕೆ ಮಾಡಿಕೊಡುತ್ತಿಲ್ಲ ಎಂದು ದೂರಿದ್ದರಿಂದ ವೇದಿಕೆಯಲ್ಲೇ ಕೆಂಡಮಂಡಲವಾದ ಶಾಸಕರು ಪಿಡಿಒರನ್ನು ತೀವ್ರ ತರಾಟೆ ತೆಗೆದುಕೊಂಡರು. ಮುಂದೆ ಇದೇ ರೀತಿ ನಿನ್ನ ವಿರುದ್ಧ ಆರೋಪಗಳು ಬಂದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದಿರಲ್ಲದೆ ಇನ್ನಾದರೂ ಜನರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಬೇಕೆಂದು ತಾಕೀತು ಮಾಡಿದರು.ಶಾಸಕ ಸಮೃದ್ದಿ ಮಂಜುನಾಥ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಏನೇ ಸಮಸ್ಯೆಗಳಿದ್ದರೂ ಜನಸ್ಪಂದನ ಕಾರ್ಯಕ್ರಮಗಳಲ್ಲಿ ಲಿಖಿತ ರೂಪದಲ್ಲಿ ನನಗೆ ದೂರು ಸಲ್ಲಿಸಿದರೆ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳದಲ್ಲೇ ಸಮಸ್ಯೆಗಳನ್ನು ಬಗೆಹರಿಸಿಕೊಡುತ್ತೇನೆ. ಜೊತೆಗೆ ಹಂತ ಹಂತವಾಗಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದರು.ಮಲ್ಲನಾಯಕನಹಳ್ಳಿ ತಾಯಲೂರು ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ಸ್ಮಶಾನಗಳ ಒತ್ತುವರಿ ಕುರಿತು ಹೆಚ್ಚಿನ ದೂರುಗಳು ಸಲ್ಲಿಕೆಯಾಗಿದ್ದು, ಈ ಸಂಬಂಧ ಜಿಲ್ಲಾಧಿಕಾರಿರೊಂದಿಗೆ ಚರ್ಚಿಸಿ ಹೆಚ್ಚುವರೆಯಾಗಿ ಸರ್ವೇಯರಗಳನ್ನು ನಿಯೋಜನೆ ಮಾಡಿಕೊಂಡು ಸ್ಮಶಾನಗಳ ಒತ್ತುವರಿ ತೆರವು ಕಾರ್ಯ ಪ್ರಾರಂಭಿಸಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.ತಾಲೂಕಿನ ೩೦ ಗ್ರಾಪಂ ಕೇಂದ್ರ ಸ್ಥಾನಗಳಲ್ಲಿ ಹಂತ ಹಂತವಾಗಿ ಜನಸ್ಪಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಈ ಸಂಬಂಧ ಪಿಡಿಒಗಳು ಮತ್ತು ಕಂದಾಯ ನಿರೀಕ್ಷಕರು ಗ್ರಾಮ ಲೆಕ್ಕಾಧಿಕಾರಿ ಕರಪತ್ರಗಳನ್ನು ಮನೆಮನೆಗೂ ಹಂಚಿ ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸಬೇಕು. ಜೊತೆಗೆ ಏನೇ ಸಮಸ್ಯೆಗಳಿದ್ದರೂ ಅಧಿಕಾರಿಗಳು ಬಗೆಹರಿಸಬೇಕು, ನನ್ನವರಿಗೂ ದೂರುಗಳು ಬರದಂತೆ ಎಚ್ಚರಿಕೆ ವಹಿಸಬೇಕೆಂದು ತಾಕೀತು ಮಾಡಿದರು.ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ೭೮ ಅರ್ಜಿಗಳು ಸಲ್ಲಿಕೆ ಆಯಿತು. ತಹಸೀಲ್ದಾರ್ ವಿ.ಗೀತಾ, ತಾಪಂ ಇಒ ಬಾಬು ಎನ್.ವಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ನಲ್ಲೂರು ರಘುಪತಿ ರೆಡ್ಡಿ, ಮುಖಂಡರಾದ ಟಿ.ಎಸ್.ರಮೇಶ್, ಗೊಲ್ಲಹಳ್ಳಿ ಜಗದೀಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಗ್ರಾಮಸ್ಥರು ಹಾಜರಿದ್ದರು೬mbಟ ಠಿh೧ ಮುಳಬಾಗಿಲು ತಾಲೂಕಿನ ತಾಯಲೂರು ಗ್ರಾಮದಲ್ಲಿ ಶಾಸಕ ಸಮೃದ್ಧಿ ವಿ ಮಂಜುನಾಥ್ ಜನಸ್ಪಂದನ ಕಾರ್ಯಕ್ರಮದಲ್ಲಿ ಗ್ರಾಮಸ್ಥರಿಂದ ಸಮಸ್ಯೆಗಳ ಕುರಿತು ಪಿಡಿಒಗೆ ತರಾಟೆಗೆ ತೆಗೆದುಕೊಳ್ಳುತ್ತಿರುವುದು.