ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಸರ್ಪೇಸ್ ಕಾಯ್ದೆಯಿಂದ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆ ಕುರಿತು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದ ನಿಯೋಗ ಮಾಜಿ ಪ್ರಧಾನಿ ದೇವೇಗೌಡ ಸಮಕ್ಷಮದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಭೇಟಿ ಮಾಡಿ ಚರ್ಚಿಸಲಾಗಿದೆ. ತಕ್ಷಣ ಆನ್‌ಲೈನ್ ಹರಾಜು ಪ್ರಕ್ರಿಯೆ ನಿಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ಮಾಲಾ ಸೀತಾರಾಮನ್ ಸೂಚಿಸಿದ್ದಾರೆ.ಸಂಸದರಾದ ಕೋಟಾ ಶ್ರೀನಿವಾಸ್ ಪೂಜಾರಿ, ವಿಶ್ವೇಶ್ವರ ಹೆಗ್ಡೆ ಕಾಗೇರಿ, ಡಾ ಮಂಜುನಾಥ್, ಮಲ್ಲೇಶ್ ನಿಯೋಗ ದೇವೇಗೌರ ನೇತೃತ್ವದಲ್ಲಿ ಸಂಸತ್‌ನಲ್ಲಿ ನಿರ್ಮಾಲಾ ಸೀತಾರಾಮನ್ ಭೇಟಿ ಮಾಡಿ ಕಾಫಿ ಬೆಳೆಗಾರರಿಗೆ ಉಂಟಾಗುತ್ತಿರುವ ಸಮಸ್ಯೆ ಬಗ್ಗೆ ಚರ್ಚೆ ನಡೆಸಲಾಯಿತು.
ಕಾಫಿ ಬೆಳೆಗಾರರ ಸಮಸ್ಯೆಯನ್ನು ಕೆಲ ಮಧ್ಯವರ್ತಿಗಳು ದುರುಪಯೋಗಪಡಿಸಿಕೊಂಡು ವಿದೇಶಗಳಲ್ಲಿ ಆನ್ ಲೈನ್ ಮೂಲಕ ಖರೀದಿಸಿ ಬಡ ರೈತರ ಭೂಮಿ ಕಬಳಿಸುತ್ತಿದ್ದಾರೆ. ಇದಕ್ಕೆ ಕೆಲವಡೆ ಬ್ಯಾಂಕ್ ಅಧಿಕಾರಿಗಳ ಸಹಕಾರ ನೀಡುತ್ತಿದ್ದಾರೆ ಎಂಬ ದೂರುಗಳಿವೆ.ಕಾಫಿ ಬೆಳೆಗಾರರಲ್ಲಿ ಶೇ.90ಕ್ಕೂ ಕಡಿಮೆ ರೈತರು ಸಣ್ಣ ಹಿಡುವಳಿದಾರರಾಗಿದ್ದು, ಬಹುತೇಕ ಮಂದಿಗೆ ತಮ್ಮ ಭೂಮಿ ಸದರಿ ಕಾಯ್ದೆಯಿಂದ ಆನ್ ಲೈನ್ ಮೂಲಕ ಹರಾಜಾಗುತ್ತಿರುವುದು ಅರಿವಿಗೆ ಬರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸರ್ಫೇಸಿ ಕಾಯ್ದೆ ವಿರಹಿತಗೊಳಿಸಬೇಕು ಮತ್ತು ಆನ್ ಲೈನ್ ಮೂಲಕ ಕಾಫಿ ಬೆಳೆ ಹರಾಜು ಹಾಕುವುದನ್ನು ತಡಗಟ್ಟಬೇಕೆಂದು ಮನವಿ ಮಾಡಿದರು.
ಈ ಬಗ್ಗೆ ಪರಿಶೀಲಿಸುವುದಾಗಿ ಹೇಳಿದ ನಿರ್ಮಲಾ ಸೀತಾರಾಮನ್ , ತುರ್ತಾಗಿ ಕಾಫಿ ಬೆಳೆ ಸಾಲಗಾರರ ತೋಟವನ್ನು ಆನ್ ಲೈನ್ ಹರಾಜು ನಿಲ್ಲಿಸಲು ಆದೇಶ ನೀಡುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.ಫೋಟೋ:
ಕಾಫಿ ಬೆಳೆಗಾರರ ಸಮಸ್ಯೆ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸಂಸದರಾದ ಕೋಟಾ ಶ್ರೀನಿವಾಸ್ ಪೂಜಾರಿ ನೇತೃತ್ವದ ನಿಯೋಗ ಮಾಜಿ ಪ್ರಧಾನಿ ದೇವೇಗೌಡರ ಸಮಕ್ಷಮದಲ್ಲಿ ಭೇಟಿ ಮಾಡಿ ಚರ್ಚಿಸಲಾಯಿತು.